ಉಡುಪಿ: ಉಡುಪಿ ಜಿಲ್ಲೆಯಲ್ಲಿ 6 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-3, ಕುಂದಾಪುರ-1, ಕಾರ್ಕಳ-1, ಹೊರ ಜಿಲ್ಲೆಯ ಓರ್ವರು ಸೋಂಕಿಗೆ ಒಳಗಾಗಿದ್ದಾರೆ. 6 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 75807 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 103 ಸಕ್ರಿಯ ಪ್ರಕರಣಗಳಿವೆ.
ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 474 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಅಕ್ಟೋಬರ್ 3 ರಂದು 809 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 1146314 ಮಾದರಿಗಳನ್ನು ಪರೀಕ್ಷಿಸಲಾಗಿದೆ.