Saturday, November 23, 2024
Saturday, November 23, 2024

ಚಲನಚಿತ್ರ, ಕಿರುತೆರೆ ರಂಗದವರಿಗೆ ಆರ್ಥಿಕ ನೆರವು: ಸೇವಾ ಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಆಹ್ವಾನ

ಚಲನಚಿತ್ರ, ಕಿರುತೆರೆ ರಂಗದವರಿಗೆ ಆರ್ಥಿಕ ನೆರವು: ಸೇವಾ ಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಆಹ್ವಾನ

Date:

ಕೋವಿಡ್ -19 ನ ಎರಡನೇ ಅಲೆ ಹಿನ್ನೆಲೆಯಲ್ಲಿ ಜಾರಿಯಾಗಿದ್ದ ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಸಿಲುಕಿದ್ದ ಚಲನಚಿತ್ರ ಮತ್ತು ಕಿರುತೆರೆ ಕಲಾವಿದರು ಮತ್ತು ತಂತ್ರಜ್ಞರು ಹಾಗೂ ಚಲನಚಿತ್ರ ಮಂದಿರದ ಕಾರ್ಮಿಕರಿಗೆ ಮುಖ್ಯಮಂತ್ರಿಯವರು ಘೋಷಿಸಿದ್ದ 3,000 ರೂ. ಮೊತ್ತದ ವಿಶೇಷ ಆರ್ಥಿಕ ಪ್ಯಾಕೇಜ್‌ನ ನೆರವಿಗಾಗಿ ಸೇವಾಸಿಂಧು ಪೋರ್ಟಲ್ ಮೂಲಕ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.

ರಾಜ್ಯದಲ್ಲಿ ಎರಡನೇ ಅಲೆಯ ವೇಳೆ ಸರ್ಕಾರ ವಿಧಿಸಿದ್ದ ನಿರ್ಬಂಧದಿಂದಾಗಿ ಬಾಧಿತರಾಗಿದ್ದ ಸಮಾಜದ ವಿವಿಧ ವರ್ಗದವರಿಗೆ ಮುಖ್ಯಮಂತ್ರಿಯವರು 2021 ರ ಜೂನ್ 3 ರಂದು ವಿಶೇಷ ಪರಿಹಾರದ ಎರಡನೇ ಪ್ಯಾಕೇಜ್ ಅನ್ನು ಘೋಷಣೆ ಮಾಡಿದ್ದರು. ಇದರಲ್ಲಿ ಚಲನಚಿತ್ರೋದ್ಯಮ ಹಾಗೂ ಕಿರುತೆರೆ ಮಾಧ್ಯಮದಲ್ಲಿ ತೊಡಗಿಕೊಂಡಿರುವ ನೋಂದಾಯಿತ ಅಸಂಘಟಿತ ಕಾರ್ಮಿಕರಿಗೆ ತಲಾ 3,000 ರೂ. ಪರಿಹಾರ ನೀಡಲು ಸರ್ಕಾರವು ನಿರ್ಧರಿಸಿತ್ತು. ಸರ್ಕಾರದ ಈ ನಿರ್ಧಾರದಿಂದಾಗಿ 22,000 ನೋಂದಾಯಿತ ಕಾರ್ಮಿಕರಿಗೆ ಅನುಕೂಲವಾಗಲಿದೆ. ಇದಕ್ಕಾಗಿ ಅಂದಾಜು 6.60 ಕೋಟಿ ರೂ. ಮೀಸಲಿರಿಸಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಡಾ. ಪಿ.ಎಸ್. ಹರ್ಷ ಅವರು ತಿಳಿಸಿದ್ದಾರೆ.

ಚಲನಚಿತ್ರ ರಂಗದವರು ಮತ್ತು ಕಿರುತೆರೆ ರಂಗದವರಿಗೆ ಆರ್ಥಿಕ ನೆರವನ್ನು ಆಧಾರ್ ಕಾರ್ಡ್ ಸಂಖ್ಯೆಯನ್ನು ಆಧರಿಸಿ ನೇರವಾಗಿ ಅವರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲು ಅನುವಾಗುವಂತೆ ಸೇವಾಸಿಂಧು ವೆಬ್ ಪೋರ್ಟಲ್ ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸಬೇಕಾಗಿರುತ್ತದೆ. ಅರ್ಜಿ ನಮೂನೆ ಮತ್ತು ಇನ್ನಿತರ ಷರತ್ತುಗಳಿಗಾಗಿ http://www.sevasindhu.karnataka.gov.in ಗೆ ಭೇಟಿ ನೀಡಿ ಪಡೆದುಕೊಳ್ಳಬಹುದು.

