Saturday, September 28, 2024
Saturday, September 28, 2024

ವ್ಯಸನಮುಕ್ತ ಸಮಾಜ ನಿರ್ಮಾಣ ಮಾಡೋಣ: ಡಾ. ನಾಗಭೂಷಣ ಉಡುಪ

ವ್ಯಸನಮುಕ್ತ ಸಮಾಜ ನಿರ್ಮಾಣ ಮಾಡೋಣ: ಡಾ. ನಾಗಭೂಷಣ ಉಡುಪ

Date:

ಉಡುಪಿ: ಇಂದಿನ ಯುವಜನತೆ ಆರೋಗ್ಯದ ಮಹತ್ವ ಮರೆತು ದುಶ್ಚಟಗಳಿಗೆ ಬಲಿಯಾಗಿ ಮಾನಸಿಕ ಸ್ಥಿಮಿತತೆ ಕಳೆದುಕೊಳ್ಳುತ್ತಿದ್ದಾರೆ. ಸಾಂಕ್ರಮಿಕ ಕಾಯಿಲೆಯಷ್ಟೇ ಮಾರಕವಾಗಿರುವ ವಿವಿಧ ವ್ಯಸನಗಳ ಬಗ್ಗೆ ಸಾಮಾಜಿಕ ಪ್ರಜ್ಞೆ ಮೂಡಿಸುವ ಮೂಲಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಮಾಡಿ , ದುಶ್ಚಟಗಳಿಗೆ ಕಡಿವಾಣ ಹಾಕಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ಹೇಳಿದರು.

ಅವರು ಸೋಮವಾರ ಮಲ್ಪೆಯ ಮೀನುಗಾರರ ಸಂಘದ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ ಹಾಗೂ ಜಿಲ್ಲಾ ಮೀನುಗಾರಿಕೆ ಇಲಾಖೆ ಮತ್ತು ಮೀನುಗಾರರ ಸಂಘ ಉಡುಪಿ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾದ ಮೀನುಗಾರರಿಗೆ ಆರೋಗ್ಯ ತಪಾಸಣೆ ಮತ್ತು ಮಾಹಿತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಸಾರ್ವಜನಿಕರು ಸಾಂಕ್ರಾಮಿಕ ರೋಗಗಳು ಮತ್ತು ಆರೋಗ್ಯದ ಬಗ್ಗೆ ಜಾಗೃತಿ ಮೈಗೂಡಿಸಿಕೊಳ್ಳಬೇಕು. ಮೀನುಗಾರರು ಯಾವುದೇ ದುಶ್ಚಟಗಳಿಗೆ ಬಲಿಯಾಗದೇ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಕೊಡುಗೆ ನೀಡಬೇಕು. ಸಾರ್ವಜನಿಕರು ಆರೋಗ್ಯ ತಪಾಸಣಾ ಶಿಬಿರಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವುದರ ಮೂಲಕ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದರು.

ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ಕೃಷ್ಣ ಸುವರ್ಣ ಮಾತನಾಡಿ , ಮೀನುಗಾರರು ತಮ್ಮ ದೈನಂದಿನ ಕೆಲಸದ ಒತ್ತಡದಲ್ಲಿಯೂ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಪರಿಸರದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳುವ ಮೂಲಕ, ಮಲ್ಪೆಯನ್ನು ಮಲೇರಿಯಾ, ಡೆಂಗ್ಯೂ, ಕಾಲರಾ ಹಾಗೂ ಇನ್ನಿತರ ಸಾಂಕ್ರಾಮಿಕ ಖಾಯಿಲೆಗಳಿಂದ ಹಾಗೂ ತಂಬಾಕು ಮುಕ್ತ ಮಲ್ಪೆಯನ್ನಾಗಿ ಮಾಡಬೇಕು ಎಂದರು.

ಮೀನುಗಾರಿಕಾ ಇಲಾಖೆಯ ಉಪನಿರ್ದೇಶಕ ಗಣೇಶ್, ಸಹಾಯಕ ನಿರ್ದೇಶಕಿ ಸುಷ್ಮಾ, ಮಣಿಪಾಲದ ಕೆ.ಎಮ್.ಸಿ ವೈದ್ಯ ಡಾ.ಮುರುಳಿಧರ್ ಕುಲಕರ್ಣಿ, ಜಿಲ್ಲಾ ಮಲೇರಿಯಾಧಿಕಾರಿ ಡಾ. ಪ್ರಶಾಂತ ಭಟ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಶ್ರೀರಾಮ ರಾವ್ ಮತ್ತಿತರರು ಉಪಸ್ಥಿತರಿದ್ದರು. ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನಾಗರತ್ನ ಸ್ವಾಗತಿಸಿ, ಮನೋಜ್‌ ಕುಮಾರ್ ನಿರೂಪಿಸಿ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಆರೋಗ್ಯ ನಿಗಾ ಸಹಾಯಕರ ಉದ್ಯೋಗಾಧಾರಿತ ತರಬೇತಿ: ಅರ್ಜಿ ಆಹ್ವಾನ

ಉಡುಪಿ, ಸೆ.27: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಉಡುಪಿ ಇವರು ವತಿಯಿಂದ...

‘ದಸರಾ ದರ್ಶನಿ-2024’ ವಿಶೇಷ ಪ್ಯಾಕೇಜ್; ಉಡುಪಿ ಜಿಲ್ಲೆಯ ಪ್ರವಾಸಿ ಸ್ಥಳಗಳನ್ನು ವೀಕ್ಷಿಸಲು ಸುವರ್ಣಾವಕಾಶ

ಉಡುಪಿ, ಸೆ.27: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಉಡುಪಿ ಘಟಕದದಿಂದ...

ಬೀಚ್ ಸ್ವಚ್ಛತಾ ಕಾರ್ಯಕ್ರಮ

ಉಡುಪಿ, ಸೆ.27: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪ್ರವಾಸೋದ್ಯಮ ಇಲಾಖೆಯ ವತಿಯಿಂದ...

ತಾಯಿ ಮರಣ ಪ್ರಮಾಣ ಶೂನ್ಯಗೊಳಿಸಲು ಒತ್ತು ನೀಡಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ, ಸೆ.27: ಗರ್ಭಿಣಿ ಮಹಿಳೆಯರು ಹಾಗೂ ನವಜಾತ ಶಿಶುಗಳ ನಿರಂತರ ಕಾಳಜಿಯನ್ನು...
error: Content is protected !!