Saturday, January 18, 2025
Saturday, January 18, 2025

ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗ್ರತೆ ವಹಿಸಿ: ಜಿಲ್ಲಾಧಿಕಾರಿ ಜಿ.ಜಗದೀಶ್

ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗ್ರತೆ ವಹಿಸಿ: ಜಿಲ್ಲಾಧಿಕಾರಿ ಜಿ.ಜಗದೀಶ್

Date:

ಪ್ರಸಕ್ತ ಮಳೆಗಾಲದಲ್ಲಿ ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಎಲ್ಲಾ ಇಲಾಖೆಗಳು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು. ಅವರು ಶುಕ್ರವಾರ ಮಳೆಗಾಲದಲ್ಲಿ ಹರಡುವ ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸುವ ಕುರಿತಂತೆ ವಿವಿಧ ಇಲಾಖೆಗಳು ಕೈಗೊಳ್ಳಬೇಕಾದ ಕ್ರಮಗಳ ಕುರಿತು ನಡೆದ ವೀಡಿಯೋ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳಾದ ಮಲೇರಿಯಾ, ಡೆಂಗ್ಯೂ, ಚಿಕುನ್ ಗುನ್ಯಾ ರೋಗಗಳು ಹರಡದಂತೆ ಸಂಬಂಧಪಟ್ಟ ಎಲ್ಲಾ ಇಲಾಖೆಗಳು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು, ಜಿಲ್ಲೆಯಲ್ಲಿ ಪ್ರಸ್ತುತ 11 ಮಲೇರಿಯಾ ಪ್ರಕರಣಗಳು ವರದಿಯಾಗಿದ್ದು, 103 ಡೆಂಗ್ಯೂ ಪ್ರಕರಣಗಳು ವರದಿಯಾಗಿದೆ, ಡೆಂಗ್ಯೂ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡು ಬರುತ್ತಿದ್ದು, ಡೆಂಗ್ಯೂ ಹೆಚ್ಚಿರುವ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತುರ್ತು ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸೂಚಿಸಿದರು.

ಜಿಲ್ಲೆಯ ನಗರ ಪ್ರದೇಶಗಳಲ್ಲಿ ಕಟ್ಟಡ ನಿರ್ಮಾಣ ಪ್ರದೇಶದಲ್ಲಿ ನೀರು ನಿಲ್ಲದಂತೆ ಹಾಗೂ ಸೊಳ್ಳೆ ನಿಯಂತ್ರಣಾ ಮತ್ತು ನಾಶ ಕುರಿತು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು, ಚರಂಡಿಯಲ್ಲಿ ನೀರು ಸರಾಗವಾಗಿ ಹರಿದು ಹೋಗುವಂತೆ ಕ್ರಮ ಕೈಗೊಳ್ಳಬೇಕು, ಅಗತ್ಯವಿದ್ದಲ್ಲಿ ಲಾರ್ವಿಸೈಡ್ ಸಿಂಪರಣೆ ಮಾಡಬೇಕು, ಸಾರ್ವಜನಿಕರಿಗೆ ಕರಪತ್ರಗಳ ಮೂಲಕ ಜಾಗೃತಿ ಮೂಡಿಸಬೇಕು ಹಾಗೂ ರಸ್ತೆ ಬದಿಯಲ್ಲಿ ತರೆದ ವಾತಾವರಣದಲ್ಲಿ ಆಹಾರ ಪದಾರ್ಥಗಳ ವ್ಯಾಪಾರ ನಡೆಸದಂತೆ ಕ್ರಮ ಕೈಗೊಳ್ಳಭೆಕು ಎಂದು ಎಲ್ಲಾ ನಗರಸ್ಥಳಿಯ ಸಂಸ್ಥೆಗಳ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಆರೋಗ್ಯ ಇಲಾಖೆ ಮೂಲಕ ಗ್ರಾಮೀಣ ಪ್ರಧೇಶದಲ್ಲಿ ಮನೆ ಮನೆಗೆ ಭೇಟಿ ನೀಡಿ ಸಾಂಕ್ರಾಮಿಕ ರೋಗಗಳ ಕುರಿತು ಅರಿವು ಮೂಡಿಸಭೆಕು, ಗಣಿ ಇಲಾಖೆವತಿಯಿಂದ ಜಿಲ್ಲೆಯ ಗಣಿ ಪ್ರದೇಶದಲ್ಲಿ ನೀರು ನಿಲ್ಲದಂತೆ ಎಚ್ಚರ ವಹಿಸಬೇಕು, ಅನಾವಶ್ಯಕ ಕ್ವಾರಿಗಳನ್ನು ಮುಚ್ಚಬೇಕು ಹಾಗೂ ಕ್ವಾರಿಗಳಲ್ಲಿ ಲಾರ್ವಾಹಾರಿ ಮೀನುಗಳನ್ನು ಬಿಡಲು ಕ್ರಮ ಕೈಗೊಳ್ಳಬೆಕು ಎಂದರು.

