Saturday, February 28, 2026
Saturday, February 28, 2026

ಕೊರೊನಾ ಸೇನಾನಿಗಳ ಕಾರ್ಯ ಶ್ಲಾಘನೀಯ: ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ

ಕೊರೊನಾ ಸೇನಾನಿಗಳ ಕಾರ್ಯ ಶ್ಲಾಘನೀಯ: ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ

Date:

ಕೋವಿಡ್ ನಿಯಂತ್ರಣಕ್ಕೆ 50 ಕ್ಕಿಂತ ಹೆಚ್ಚು ಕೋವಿಡ್ ಪಾಸಿಟಿವ್ ಇರುವ ಗಂಗೊಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪ್ರದೇಶವನ್ನು ಸಂಪೂರ್ಣ ಲಾಕ್‌ಡೌನ್ ಮಾಡಲಾಗಿದ್ದು, ಉತ್ತಮ ರೀತಿಯಲ್ಲಿ ಲಾಕ್‌ಡೌನ್ ವ್ಯವಸ್ಥೆ ಮಾಡಿರುವುದಕ್ಕೆ ಬೈಂದೂರು ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ ಮೆಚ್ಚುಗೆ ವ್ಯಕ್ತಪಡಿಸಿದರು.

ಕೋವಿಡ್ ನಿಯಂತ್ರಣಕ್ಕೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೈಗೊಳ್ಳಲಾದ ಸಿದ್ಧತೆಗಳನ್ನು ಪರಿಶೀಲಿಸಿ ಮಾಹಿತಿ ಪಡೆದ ಶಾಸಕರು, ಕೊರೋನಾ ನಿಯಂತ್ರಣಕ್ಕೆ ಜಿಲ್ಲಾಡಳಿತ ಮತ್ತು ಗ್ರಾಮ ಪಂಚಾಯತ್ ಕೈಗೊಂಡ ಕ್ರಮಗಳಿಗೆ ಸಾರ್ವಜನಿಕರು ಸಹಕಾರ ನೀಡಬೇಕು. ಅನ್‌ಲಾಕ್ ಆದ ಬಳಿಕ ಜನರು ಮೈಮರೆಯದೆ ಕಾಲಕಾಲಕ್ಕೆ ಸರಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದರು.

ಕೊರೋನಾ ನಿಯಂತ್ರಣದಲ್ಲಿ ಹಗಲಿರುಳು ದುಡಿದ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಪೊಲೀಸ್ ಸಿಬ್ಬಂದಿಗಳ ಹಾಗೂ ಎಲ್ಲಾ ಕರೋನಾ ವಾರಿಯರ್‌ಗಳ ಕಾರ್ಯ ಶ್ಲಾಘನೀಯ. ಲಾಕ್‌ಡೌನ್‌ನಿಂದ ಸಂಕಷ್ಟದಲ್ಲಿರುವ ವಿವಿಧ ವರ್ಗದ ಜನರಿಗೆ ಸರಕಾರ ಪರಿಹಾರದ ಪ್ಯಾಕೇಜ್ ಘೋಷಿಸಿದ್ದು ಪ್ಯಾಕೇಜ್ ಪಡೆಯಲು ಅರ್ಹವಾಗಿರುವ ಎಲ್ಲಾ ವರ್ಗದ ಜನರು ಜೂನ್14ರೊಳಗಾಗಿ ಸೇವಾಸಿಂಧುವಿನಲ್ಲಿ ಹೆಸರು ನೊಂದಾಯಿಸಿಕೊಳ್ಳಬೇಕು ಎಂದು ತಿಳಿಸಿದರು.

ಗ್ರಾ.ಪಂ. ಸದಸ್ಯರಾದ ಬಿ.ರಾಘವೇಂದ್ರ ಪೈ, ಬಿ.ಲಕ್ಷ್ಮೀಕಾಂತ ಮಡಿವಾಳ, ಸಾವಿತ್ರಿ ಖಾರ್ವಿ, ಪ್ರಶಾಂತ ಖಾರ್ವಿ, ನಿರ್ಮಲಾ ಪೂಜಾರಿ, ಶಾಂತಿ ಖಾರ್ವಿ, ಅಕ್ಕಮ್ಮ, ಆಶಾ ಕಾರ್ಯಕರ್ತೆಯರಾದ ಕಲ್ಪನಾ ಶೇರುಗಾರ್, ಭಾಗ್ಯ, ಪಂಚಾಯತ್ ಸಿಬ್ಬಂದಿ ಶೇಖರ ಜಿ., ಉದಯ ಜಿ., ರಾಘವೇಂದ್ರ, ಅಂಗನವಾಡಿ ಕಾರ್ಯಕರ್ತೆಯರಾದ ಫಿಲೋಮಿನಾ ಫೆರ್ನಾಂಡಿಸ್, ರೇಖಾ ಖಾರ್ವಿ, ಸಹನಾ, ಸಂಗೀತಾ, ಬಿಜೆಪಿ ಮುಖಂಡ ನಾರಾಯಣ ನಾಯಕ್, ಪೊಲೀಸ್ ಸಿಬ್ಬಂದಿ ಸರೋಜಾ, ಗೃಹರಕ್ಷಕ ದಳದ ಸಿಬ್ಬಂದಿ ಪ್ರತಿಮಾ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಡುಬಿ ಸಮುದಾಯದ ಕಲಾವಿದರ ಬಗ್ಗೆ ಪಠ್ಯವಾಗಲಿ: ಡಾ. ಜಾನಪದ ಎಸ್ ಬಾಲಾಜಿ

ಬ್ರಹ್ಮಾವರ, ಫೆ.27: ಮೇಕೆಕಟ್ಟು ನಂದಿಕೇಶ್ವರ ದೇಗುಲದ ಆವರಣದಲ್ಲಿ ಕನ್ನಡ ಜಾನಪದ ಪರಿಷತ್...

ಜಿಲ್ಲೆಯ ಅಗ್ನಿಶಾಮಕರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ

ಉಡುಪಿ, ಫೆ.27: ಬೈಂದೂರು ಅಗ್ನಿಶಾಮಕ ಠಾಣೆಯ ಸಹಾಯಕ ಅಗ್ನಿಶಾಮಕ ರಾಜೇಶ್ ಹಾಗೂ...

ಮೊಬೈಲ್ ಕ್ಯಾಂಟೀನ್ ವಾಹನ ಖರೀದಿಸಲು ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಫೆ.27: ಪ್ರವಾಸೋದ್ಯಮ ಇಲಾಖೆ ವತಿಯಿಂದ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ. ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ...

ಮಾ. 4: ಉಡುಪಿ ಕಂಬಳಕೆರೆಗೆ ಶಂಕುಸ್ಥಾಪನೆ

ಉಡುಪಿ, ಫೆ.27: ಉಡುಪಿ ಜಿಲ್ಲಾಡಳಿತ ಮತ್ತು ಯುವಜನ ಸಬಲೀಕರಣ ಇಲಾಖೆ ವತಿಯಿಂದ...
error: Content is protected !!