ಒಬ್ಬರಿಗೆ ಒಂದು ಅರ್ಜಿಯನ್ನು ಮಾತ್ರ ಸಲ್ಲಿಸಲು ಅವಕಾಶವಿದೆ. ಅರ್ಜಿ ಸಲ್ಲಿಸುವವರು ಸಂಬಂಧಿತ ಸಂಘಗಳಲ್ಲಿ ಸದಸ್ಯತ್ವ ಹೊಂದಿರಬೇಕು ಮತ್ತು ಅಲ್ಲಿಂದ ಕಡ್ಡಾಯವಾಗಿ ಶಿಫಾರಸ್ಸು ಪತ್ರ ಪಡೆದು ಅದನ್ನು ಸೇವಾಸಿಂಧು ಪೋರ್ಟಲ್‌ನಲ್ಲಿ ಅಪ್ಲೋಡ್ ಮಾಡಬೇಕಾಗಿದೆ. ಚಲನಚಿತ್ರ ಮಂದಿರಗಳಲ್ಲಿ ಕೆಲಸ ಮಾಡುವವರು ಭವಿಷ್ಯ ನಿಧಿ (ಪ್ರಾವಿಡೆಂಟ್ ಫಂಡ್) ಸಂಖ್ಯೆಯೊಂದಿಗೆ ಚಲನಚಿತ್ರ ಮಂದಿರದ ಮಾಲೀಕರ ಪತ್ರದೊಂದಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಆನ್‌ಲೈನ್ ಅರ್ಜಿಯು ಜುಲೈ 9 ರ ವರೆಗೆ ಸೇವಾಸಿಂಧು ಪೋರ್ಟಲ್‌ನಲ್ಲಿ ಲಭ್ಯವಿದೆ. ಆರ್ಥಿಕ ನೆರವಿನ ಅರ್ಜಿ ಇಲ್ಲವೇ ಶಿಫಾರಸ್ಸು ಪತ್ರಗಳನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಯಾವುದೇ ಕಚೇರಿಗಳಲ್ಲಿ ಸ್ವೀಕರಿಸಲಾಗುವುದಿಲ್ಲ.

ಆರ್ಥಿಕ ನೆರವಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಮತ್ತು ಆನ್‌ಲೈನ್‌ನಲ್ಲಿ ಅರ್ಜಿಯನ್ನು ಭರ್ತಿ ಮಾಡಲು, ತಾಂತ್ರಿಕ ಮಾರ್ಗದರ್ಶನದ ಅಗತ್ಯವಿದ್ದಲ್ಲಿ ಕರ್ನಾಟಕ ಚಲನಚಿತ್ರ ಅಕಾಡೆಮಿಯಲ್ಲಿ ಸ್ಥಾಪಿಸಿರುವ ಸಹಾಯವಾಣಿಯ ಮೊಬೈಲ್ ಸಂಖ್ಯೆ 8904645529 ಅನ್ನು ಸಂಪರ್ಕಿಸಬಹುದು ಇಲ್ಲವೆ [email protected] ಗೆ ಇಮೇಲ್ ಮೂಲಕ ಪಡೆದುಕೊಳ್ಳಬಹುದು ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತಿಹಾಸದ ಅವಲೋಕನ ಬದುಕಿನ ಪುನರ್ ವಿಮರ್ಶೆಗೆ ಸಹಾಯಕ: ಶಬಾನ್ ಅಂಜುಮ್

ಕೋಟ, ನ.22: ಇತಿಹಾಸದ ಪಿತಾಮಹ ಹೆರೋಡಟಸ್ ಸಂಸ್ಕೃತಿಗಳ ತಿಳಿಯಲು ಒಂದು ಉತ್ತಮ...

ಆನಂದತೀರ್ಥ: ವಾರ್ಷಿಕ ಕ್ರೀಡಾಕೂಟ

ಕಟಪಾಡಿ, ನ.22: ಪೇಜಾವರ ಮಠದ ಆಡಳಿತಕ್ಕೊಳಪಟ್ಟ ಪಾಜಕ ಆನಂದತೀರ್ಥ ಪ.ಪೂ ಕಾಲೇಜು...

ಸಾಂಸ್ಕೃತಿಕ ಸ್ಪರ್ಧೆ: ಮಣಿಪಾಲ ಜ್ಞಾನಸುಧಾದ ವಿದ್ಯಾರ್ಥಿಗಳ ಅಮೋಘ ಸಾಧನೆ

ಉಡುಪಿ, ನ.22: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಮತ್ತು ಶಾಲಾ ಶಿಕ್ಷಣ...

ಅರುಣ್ಯಾ 2024: ಭಂಡಾರಕಾರ್ಸ್ ಪಿಯು ಕಾಲೇಜು ತಂಡ ಚಾಂಪಿಯನ್

ಬಸ್ರೂರು, ನ.22: ಶ್ರೀ ಶಾರದಾ ಕಾಲೇಜು ಬಸ್ರೂರು ಇಲ್ಲಿ ಉಡುಪಿ ಜಿಲ್ಲಾಮಟ್ಟದ...
error: Content is protected !!