ಕುಂದಾಪುರ: ಕುಂದಾಪುರ ಎಜ್ಯುಕೇಶನ್ ಸೊಸೈಟಿ(ರಿ.) ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ.ಕೆ.ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಯಲ್ಲಿ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು.
ಎನ್.ಸಿ.ಸಿ. ಅಧಿಕಾರಿ ಕ್ಯಾಪ್ಟನ್ ಸುರೇಂದ್ರ ಶೆಟ್ಟಿ ಸಂವಿಧಾನ ಪೂರ್ವ ಪೀಠಿಕೆಯ ಪ್ರತಿಜ್ಞಾ ವಿಧಿ ಬೋಧಿಸಿದರು. ಸಂವಿಧಾನದ ಅರ್ಥ, ಸಾರಾಂಶ ಮತ್ತು ಅದರ ಧ್ಯೇಯೋದ್ದೇಶವನ್ನು ಸವಿವರವಾಗಿ ವಿವರಿಸಿದರು. ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್ ವಹಿಸಿದ್ದರು. ಸಂಸ್ಥೆಯ ಉಪಪ್ರಾಂಶುಪಾಲೆ ಮತ್ತು ಪ್ರೌಢಶಾಲಾ ಮುಖ್ಯ ಶಿಕ್ಷಕಿ ಶುಭಾ ಕೆ. ಎನ್., ಸಹಾಯಕ ಮುಖ್ಯ ಶಿಕ್ಷಕ ಚಂದ್ರಶೇಖರ್ ಶೆಟ್ಟಿ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಜಗದೀಶ್ ಆಚಾರ್ ಸಾಸ್ತಾನ, ಸಹಾಯಕ ಮುಖ್ಯ ಶಿಕ್ಷಕಿ ಕವಿತಾ ಭಟ್, ಪೂರ್ವ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಲತಾ ಜಿ. ಭಟ್ ಉಪಸ್ಥಿತರಿದ್ದರು.