Monday, February 24, 2025
Monday, February 24, 2025

ಹಿಂಗಾರು ಹಂಗಾಮಿನ ಬೆಳೆ ಸಮೀಕ್ಷೆ: ರೈತರಿಗೆ ಅವಕಾಶ

ಹಿಂಗಾರು ಹಂಗಾಮಿನ ಬೆಳೆ ಸಮೀಕ್ಷೆ: ರೈತರಿಗೆ ಅವಕಾಶ

Date:

ಉಡುಪಿ: ಪ್ರಸಕ್ತ ಸಾಲಿನಲ್ಲಿ ಜಿಲೆಯಲ್ಲಿ ಹಿಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯಕ್ಕೆ ರೈತರಿಗೆ ಅವಕಾಶ ನೀಡಲಾಗಿದ್ದು, ಮೊಬೈಲ್ ಆ್ಯಪ್‌ನ ಮೂಲಕ ಜಮೀನಿನ ಬೆಳೆ ವಿವರಗಳನ್ನು ದಾಖಲಿಸಲು ಡಿಸೆಂಬರ್ 31 ಕೊನೆಯ ದಿನವಾಗಿದೆ.

ರೈತರು ಗೂಗಲ್ ಪ್ಲೇ ಸ್ಟೋರ್‌ನಿಂದ Farmer Rabi Crop Survey Karnataka – 2021-22 ಆ್ಯಪ್‌ನ್ನು ಡೌನ್‌ಲೋಡ್ ಮಾಡಿ, ಆರ್ಥಿಕ ವರ್ಷ ಹಾಗೂ ಋತುವನ್ನು ದಾಖಲಿಸಿ, ಆಧಾರ್ QR ಕೋಡ್ ಸ್ಕ್ಯಾನ್ ಮಾಡಿ, ಮೊಬೈಲ್ ಸಂಖ್ಯೆ ನಮೂದಿಸಿ ಸಕ್ರಿಯಗೊಳಿಸುವುದರಿಂದ ಮೊಬೈಲ್ ಗೆ ಓ.ಟಿ.ಪಿ ಬರಲಿದ್ದು, ಓ.ಟಿ.ಪಿ ಯನ್ನು ದಾಖಲಿಸಿ, ಸಲ್ಲಿಸಬೇಕು.

ಜಿಲ್ಲೆ, ತಾಲೂಕು, ಹೋಬಳಿ, ಗ್ರಾಮ, ಸರ್ವೆ ನಂಬರ್, ಹಿಸ್ಸಾ, ಮಾಲೀಕನ ಹೆಸರು ಆಯ್ಕೆ ಮಾಡಿ, ಕ್ಷೇತ್ರ ನಮೂದಿಸಿ, ಸರ್ವೆ ನಂಬರ್‌ಗಳಡಿ ರೇಖೆಯೊಳಗೆ ನಿಂತು ವಿವರವನ್ನು ದಾಖಲಿಸಿ ಫೋಟೋ ತೆಗೆದು ಮಾಹಿತಿಯನ್ನು ಅಪ್‌ಲೋಡ್ ಮಾಡಬೇಕು.

ಬೆಳೆ ಸಮೀಕ್ಷೆ ಮಾಹಿತಿಯನ್ನು ಪೃಕೃತಿ ವಿಕೋಪಗಳ ಪರಿಹಾರ ವಿತರಣೆ, ಬೆಂಬಲ ಬೆಲೆ ಯೋಜನೆಯ ಅರ್ಹ ಫಲಾನುಭವಿಗಳ ಗುರುತಿಸುವಿಕೆ, ಬೆಳೆ ವಿಮೆ ಯೋಜನೆ ಅನುಷ್ಠಾನ, ಋತುಮಾನವಾರು ವಿವಿಧ ಬೆಳೆಗಳ ವಿಸ್ತೀರ್ಣ ವರದಿ ಕಾರ್ಯ, ಬೆಳೆ ಕಟಾವು ಪ್ರಯೋಗ ಅನುಷ್ಠಾನ, ಕೃಷಿ/ತೋಟಗಾರಿಕೆ/ರೇಷ್ಮೆ ಇಲಾಖೆಗಳ ಫಲಾನುಭವಿ ಆಧಾರಿತ ಯೋಜನೆಗಳ ಅನುಷ್ಠಾನ ಹಾಗೂ ಪಹಣಿಯಲ್ಲಿ ಬೆಳೆ ವಿವರ ದಾಖಲಿಸಲು ಬಳಸಲಾಗುತ್ತದೆ.

ರೈತರು ತಮ್ಮ ಜಮೀನಿನ ಬೆಳೆ ವಿವರವನ್ನು ಯಾವುದೇ ಲೋಪದೋಷಗಳಿಗೆ ಆಸ್ಪದವಿಲ್ಲದಂತೆ ತಾವೇ ದಾಖಲಿಸಲು ಸರ್ಕಾರದಿಂದ ಅವಕಾಶ ಕಲ್ಪಿಸಿದ್ದು, ಇದರ ಸಂಪೂರ್ಣ ಪ್ರಯೋಜನವನ್ನು ಪಡೆಯುವಂತೆ ಹಾಗೂ ಜಿಲ್ಲೆಯ ರೈತರು ನಿಗದಿತ ಅವಧಿಯೊಳಗೆ ಮೊಬೈಲ್ ಆ್ಯಪ್‌ನಲ್ಲಿ ಜಮೀನಿನ ಸರ್ವೆ ನಂಬರ್‌ವಾರು ಬೆಳೆ ವಿವರವನ್ನು ನಿಖರವಾಗಿ ದಾಖಲಿಸಿ ಹಿಂಗಾರು -2021ರ ಬೆಳೆ ಸಮೀಕ್ಷೆ ಕಾರ್ಯವನ್ನು ಯಶಸ್ವಿಗೊಳಿಸುವಂತೆ ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!