Monday, January 20, 2025
Monday, January 20, 2025

ಜಿಲ್ಲೆಯಲ್ಲಿ 15 -18 ವರ್ಷದವರೆಗಿನ 53,555 ಮಕ್ಕಳಿಗೆ ಕೋವಿಡ್-19 ಲಸಿಕೆ: ಜಿಲ್ಲಾಧಿಕಾರಿ

ಜಿಲ್ಲೆಯಲ್ಲಿ 15 -18 ವರ್ಷದವರೆಗಿನ 53,555 ಮಕ್ಕಳಿಗೆ ಕೋವಿಡ್-19 ಲಸಿಕೆ: ಜಿಲ್ಲಾಧಿಕಾರಿ

Date:

ಉಡುಪಿ: ಜಿಲ್ಲೆಯಲ್ಲಿ ಜನವರಿ 3 ರಿಂದ 15 ರಿಂದ 18 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಕೋವ್ಯಾಕ್ಸಿನ್ ಲಸಿಕೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಈಗಾಗಲೇ 309 ಹೈಸ್ಕೂಲ್, 104 ಪದವಿ ಪೂರ್ವ ಕಾಲೇಜು, 21 ಐ.ಟಿ.ಐ ಇತ್ಯಾದಿ ಸಂಸ್ಥೆಗಳನ್ನು ಸೇರಿದಂತೆ ಒಟ್ಟು 434 ಲಸಿಕಾ ಕೇಂದ್ರಗಳನ್ನು ಗುರುತಿಸಲಾಗಿದ್ದು, 15 ರಿಂದ 18 ವರ್ಷದವರೆಗಿನ 53,555 ಮಕ್ಕಳಿಗೆ ಲಸಿಕೆ ನೀಡಲು ಗುರಿಯನ್ನು ನಿಗದಿಪಡಿಸಲಾಗಿದೆ.

2007 ಹಾಗೂ ಇದಕ್ಕೂ ಮುನ್ನ ಜನಿಸಿರುವ ಮಕ್ಕಳು ಕೋವ್ಯಾಕ್ಸಿನ್ ಲಸಿಕೆ ಪಡೆಯಲು ಅರ್ಹರಿದ್ದು, ಮಕ್ಕಳು ಕಲಿಯುತ್ತಿರುವ ಹೈಸ್ಕೂಲ್, ಕಾಲೇಜು ಹಾಗೂ ಶೈಕ್ಷಣಿಕ ಸಂಸ್ಥೆಗಳಲ್ಲಿ ಲಸಿಕಾ ಶಿಬಿರಗಳನ್ನು ಏರ್ಪಡಿಸಿ ಅರ್ಹ ಮಕ್ಕಳಿಗೆ ಕೋವ್ಯಾಕ್ಸಿನ್ ಲಸಿಕೆ ನೀಡಲಾಗುತ್ತದೆ.

ಶಾಲೆಯಿಂದ ಹೊರಗುಳಿದ ಅಥವಾ ಶಾಲೆ ಬಿಟ್ಟ ಮಕ್ಕಳಿಗೆ ಅವರು ವಾಸಿಸುವ ಸ್ಥಳದ ಹತ್ತಿರದ ಶಿಕ್ಷಣ ಸಂಸ್ಥೆಯ ಲಸಿಕಾ ಶಿಬಿರದಲ್ಲಿ ಲಸಿಕೆ ನೀಡಲು ವ್ಯವಸ್ಥೆ ಮಾಡಲಾಗಿದ್ದು, ಮಕ್ಕಳು ಕೋವ್ಯಾಕ್ಸಿನ್ ಲಸಿಕೆ ಪಡೆಯಲು ಆಧಾರ್ ಕಾರ್ಡ್ ಅಥವಾ ರೇಷನ್ ಕಾರ್ಡ್ ಅಗತ್ಯವಿದ್ದು, ಪೋಷಕರು ಮಕ್ಕಳ ಆಧಾರ್ ಕಾರ್ಡ್ ಅಥವಾ ರೇಷನ್ ಕಾರ್ಡ್ ಮತ್ತು ಪೋಷಕರ ಮೊಬೈಲ್ ಸಂಖ್ಯೆ ನೀಡಿ ಮಕ್ಕಳು ಲಸಿಕೆ ಪಡೆಯುವಂತೆ ಪ್ರೇರೇಪಿಸಬೇಕು.

ಫಲಾನುಭವಿ ಮಕ್ಕಳು ಮೊಬೈಲ್ ಸಂಖ್ಯೆ ಬಳಸಿ ಅಥವಾ ಕೋವಿನ್ ಪೋರ್ಟಲ್‌ನಲ್ಲಿ ಈಗಾಗಲೇ ಇರುವ ಪೋಷಕರ ಅಕೌಂಟಲ್ಲಿ ನೋಂದಣಿ ಮಾಡಿಕೊಳ್ಳಬಹುದು ಅಥವಾ ಶಾಲೆಯ ಮಖ್ಯೋಪಾಧ್ಯಾಯರ ಹಾಗೂ ಶಿಕ್ಷಕರ ಮೊಬೈಲ್ ಸಂಖ್ಯೆ ಮೂಲಕ ಲಸಿಕಾ ಶಿಬಿರದಲ್ಲಿಯೂ ನೋಂದಣಿ ಮಾಡಿಕೊಳ್ಳಬಹುದು.

ಪ್ರತಿ ಶಿಕ್ಷಣ ಸಂಸ್ಥೆ, ಕಾಲೇಜು ಹಾಗೂ ತರಬೇತಿ ಕೇಂದ್ರಗಳಲ್ಲಿ ನೋಡಲ್ ಅಧಿಕಾರಿಯವರನ್ನು ನೇಮಿಸಲಾಗಿದ್ದು, ಮಕ್ಕಳು ಅಥವಾ ಪೋಷಕರು ಲಸಿಕಾಕರಣದ ಬಗ್ಗೆ ಮಾಹಿತಿ ಪಡೆಯಲು ಶಿಕ್ಷಣ ಸಂಸ್ಥೆಯ ನೋಡಲ್ ಅಧಿಕಾರಿ, ಮುಖ್ಯಸ್ಥರು ಅಥವಾ ಆರೋಗ್ಯ ಸಂಸ್ಥೆಯ ವೈದ್ಯಾಧಿಕಾರಿಯವರನ್ನು ಸಂಪರ್ಕಿಸಬಹುದು.

ಕೋವಿಡ್ ಲಸಿಕೆ ಪಡೆಯುವವರಿಗೆ ಯಾವುದೇ ಲಸಿಕಾ ಕೇಂದ್ರದಲ್ಲಿ ಕೋವಿಡ್-19 ಮಾದರಿ ಪರೀಕ್ಷೆ ನಡೆಸಲಾಗುವುದಿಲ್ಲ.

ಲಸಿಕಾ ಶಿಬಿರ ನಡೆಯುವ ದಿನದಂದು, ಪೋಷಕರು ಲಸಿಕಾ ಶಿಬಿರ ಜರುಗುವ ಶಿಕ್ಷಣ ಸಂಸ್ಥೆಗಳಲ್ಲಿ ಉಪಸ್ಥಿತರಿದ್ದು, ಲಸಿಕಾ ಕಾರ್ಯಕ್ರಮಕ್ಕೆ ಸಹಕರಿಸುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!