Tuesday, September 8, 2026
Tuesday, September 8, 2026

ಕಾರ್ಕಳ ಜ್ಞಾನಸುಧಾ: ರಾಷ್ಟ್ರೀಯ ಗಣಿತ ದಿನಾಚರಣೆ

ಕಾರ್ಕಳ ಜ್ಞಾನಸುಧಾ: ರಾಷ್ಟ್ರೀಯ ಗಣಿತ ದಿನಾಚರಣೆ

Date:

ಗಣಿತನಗರ, ಡಿ.28: ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ಗಣಿತನಗರ ಇಲ್ಲಿ ಗಣಿತ ತಜ್ಞ ಶ್ರೀನಿವಾಸ್ ರಾಮಾನುಜನ್ ಜನ್ಮದಿನವಾದ ರಾಷ್ಟ್ರೀಯ ಗಣಿತ ದಿನವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಇದೇ ಸಂದರ್ಭ ನಿವೃತ್ತ ಯೋಧ ಪ್ರವೀಣ್ ಶೆಟ್ಟಿ ಮತ್ತು ಭಾರತದ ವಾಲಿಬಾಲ್ ತಂಡದ ನಾಯಕಿ ಶಗುನ್ ವರ್ಮ ಹೆಗ್ಡೆಯವರನ್ನು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಪರವಾಗಿ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ವತಿಯಿಂದ ಗೌರವಿಸಲಾಯಿತು. ನಿವೃತ್ತ ಯೋಧ ಪ್ರವೀಣ್ ಶೆಟ್ಟಿ ಮಾತನಾಡಿ ಯಾರು ತಂದೆ–ತಾಯಿ, ಗುರು-ಹಿರಿಯರನ್ನು ಗೌರವಿಸುವವರು ದೇಶವನ್ನು, ವೀರಯೋಧರನ್ನು ಗೌರವಿಸುತ್ತಾರೆ. ವಿದ್ಯಾರ್ಥಿದೆಸೆಯಲ್ಲಿಯೇ ದೇಶಾಭಿಮಾನ ಬೆಳೆಸಬೇಕೆಂದು ಕರೆಕೊಟ್ಟರು.

ಗಣಿತ ದಿನಾಚರಣೆಯ ಶುಭಸಂದರ್ಭ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ, ಕಾರ್ಕಳ ಶ್ರೀ ಭುವನೇಂದ್ರ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಪ್ರೊ. ಬಿ ಪದ್ಮನಾಭ ಗೌಡರವರು ಮಾತನಾಡಿ, ಭಾರತದ ಖ್ಯಾತ ಗಣಿತಶಾಸ್ತ್ರಜ್ಞರಾದ ಆರ್ಯಭಟ, ಬ್ರಹ್ಮಗುಪ್ತ, ಶ್ರೀಧರ, ಭಾಸ್ಕರ-2, ಸಿ.ಆರ್ ರಾವ್, ಡಾ.ಕಪ್ರೇಕರ್, ಹರಿಶ್ಚಂದ್ರ, ನರೇಂದ್ರ ಕರ್ಮರ್‌ಕರ್ ಇವರು ಗಣಿತಶಾಸ್ತ್ರಕ್ಕೆ ಅಪೂರ್ವವಾದ ಕೊಡುಗೆ ನೀಡಿದ್ದಾರೆ. ಶ್ರೀನಿವಾಸ ರಾಮಾನುಜನ್ ಭಾರತದ ಮಹಾನ್ ಗಣಿತ ಶಾಸ್ತ್ರಜ್ಞರಾಗಿದ್ದು ಸಂಖ್ಯಾ ಸಿದ್ಧಾಂತ
(ನಂಬರ್ ಥಿಯರಿ), ಅನಂತ ಸರಣಿ (ಇನ್ಫಿನಿಟಿ ಸಿರಿಸ್) ಮತ್ತು ಕಾರ್ಯಗಳ ವಿಶ್ಲೇಷಣೆ (ಅನಾಲಿಸಿಸ್ ಆಫ್ ಫಂಕ್ಷನ್ಸ್)ಯಲ್ಲಿ ಅಪೂರ್ವ ಕೊಡುಗೆಗಳನ್ನು ನೀಡಿದ್ದಾರೆ ಎಂದು ಅವರ ಜೀವನ ಸಾಧನೆಯನ್ನು ಸವಿಸ್ತಾರವಾಗಿ ತೆರೆದಿಟ್ಟರು.

ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿಯವರು ಪ್ರಾಸ್ತಾವಿಕ ನುಡಿಗಳಾನ್ನಾಡಿದರು. ಇದೇ ಸಂದರ್ಭ ಸಂಸ್ಥೆಯ ವತಿಯಿಂದ ಪ್ರೊ. ಬಿ.ಪದ್ಮನಾಭ ಗೌಡರವರನ್ನು ಸನ್ಮಾನಿಸಲಾಯಿತು. ಗಣಿತ ವಿಭಾಗದ ಬೋಧಕ ವರ್ಗವು ಜೊತೆಗೂಡಿದ್ದರು.

ಟ್ರಸ್ಟಿಗಳಾದ ಅನಿಲ್ ಕುಮಾರ್ ಜೈನ್, ವಿದ್ಯಾವತಿ ಎಸ್ ಶೆಟ್ಟಿ, ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಿ.ಇ.ಒ ಹಾಗೂ ಪ್ರಾಂಶುಪಾಲ ದಿನೇಶ್ ಎಂ ಕೊಡವೂರ್ ಉಪಸ್ಥಿತರಿದ್ದರು. ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಪ್ರಜ್ವಲ್ ಕುಲಾಲ್ ನಿರೂಪಿಸಿ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿಯಲ್ಲಿ ಕೇರಳದ ಸಾಂಸ್ಕೃತಿಕ ವೈಭವ: ಓಣಂ ಸಂಭ್ರಮಕ್ಕೆ ಮನಸೋತ ಕರಾವಳಿಗರು

ಉಡುಪಿ, ಸೆ.7: ಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ಮಹೋತ್ಸವದ ಸಂಭ್ರಮದ ನಡುವೆಯೇ...

ಕ್ರಿಯೇಟಿವ್ ಗುರುದೇವೋಭವ: ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಭಾಗಿ

ಕಾರ್ಕಳ, ಸೆ.7: ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಕ್ರಿಯೇಟಿವ್...

ಸರಸ್ವತಿ ವಿದ್ಯಾಲಯದಲ್ಲಿ ಇ ವೇಸ್ಟ್ ಮ್ಯಾನೇಜ್ಮೆಂಟ್ ಕಾರ್ಯಕ್ರಮ

ಗಂಗೊಳ್ಳಿ, ಸೆ.7: ಇ ತ್ಯಾಜ್ಯಗಳನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡುವುದು ಹೇಗೆ...

ತ್ರಿಶಾ ವಿದ್ಯಾ ಪಿಯು ಕಾಲೇಜು ಕಟಪಾಡಿ: ಕಾಪು ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಕಟಪಾಡಿ, ಸೆ.7: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ತ್ರಿಶಾ...
error: Content is protected !!