ಉಡುಪಿ: ಜಿಲ್ಲೆಯಲ್ಲಿ ಜಿ.ಪಿ.ಎಸ್ ಆಧಾರಿತ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯವು ಖಾಸಗಿ ನಿವಾಸಿಗಳ ಮೂಲಕ ಕೈಗ್ಗೊಳ್ಳಲಾಗಿದ್ದು, ಬೆಳೆ ಸಮೀಕ್ಷೆಯಲ್ಲಿ ನಮೂದಾದ ಬೆಳೆಗಳ ಬಗ್ಗೆ ರೈತರಿಗೆ ಆಕ್ಷೇಪಣೆ ಇದ್ದಲ್ಲಿ ಬೆಳೆ ದರ್ಶಕ್ ಮೊಬೈಲ್ ಆಪ್ ಮೂಲಕ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶವಿದ್ದು, “Bele Darshak Karnataka – 2021-22” ಆಪ್ ಅನ್ನು ಗೂಗಲ್ ಪ್ಲೇಸ್ಟೋರ್‌ನಿಂದ ಡೌನ್‌ಲೋಡ್ ಮಾಡಿಕೊಂಡು ಅಥವಾ ರೈತರು ಲಿಖಿತವಾಗಿ ತಮ್ಮ ಆಕ್ಷೇಪಣೆಗಳನ್ನು ಕೃಷಿ, ಕಂದಾಯ ಹಾಗೂ ತೋಟಗಾರಿಕಾ ಇಲಾಖೆಗಳಲ್ಲಿಯು ಸಹ ಸಲ್ಲಿಸಬಹುದಾಗಿದೆ.
ರೈತರಿಂದ ಸ್ವೀಕೃತವಾದ ಆಕ್ಷೇಪಣೆಗಳನ್ನು ಸಂಬಂಧಿಸಿದ ಗ್ರಾಮದ ಮೇಲ್ವಿಚಾರಕರಿಂದ ಪರಿಶೀಲಿಸಿ ಆಕ್ಷೇಪಣೆಗಳನ್ನು ಇತ್ಯರ್ಥಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.