Saturday, August 29, 2026
Saturday, August 29, 2026

ಜಿಲ್ಲಾ ಎಸ್.ಸಿ. ಮೋರ್ಚಾದಿಂದ ಸಂವಿಧಾನ ದಿನಾಚರಣೆ

ಜಿಲ್ಲಾ ಎಸ್.ಸಿ. ಮೋರ್ಚಾದಿಂದ ಸಂವಿಧಾನ ದಿನಾಚರಣೆ

Date:

ಉಡುಪಿ: ಬಿಜೆಪಿ ಜಿಲ್ಲಾ ಎಸ್.ಸಿ. ಮೋರ್ಚಾ ನೇತೃತ್ವದಲ್ಲಿ ಇಂದು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಸಂವಿಧಾನ ದಿನವನ್ನು ಆಚರಿಸಲಾಯಿತು. ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮತ್ತು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಜ್ಯೋತಿ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಸಮಯೋಚಿತವಾಗಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಎಸ್.ಸಿ. ಮೋರ್ಚಾ ಅಧ್ಯಕ್ಷ ಗೋಪಾಲ ಕಳಂಜಿ ವಹಿಸಿದ್ದರು. ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ದೇಶದ ಸಂವಿಧಾನದ ಆಶಯಗಳ ಬಗ್ಗೆ ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ಮತ್ತು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ ವಿಸ್ತೃತ ಮಾಹಿತಿ ನೀಡಿದರು.

ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಮುನ್ನಾ ಎರ್ಮಾಳು, ಶಿವಾನಂದ ತಲ್ಲೂರು, ತಿಲಕರಾಜ್ ಕುಂದಾಪುರ ಇವರನ್ನು ಸನ್ಮಾನಿಸಲಾಯಿತು. ಜಿಲ್ಲೆಯ ಜಾನಪದ ಕ್ರೀಡೆ ಕಂಬಳದ ಕೋಣಗಳನ್ನು 30 ವರ್ಷಗಳಿಂದ ಸಲಹುತ್ತಿರುವ ಗುರುವ ಮೇಸ್ತ್ರಿ ಮಾರ್ಪಳ್ಳಿ ಇವರನ್ನು ಸನ್ಮಾನಿಸಲಾಯಿತು.

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಾನಪದ ಕಲಾವಿದ ಗಣೇಶ್ ಗಂಗೊಳ್ಳಿ ಮತ್ತು ಕಿರಿಯ ವಯಸ್ಸಿನಲ್ಲೇ ಕೊರಗಜ್ಜನ ಹಾಡನ್ನು ಹಾಡುವ ಮೂಲಕ ಪ್ರಖ್ಯಾತರಾದ ಮಾಸ್ಟರ್ ಕಾರ್ತಿಕ್ ಇವರನ್ನು ಗೌರವಿಸಲಾಯಿತು.

ಎಸ್.ಎಸ್.ಎಲ್.ಸಿ. ತರಗತಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿರುವ 30 ಮಂದಿ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

ರಾಜ್ಯ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರವಿ ಅಮೀನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು, ಜಿಲ್ಲಾ ಎಸ್.ಸಿ. ಮೋರ್ಚಾ ಉಸ್ತುವಾರಿ ನಳಿನಿ ಪ್ರದೀಪ್ ರಾವ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಪಕ್ಷದ ಪ್ರಮುಖರಾದ ಆನಂದ ಮಟಪಾಡಿ, ಎಸ್.ಸಿ. ಮೋರ್ಚಾ ಉಡುಪಿ ನಗರ ಮಂಡಲ ಅಧ್ಯಕ್ಷ ಕಿರಣ್, ಕುಂದಾಪುರ ಮಂಡಲ ಅಧ್ಯಕ್ಷ ಮಹೇಶ್ ಕಾಳಾವರ, ಬೈಂದೂರು ಮಂಡಲ ಅಧ್ಯಕ್ಷ ಚಂದ್ರ ಪಂಚವಟಿ, ಕಾರ್ಕಳ ಮಂಡಲ ಅಧ್ಯಕ್ಷ ಅನ್ನಿ ಕಾರ್ಕಳ ಹಾಗೂ ಎಸ್.ಸಿ. ಮೋರ್ಚಾ ಪದಾಧಿಕಾರಿಗಳು, ಪಕ್ಷದ ಪ್ರಮುಖರು ಮತ್ತು ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ಜಿಲ್ಲಾ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ಸದಾನಂದ ಕೈಪುಂಜಾಲು ಸ್ವಾಗತಿಸಿ, ವಂದಿಸಿದರು. ಪ್ರಧಾನ ಕಾರ್ಯದರ್ಶಿ ಕೃಷ್ಣಮೂರ್ತಿ ಡಿ.ಬಿ. ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...
error: Content is protected !!