Saturday, July 25, 2026
Saturday, July 25, 2026

ಉಡುಪಿ: ತಂಬಾಕು ನಿಯಂತ್ರಣ ತನಿಖಾ ದಳ ದಾಳಿ- ಕಾನೂನು ಬಾಹಿರ ಸಿಗರೇಟ್ ವಶ

ಉಡುಪಿ: ತಂಬಾಕು ನಿಯಂತ್ರಣ ತನಿಖಾ ದಳ ದಾಳಿ- ಕಾನೂನು ಬಾಹಿರ ಸಿಗರೇಟ್ ವಶ

Date:

ಉಡುಪಿ: ಜಿಲ್ಲೆಯಲ್ಲಿ ಕೋಟ್ಪಾ 2003 ಕಾಯ್ದೆಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ತಂಬಾಕು ನಿಯಂತ್ರಣಾ ತನಿಖಾ ದಳದ ವತಿಯಿಂದ ಸೋಮವಾರ ಉಡುಪಿ ತಾಲೂಕಿನ ಮಣಿಪಾಲ ವ್ಯಾಪ್ತಿ ಪ್ರದೇಶಗಳಲ್ಲಿ ತಂಬಾಕು ಮಾರಾಟದ ಅಂಗಡಿಗಳು, ಹೋಟೇಲ್‌ಗಳು, ಬಾರ್ ಮತ್ತು ರೆಸ್ಟೋರೆಂಟ್‌ಗಳಿಗೆ ದಾಳಿ ನಡೆಸಿ, ಸೆಕ್ಷನ್ 4, 5, 6 (ಎ), 6(ಬಿ) ಮತ್ತು 7 ಅಡಿಯಲ್ಲಿ ಒಟ್ಟು 23 ಪ್ರಕರಣ ದಾಖಲಿಸಿ, 7,900 ರೂ. ದಂಡ ವಸೂಲಿ ಮಾಡಿ, ಕಾನೂನು ಬಾಹಿರ ಸಿಗರೇಟ್‌ಗಳನ್ನು ವಶಪಡಿಸಿಕೊಂಡು ಜಾಹೀರಾತು ಬೋರ್ಡ್ಗಳನ್ನು ತೆಗೆಸಲಾಯಿತು ಹಾಗೂ ಸೆಕ್ಷನ್ 4, 6 (ಎ) ಮತ್ತು 6(ಬಿ) ನಾಮಫಲಕಗಳನ್ನು ದಾಳಿಯಲ್ಲಿ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ. ನಾಗರತ್ನ, ಜಿಲ್ಲಾ ಕಾರ್ಮಿಕ ಅಧಿಕಾರಿ ಕುಮಾರ್ ಬಿ.ಆರ್, ನಗರಸಭೆಯ ಹಿರಿಯ ಆರೋಗ್ಯ ನಿರೀಕ್ಷಕಿ ಶಶಿರೇಖಾ, ಹಿರಿಯ ಆಹಾರ ಸುರಕ್ಷತಾ ಅಧಿಕಾರಿ ವೆಂಕಟೇಶ್, ಹಿರಿಯ ಆರೋಗ್ಯ ಮೇಲ್ವಿಚಾರಕ ಸತೀಶ್ ರಾವ್, ಜಿಲ್ಲಾ ಅಸಾಂಕ್ರಾಮಿಕ ರೋಗಗಳ ಘಟಕದ ಜಿಲ್ಲಾ ಸಂಯೋಜಕಿ ಡಾ. ಅಂಜಲಿ, ರಾಷ್ಟೀಯ ತಂಬಾಕು ನಿಯಂತ್ರಣಾ ಘಟಕದ ವತಿಯಿಂದ, ಎನ್.ಟಿ.ಸಿ.ಪಿ. ಜಿಲ್ಲಾ ಸಲಹೆಗಾರ್ತಿ ಮಂಜುಳಾ ಶೆಟ್ಟಿ ಮತ್ತು ರಕ್ಷಿತಾ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!