Tuesday, September 17, 2024
Tuesday, September 17, 2024

ಹೋಂ ಡಾಕ್ಟರ್ ಫೌಂಡೇಶನ್- ವಿಶಿಷ್ಟ ರೀತಿಯಲ್ಲಿ ಕ್ರಿಸ್ಮಸ್ ಆಚರಣೆ

ಹೋಂ ಡಾಕ್ಟರ್ ಫೌಂಡೇಶನ್- ವಿಶಿಷ್ಟ ರೀತಿಯಲ್ಲಿ ಕ್ರಿಸ್ಮಸ್ ಆಚರಣೆ

Date:

ಬ್ರಹ್ಮಾವರ: ಹೋಂ ಡಾಕ್ಟರ್ ಫೌಂಡೇಶನ್ ವತಿಯಿಂದ ವಿಶಿಷ್ಟ ರೀತಿಯಲ್ಲಿ ಕ್ರಿಸ್ಮಸ್ ಆಚರಣೆ ಕಾರ್ಯಕ್ರಮ ಚೇರ್ಕಾಡಿಯ ಜಾರುಜೆಡ್ಡು ಜನತಾ ನಗರದಲ್ಲಿ ಇಂದು ನಡೆಯಿತು.

ಮುಖ್ಯ ಅತಿಥಿ ನಿವೃತ್ತ ಪ್ರಾಂಶುಪಾಲೆ ವಸಂತಿ ಬಾಯಿ ಮಾತನಾಡಿ, ಈ ರೀತಿಯಲ್ಲಿ ಸಾರ್ವಜನಿಕವಾಗಿ ಹಬ್ಬದ ಆಚರಣೆ ಉತ್ತಮ ಪ್ರಕ್ರಿಯೆಯಾಗಿದೆ. ಸಮಾಜಕ್ಕಾಗಿ ಸಹಾಯ ಮಾಡುವ ಪ್ರವೃತ್ತಿ ನಿಜಕ್ಕೂ ಶ್ರೇಷ್ಠ ಎಂದರು.

ಸಂಸ್ಥೆಯ ಪ್ರಯುಖರಾದ ಡಾ. ಶಶಿಕಿರಣ್ ಶೆಟ್ಟಿ ಸಂಸ್ಥೆಯ ಕಾರ್ಯಕ್ರಮಗಳ ವಿವರಗಳನ್ನು ತಿಳಿಸಿದರು. ವೇದಿಕೆಯಲ್ಲಿ ಸುಚಿತ್ರಾ, ಬಂಗಾರಪ್ಪ, ಡಾ. ಸುಮಾ ಶೆಟ್ಟಿ ಮುಂತಾದವರಿದ್ದರು.

ನಂತರ ಮಕ್ಕಳ ಪ್ರತಿಭಾ ಪ್ರದರ್ಶನ ಮತ್ತು ಬಹುಮಾನ ವಿತರಣೆ, ಆರ್ಥಿಕವಾಗಿ ಹಿಂದುಳಿದ ಪ್ರತಿಭಾನ್ವಿತ ವಿದ್ಯಾರ್ಥಿಗೆ ವಿದ್ಯಾರ್ಥಿವೇತನ, ವಸ್ತ್ರದಾನ ಕಾರ್ಯಕ್ರಮ ಮತ್ತು ಸಹ ಭೋಜನ ನಡೆಯಿತು.

ರಾಘವೇಂದ್ರ ಪ್ರಭು ಕರ್ವಾಲು, ರಾಘವೇಂದ್ರ ಪೂಜಾರಿ, ಸುಜಯ, ನಯನ, ಉದಯ ನಾಯ್ಕ್ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶಾರದಾ ರೆಸಿಡೆನ್ಸಿಯಲ್ ಶಾಲೆ: ಇಂಟರಾಕ್ಟ್ ಪದಗ್ರಹಣ

ಉಡುಪಿ, ಸೆ.16: ರೋಟರಿ ಉಡುಪಿ ಪ್ರಾಯೋಜಿತ ಶಾರದಾ ರೆಸಿಡೆನ್ಸಿಯಲ್ ಸ್ಕೂಲ್ ಉಡುಪಿ...

ಕಬಡ್ಡಿ: ಸಾಯ್ಬ್ರಕಟ್ಟೆ ಶಾಲಾ ತಂಡದ ಸಾಧನೆ

ಕೋಟ, ಸೆ.16: ನಿಟ್ಟೂರು ಪ್ರೌಢಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ೧೪ರ ವಯೋಮಾನದ ಬಾಲಕರ...

ವಿಪ್ರ ಮಹಿಳಾ ವಲಯ ವಾರ್ಷಿಕೋತ್ಸವ

ಕೋಟ, ಸೆ.16: ವಿಪ್ರ ಮಹಿಳಾ ವಲಯ ಸಾಲಿಗ್ರಾಮ ಇದರ 5ನೇ ವರ್ಷದ...

ವಿಶ್ವಕರ್ಮ ಯಜ್ಞ

ಕೋಟ, ಸೆ.16: ಕೋಟ ಶ್ರೀ ವಿರಾಡ್ವಿಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಂಘ ಸಾಲಿಗ್ರಾಮ,...
error: Content is protected !!