Tuesday, September 22, 2026
Tuesday, September 22, 2026

ಅಭಿವೃದ್ಧಿಗೆ ಉತ್ತೇಜನ ನೀಡುವ ಬಜೆಟ್: ವೇದವ್ಯಾಸ ಕಾಮತ್

ಅಭಿವೃದ್ಧಿಗೆ ಉತ್ತೇಜನ ನೀಡುವ ಬಜೆಟ್: ವೇದವ್ಯಾಸ ಕಾಮತ್

Date:

ಮಂಗಳೂರು: ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಮಂಡಿಸಿದ 2022- 23ನೇ ಸಾಲಿನ ಕೇಂದ್ರ ಬಜೆಟ್ ಅಭಿವೃದ್ಧಿಗೆ ಹೆಚ್ಚಿನ ಉತ್ತೇಜನ ನೀಡುವ ಜನಪರವಾದ ಬಜೆಟ್ ಆಗಿದೆ ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ. ವೇದವ್ಯಾಸ್ ಕಾಮತ್ ಶ್ಲಾಘಿಸಿದ್ದಾರೆ.

ಕೋವಿಡ್ ಸಂಕಷ್ಟದ ನಡುವೆಯೂ ಬಡ ಹಾಗೂ ಮಧ್ಯಮ ವರ್ಗಕ್ಕೆ ಹೆಚ್ಚಿನ ಅನುಕೂಲ ಕಲ್ಪಿಸಿದ್ದು, ಎಲ್ಲ ವರ್ಗದ ಜನರು ಮೆಚ್ಚುವಂತಹ ಬಜೆಟ್ ನೀಡಿದ್ದಾರೆ. ಬಡವರ ಬಗ್ಗೆ ವಿಶೇಷ ಕಾಳಜಿಯಿಂದ ಆವಾಸ್ ಯೋಜನೆಯಡಿ 80 ಲಕ್ಷ ಮನೆಗಳ ನಿರ್ಮಾಣ ಘೋಷಿಸಿದ್ದಾರೆ.

ಕೃಷಿಗೆ ವಿಶೇಷ ಆದ್ಯತೆ ನೀಡಲಾಗಿದ್ದು, ಸಾವಯವ ಕೃಷಿಯನ್ನು ಉತ್ತೇಜಿಸಲು ನಿರ್ಧರಿಸಿರುವುದು ಉತ್ತಮ ಬೆಳವಣಿಗೆ. ಅಲ್ಲದೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ರೈತರಿಗೆ ಹೆಚ್ಚಿನ ಸಹಕಾರ ದೊರೆಯಲಿದೆ. ಚಿನ್ನ, ವಜ್ರಾಭರಣ, ಕೃಷಿ ಉಪಕರಣ, ಮೊಬೈಲ್, ಬಟ್ಟೆ, ಚರ್ಮದ ಉತ್ಪನ್ನಗಳ ಮೇಲಿನ ತೆರಿಗೆ ಇಳಿಕೆ ಮಾಡುವ ಮೂಲಕ ಮಧ್ಯಮ ವರ್ಗದ ಮೇಲಿನ ಹೊರೆಯನ್ನು ತಗ್ಗಿಸಿದ್ದಾರೆ ಎಂದು ಶಾಸಕ ಕಾಮತ್ ಮೆಚ್ಚುಗೆ ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರಕ್ಕೆ ಶೈಕ್ಷಣಿಕ ಭೇಟಿ

ಕುಂದಾಪುರ, ಸೆ.22: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು,...

ಎನ್ಎಸ್ಎಸ್ ಸ್ವಯಂಸೇವಕರಿಂದ ತ್ರಾಸಿ ಬೀಚ್ ಕ್ಲೀನಿಂಗ್

ಕುಂದಾಪುರ, ಸೆ.22: ಅಂತಾರಾಷ್ಟ್ರೀಯ ಕೊಸ್ಟಲ್ ಕ್ಲೀನ್ ಆಫ್ ಡೇ ಆಚರಣೆ ಪ್ರಯುಕ್ತ...

ಸೆ. 23(ನಾಳೆ) ಉಡುಪಿ ನಗರದಲ್ಲಿ ಕಸ ಸಂಗ್ರಹಣೆಯಲ್ಲಿ ವ್ಯತ್ಯಯ

ಉಡುಪಿ, ಸೆ.22: ನಗರದ ಪುರಭವನದಲ್ಲಿ ಸೆಪ್ಟಂಬರ್ 23 ರಂದು ಪೌರಕಾರ್ಮಿಕರ ದಿನಾಚರಣೆ...

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟನೆ

ಉಡುಪಿ, ಸೆ.22: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಯುವ ಸಬಲೀಕರಣ ಮತ್ತು...
error: Content is protected !!