ಕಾಪು: ಬಿಜೆಪಿ ಯುವ ಮೋರ್ಚಾ ಕಾಪು ಮಂಡಲ ಇದರ ವತಿಯಿಂದ 75ನೇ ವರ್ಷದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಯುವ ತಿರಂಗಾ ಯಾತ್ರೆ ಕಾರ್ಯಕ್ರಮ ಶನಿವಾರ ನಡೆಯಿತು. ಕಟಪಾಡಿಯಿಂದ ಕಾಪು ಪೇಟೆಗೆ ತೆರಳಿ ಅಲ್ಲಿಂದ ಕಟಪಾಡಿ ವೆಂಕಟರಮಣ ದೇವಸ್ಥಾನದ ತನಕ ಸುಮಾರು 40 ರಷ್ಟು ಸೈಕಲ್ ಸವಾರರು ಜಾಥಾದಲ್ಲಿ ಪಾಲ್ಗೊಂಡರು.
ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಸುವರ್ಣ, ಕಾಪು ಮಂಡಲ ಅಧ್ಯಕ್ಷ ಶ್ರೀಕಾಂತ ನಾಯಕ್ ರವರು ಕಾಪು ಮಂಡಲ ಯುವ ಮೋರ್ಚಾ ಅಧ್ಯಕ್ಷ ಸಚಿನ್ ಸುವರ್ಣ ಇವರಿಗೆ ರಾಷ್ಟ್ರಧ್ವಜ ಹಸ್ತಾಂತರಿಸುವ ಮೂಲಕ ಚಾಲನೆ ನೀಡಿದರು.
ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ, ಕಾಪು ಬಿಜೆಪಿ ನಿಕಟಪೂರ್ವ ಅಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲಕ್ರಷ್ಣ ರಾವ್, ಮಂಡಲ ಉಪಾಧ್ಯಕ್ಷೆ ಪವಿತ್ರ ಶೆಟ್ಟಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಶೆಟ್ಟಿ, ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷರುಗಳಾದ ವಿಜೇತ್ ಕುಮಾರ್ ಬೆಳ್ಳರ್ಪಾಡಿ, ಅಕ್ಷಿತ್ ಶೆಟ್ಟಿ, ಸಚಿನ್ ಬೊಳ್ಜೆ, ಪ್ರವೀಣ್ ಪೂಜಾರಿ, ಕಾರ್ಯದರ್ಶಿಗಳಾದ ಸತೀಶ್ ಪೂಜಾರಿ, ಅಭಿರಾಜ್ ಸುವರ್ಣ, ಕೋಶಾಧಿಕಾರಿ ಯತೀಶ್, ಮಂಡಲ ಯುವ ಮೋರ್ಚಾ ಪದಾಧಿಕಾರಿಗಳಾದ ರಾಘವೇಂದ್ರ ಮಾಂಬೆಟ್ಟು, ಪ್ರವೀಣ್ ಅಡ್ವೆ, ಸೋನು ಪಾಂಗಳ, ಪ್ರಮುಖರಾದ ರವಿ ಕೋಟ್ಯನ್, ದಿಲೀಪ್, ನಿತಿನ್ ಸೇರಿಗಾರ್, ಸುಭಾಶ್ ಬಲ್ಲಾಳ್ ಮತ್ತಿತರರು ಉಪಸ್ಥಿತರಿದ್ದರು.