Tuesday, September 22, 2026
Tuesday, September 22, 2026

ಜನರ ನಿರೀಕ್ಷೆ ಹುಸಿ ಮಾಡಿದ ಕೇಂದ್ರ ಬಜೆಟ್: ಉಡುಪಿ ಜಿಲ್ಲಾ ಕಾಂಗ್ರೆಸ್

ಜನರ ನಿರೀಕ್ಷೆ ಹುಸಿ ಮಾಡಿದ ಕೇಂದ್ರ ಬಜೆಟ್: ಉಡುಪಿ ಜಿಲ್ಲಾ ಕಾಂಗ್ರೆಸ್

Date:

ಉಡುಪಿ: ಅನ್‌ ಬ್ಲೆಂಡೆಡ್ ತೈಲ ಮೇಲೆ ಲೀಟರಿಗೆ ೨ ರೂಪಾಯಿ ಸುಂಕ ಹೇರಿಕೆಯಿಂದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯಾಗಲಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಹೇಳಿದೆ. ದುಡಿಯುವ ಮತ್ತು ಮಧ್ಯಮ ವರ್ಗಕ್ಕೆ ಯಾವುದೇ ಯೋಜನೆ ರೂಪಿಸಿಲ್ಲ. ಆದಾಯ ತೆರಿಗೆಯಲ್ಲಿ ವಿನಾಯಿತಿ ಇಲ್ಲದೆ ಯಥಾಸ್ಥಿತಿಯನ್ನು ಕಾಯ್ದುಕೊಂಡಿರುವುದು ಮಧ್ಯಮ ವರ್ಗವನ್ನು ನಿರಾಶೆಗೊಳಿಸಿದೆ.

ಆಹಾರ ಭದ್ರತೆ ಮೇಲಿನ ಅನುದಾನ ಇಳಿಕೆ, ಒಂದೆಡೆ ಡಿಜಿಟಲ್‌ಗೆ ಉತ್ತೇಜನ ನೀಡುತ್ತಾ ಇನ್ನೊಂದೆಡೆ ಡಿಜಿಟಲ್ ಸೇವೆಗಳಿಗೆ ತೆರಿಗೆ ಹೇರಿಕೆ ಸರಕಾರದ ಗೊಂದಲಕ್ಕೆ ಸಾಕ್ಷಿ. ಸರಕಾರಿ ಸ್ವಾಮ್ಯ ಸಂಸ್ಥೆಗಳ ಬಂಡವಾಳ ಹಿಂತೆಗೆತ ಹಾಗೂ ಹಲವಾರು ಯೋಜನೆಗಳಿಗೆ ಅನುದಾನ ಕಡಿತ ಮಾಡಲಾಗಿದೆ.

ಬಜೆಟ್‌ನಲ್ಲಿ ರಾಜ್ಯಕ್ಕೆ ಯಾವುದೇ ಕೊಡುಗೆ ನೀಡದೆ ದಕ್ಷಿಣ ಭಾರತವನ್ನೇ ಕಡೆಗಣಿಸಲಾಗಿದೆ. ಬಜೆಟ್ ಹಣವನ್ನು ಹಂಚಿಕೆ ಮಾಡುವುದನ್ನು ಬಿಟ್ಟರೆ ಯಾವುದೇ ಉದ್ಯೋಗ ಸೃಷ್ಟಿಗೆ ಯೋಜನೆಗಳನ್ನು ರೂಪಿಸಿಲ್ಲ ಹಾಗೂ ಅಭಿವೃದ್ಧಿಗೆ ಪೂರಕವಾಗಿ
ಯಾವುದೇ ಯೋಜನೆಗಳಿಗೆ ಅನುದಾನ ಬಿಡುಗಡೆ ಮಾಡಿಲ್ಲ.

ಜನೋಪಯೋಗಿ ವಸ್ತುಗಳ ಮೇಲಿನ ಸಬ್ಸಿಡಿ ಕಡಿತಗೊಳಿಸಿ ಜನರ ಮೇಲೆ ಹೆಚ್ಚಿನ ಹೊರೆ ಹೊರೆಸಿದಂತಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಮತ್ತು ಜಿಲ್ಲಾ ಕಾಂಗ್ರೆಸ್ ವಕ್ತಾರ ಭಾಸ್ಕರ್ ರಾವ್ ಕಿದಿಯೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಂದಾಪುರದ ಇಂಪನಾ ಆರ್. ಅವರಿಗೆ ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ಕುಂದಾಪುರ, ಸೆ.22: ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ...

ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರಕ್ಕೆ ಶೈಕ್ಷಣಿಕ ಭೇಟಿ

ಕುಂದಾಪುರ, ಸೆ.22: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು,...

ಎನ್ಎಸ್ಎಸ್ ಸ್ವಯಂಸೇವಕರಿಂದ ತ್ರಾಸಿ ಬೀಚ್ ಕ್ಲೀನಿಂಗ್

ಕುಂದಾಪುರ, ಸೆ.22: ಅಂತಾರಾಷ್ಟ್ರೀಯ ಕೊಸ್ಟಲ್ ಕ್ಲೀನ್ ಆಫ್ ಡೇ ಆಚರಣೆ ಪ್ರಯುಕ್ತ...
error: Content is protected !!