Saturday, February 7, 2026
Saturday, February 7, 2026

ಕೆದಿಂಜೆ: ಮಕ್ಕಳ ಹಕ್ಕು, ರಕ್ಷಣೆಗಳ ಕುರಿತು ಕಾನೂನು ಅರಿವು ಕಾರ್ಯಕ್ರಮ

ಕೆದಿಂಜೆ: ಮಕ್ಕಳ ಹಕ್ಕು, ರಕ್ಷಣೆಗಳ ಕುರಿತು ಕಾನೂನು ಅರಿವು ಕಾರ್ಯಕ್ರಮ

Date:

ಕೆದಿಂಜೆ: ಕೆದಿಂಜೆ ಶ್ರೀ ವಿದ್ಯಾಬೋದಿನಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ನೇತೃತ್ವದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಕೆದಿಂಜೆ ಶಾಲಾ ಸಭಾಂಗಣದಲ್ಲಿ ಮಕ್ಕಳ ಹಕ್ಕು ಮತ್ತು ರಕ್ಷಣೆಗಳ ಕುರಿತು ಕಾನೂನು ಅರಿವು ಕಾರ್ಯಕ್ರಮ ಜರಗಿತು.

ಉಡುಪಿ ಜಿಲ್ಲಾ ಪಂಚಾಯತ್ ಎನ್.ಆರ್.ಎಲ್.ಎಂ. ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರಾದ ಪ್ರಭಾಕರ್ ಆಚಾರ್ ಅವರು ಮಕ್ಕಳ ಹಕ್ಕು ಮತ್ತು ರಕ್ಷಣೆಗಳ ಕುರಿತು ಕಾನೂನು ಅರಿವು ಕಾರ್ಯಕ್ರಮದಲ್ಲಿ ಬಾಲ ಕಾರ್ಮಿಕ, ಬಾಲ್ಯವಿವಾಹ, ಪೋಕ್ಸೋ ಕಾಯಿದೆ ಕುರಿತು ಮಾಹಿತಿ ನೀಡಿದರು.

ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ ಅಧ್ಯಕ್ಷ ಪ್ರಶಾಂತ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ನಂದಳಿಕೆ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪುಷ್ಪ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಕೆದಿಂಜೆ ಶ್ರೀ ವಿದ್ಯಾಬೋದಿನಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಪ್ರಥ್ವೀರಾಜ್ ಬಲ್ಲಾಳ್, ಸಹಶಿಕ್ಷಕಿ ರೇಖಾ ಪೈ, ಕೆದಿಂಜೆ ಶಾಲಾ ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಬೀರೊಟ್ಟು ದಿನೇಶ್ ಪೂಜಾರಿ, ಶಾಲಾ ಗೌರವ ಶಿಕ್ಷಕಿಯರಾದ ಮಮತಾ ಜೆ., ಜಯಲಕ್ಷ್ಮೀ, ನಂದಳಿಕೆ- ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ ಸಂಚಾಲಕ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ನಿಕಟಪೂರ್ವ ಕಾರ್ಯದರ್ಶಿ ಅಬ್ಬನಡ್ಕ ಹರಿಪ್ರಸಾದ್ ಆಚಾರ್ಯ ಮೊದಲಾದವರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...

ಕೋಟ ನಾಗಮಂಡಲೋತ್ಸವದ ಚಪ್ಪರ ಮುಹೂರ್ತ

ಕೋಟ, ಫೆ.೬: ಕೋಟದ ಅಮೃತೇಶ್ವರೀ ದೇಗುಲದ ವತಿಯಿಂದ ನಡೆಯಲಿರುವ ಏಕ:ಪವಿತ್ರ ನಾಗಮಂಡಲೋತ್ಸವಕ್ಕೆ...

ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆಗೆ ಪ್ರಥಮ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

ಉಡುಪಿ, ಫೆ.6: ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಉಪಯೋಗಕ್ಕೆ ಅಗತ್ಯವಿರುವ ಎಲ್ಲಾ ರೀತಿಯ...
error: Content is protected !!