ಮಂಗಳೂರು, ನ.12: ನಗರದ ರಥಬೀದಿಯ ಡಾ. ಪಿ. ದಯಾನಂದ ಪೈ–ಪಿ. ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮೂರು ದಿನಗಳ ಉದ್ಯಮಶೀಲತಾ ಜಾಗೃತಿ ಹಾಗೂ ಕೌಶಲ್ಯಾಭಿವೃದ್ಧಿ ಕಾರ್ಯಾಗಾರದ ಉದ್ಘಾಟನಾ ಕಾರ್ಯಕ್ರಮ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್), ಧಾರವಾಡ ಮತ್ತು ಮಂಗಳೂರು, ಇದರ ಪ್ರಾಯೋಜಕತ್ವದಲ್ಲಿ ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶ (Iಕಿಂಅ), ಮತ್ತು ವೃತ್ತಿ ಮಾರ್ಗದರ್ಶನ ಮತ್ತು ಉದ್ಯೋಗ ಕೋಶಗಳು ಜಂಟಿಯಾಗಿ ಸಂಘಟಿಸಿದ್ದವು. ಕಾರ್ಯಕ್ರಮವನ್ನು ಉದ್ಘಾಟಿಸಿದ ಮಂಗಳೂರು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರದೀಪ್ ಡಿಸೋಜಾ ಅವರು ಮಾತನಾಡಿ, ಆರ್ಥಿಕ ಅಭಿವೃದ್ಧಿ ಹಾಗೂ ಸ್ವಾವಲಂಬಿ ಜೀವನಕ್ಕಾಗಿ ಉದ್ಯೋಗದ ಜೊತೆಗೆ ಕೌಶಲ್ಯವೂ ಅತ್ಯವಶ್ಯಕ. ಸ್ವ ಉದ್ಯೋಗ ಮತ್ತು ನವೋದ್ಯಮದ ಮಾರ್ಗದಲ್ಲಿ ವಿದ್ಯಾರ್ಥಿಗಳು ಮುನ್ನಡೆಯಬೇಕು ಎಂದು ಹೇಳಿದರು. ಸಿಡಾಕ್ ಉಪನಿರ್ದೇಶಕ ಶಿವಾನಂದ ಎಲಿಗಾರ್ ವಿದ್ಯಾರ್ಥಿಗಳಲ್ಲಿ ಉದ್ಯಮಶೀಲತೆಯ ಮನೋಭಾವ ಬೆಳೆಸುವುದೇ ಈ ಕಾರ್ಯಾಗಾರದ ಉದ್ದೇಶ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ. ಜಯಕರ ಭಂಡಾರಿ ಎಂ. ವಹಿಸಿ, ಉದ್ಯೋಗಾರ್ಥಿಗಳಾಗುವ ಬದಲು ಉದ್ಯೋಗದಾತರಾಗುವ ಬಗ್ಗೆ ವಿದ್ಯಾರ್ಥಿಗಳು ಯೋಚಿಸಬೆಕು. ಪ್ರಸಕ್ತ ಸನ್ನಿವೇಶದಲ್ಲಿ ವೈವಿದ್ಯಮಯ ಉದ್ಯಮಗಳನ್ನು ಪ್ರಾರಂಭಿಸಲು ವಿಪುಲ ಅವಕಾಶಗಳು ಮತ್ತು ಉತ್ತೇಜನಗಳು ಲಭ್ಯವಿದೆ ಎಂದು ಹೇಳಿದರು.
ಭಾಗ್ಯಶ್ರೀ ಮತ್ತು ಬಳಗದವರು ಪ್ರಾರ್ಥನೆ ಸಲ್ಲಿಸಿದರು. ಸಿಡಾಕ್ ಮಂಗಳೂರು ಘಟಕದ ಕೌನ್ಸಿಲರ್ ವಿದ್ಯಾ, ಐಕ್ಯೂಎಸಿ ಸಹ ಸಂಯೋಜಕಿ ಡಾ. ಜ್ಯೋತಿಪ್ರಿಯಾ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ. ದುಗ್ಗಪ್ಪ ಕಜೆಕಾರ್, ವೃತ್ತಿ ಮಾರ್ಗದರ್ಶನ ಮತ್ತು ಉದ್ಯೋಗ ಕೋಶದ ಸದಸ್ಯರಾದ ಪ್ರೊ. ವಸಂತಿ ಪಿ., ಶೋಭಾಮಣಿ ಮೊದಲಾದವರು ಉಪಸ್ಥಿತರಿದ್ದರು. ವೃತ್ತಿ ಮಾರ್ಗದರ್ಶನ ಮತ್ತು ಉದ್ಯೋಗ ಕೋಶದ ಸಂಯೋಜಕರಾದ ಡಾ. ಮಾಲತಿ ಕೆ ಸ್ವಾಗತಿಸಿ, ತನ್ವಿತ ವಂದಿಸಿದರು ಕಾವೇರಿ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಗಾರದಲ್ಲಿ ಭಾಗವಹಿಸುತ್ತಿರುವ ಅಂತಿಮ ಪದವಿಯ 72 ವಿದ್ಯಾರ್ಥಿಗಳಿಗೆ ಉದ್ಯಮಶೀಲತೆ ಮತ್ತು ಕೌಶಲ್ಯಾಭಿವೃದ್ಧಿಗೆ ಸಂಬಂಧಿಸಿದ ವಿವಿಧ ವಿಷಯಗಳ ಬಗ್ಗೆ ತಜ್ಞರಿಂದ ಮಾರ್ಗರ್ದಶನ ಮತ್ತು ತರಬೇತಿ ಲಭಿಸಲಿದೆ.




By
ForthFocus™