ಕೈಗಾರಿಕಾ ಮತ್ತು ಕಾರ್ಮಿಕ ಇಲಾಖೆವತಿಯಿಂಧ ಕಾರ್ಮಿಕರು ವಾಸ ಮಾಡುವ ಪ್ರದೇಶಗಳಲ್ಲಿ ಸ್ವಚ್ಚತೆ ಕಾಪಾಡುವ ಕುರಿತಂತೆ ಅರಿವು ಮೂಡಿಸಬೇಕು, ಸೂಕ್ತ ರೀತಿಯಲ್ಲಿ ತ್ಯಾಜ್ಯ ವಿಲೇವಾರಿ ಮಾಡುವ ಮೂಲಕ ಸೊಳ್ಳೆಗಳು ಉತ್ಪತ್ತಿಯಾದಗಂತೆ ಎಚ್ಚರವಹಿಸಬೇಕು. ಬೇರೆ ರಾಜ್ಯದಿಂದ ಹೊಸದಾಗಿ ಕಾರ್ಮಿಕರು ಆಗಮಿಸಿದ್ದಲ್ಲಿ ಕೂಡಲೇ ಆರೋಗ್ಯ ಇಲಾಖೆಗೆ ಮಾಹಿತಿ ನೀಡಬೇಕು ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ, ಅಂಗನವಾಡಿ ಕಾರ್ಯಕರ್ತರನ್ನು ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚು ಅರಿವು ಕಾರ್ಯಕ್ರಮ ಆಯೋಜಿಸಬೆಕು, ಜಿಲ್ಲೆಯ ಸಮಾಜ ಕಲ್ಯಾಣ ಮತ್ತು ಹಿಂದುಗಳಿ ವರ್ಗಗಳ ಹಾಸ್ಟೆಲ್ ಗಳಲ್ಲಿ ವಾಸಿಸುತ್ತಿರುವ ವಿದ್ಯಾರ್ಥಿಗಳಿಗೆ ಸೊಳ್ಳೆ ಪರದೆಗಳನ್ನು ವಿತರಿಸಬೇಕು ಎಂದರು.

ಜಿಲ್ಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ವಲಸೆ ಕಾರ್ಮಿಕರು ಆಗಮಿಸುತ್ತಿದ್ದು, ಅವರು ಬೇರೆ ಕಡೆಯಿಂದ ಸಾಂಕ್ರಾಮಿಕ ರೋಗಪೀಡಿತರಾಗಿ ಬಂದು ಇಲ್ಲೂ ರೋಗ ಹರಡುವ ಸಾಧ್ಯತೆಗಳಿದ್ದು, ಅವರನ್ನು ಸೂಕ್ತ ರೀತಿಯಲ್ಲಿ ಆರೋಗ್ಯ ಪರೀಕ್ಷೆಗೆ ಒಳಪಡಿಸಬೇಕು, ಬಂದರು ಪ್ರದೇಶದಲ್ಲಿ ಬೋಟ್ ಗಳಲ್ಲಿ ನೀರು ನಿಂತು ಸೊಳ್ಳೆ ಉತ್ಪತ್ತಿಯಾಗಲಿದ್ದು ಆ ಪ್ರದೇಶಗಳಲ್ಲಿ ಹೆಚ್ಚಿನ ಗಮನಹರಿಸಿ, ಸೊಳ್ಳೆಗಳ ಉತ್ಪತ್ತಿಯನ್ನು ತಡೆಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು.

ಮೀನುಗಾರಿಕಾ ಇಲಾಖೆವತಿಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಲಾರ್ವಾಹಾರಿ ಮೀನುಗಳಾದ ಗಪ್ಪಿ ಮತ್ತು ಗ್ಯಾಂಬೂಷಿಯಾ ಮೀನುಗಳನ್ನು ಬೆಳೆಸಿ, ಜಿಲ್ಲೆಯಾದ್ಯಂತ ಲಭ್ಯವಾಗುವಂತೆ ಮತ್ತು ಆರೋಗ್ಯ ಇಲಾಖೆಗೆ ಒದಗಿಸುವಂತೆ ಹಾಗೂ ಸಾರ್ವಜನಿಕರಿಗೆ ಈ ಮೀನುಗಳ ದೊರೆಯುವ ಸ್ಥಳಗಳ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಿದರು.

ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗಗಳು ಹರಡುವುದನ್ನು ತಡೆಯುವಲ್ಲಿ ಅರೋಗ್ಯ ಇಲಾಖೆಯೊಂದಿಗೆ ಎಲ್ಲಾ ಇಲಾಖೆಗಳು ಸಕ್ರಿಯವಾಗಿ ಭಾಗವಹಿಸಿ, ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಜಿ.ಜಗದೀಶ್ ತಿಳಿಸಿದರು.

ಗ್ರಾಮೀಣ ಪ್ರದೇಶದಲ್ಲಿ ಸಾಂಕ್ರಾಮಿಕ ರೋಗಗಳು ಕಂಡುಬಂದಲ್ಲಿ ತಕ್ಷಣ ಮಾಹಿತಿ ನೀಡುವಂತೆ ತಿಳಿಸಿದ ಜಿಲ್ಲಾ ಪಂಚಾಯತ್ ಸಿಇಓ ಡಾ. ನವೀನ್ ಭಟ್, ಸಂಬಂಧಪಟ್ಟ ಪಂಚಾಯತ್ ವ್ಯಾಪ್ತಿಯಲ್ಲಿ ಪಂಚಾಯತ್ ವತಿಯಿಂದ ಸೂಕ್ತ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಡಿಹೆಚ್‌ಓ ಡಾ. ನಾಗಭೂಷಣ ಉಡುಪ, ಜಿಲ್ಲಾ ಸರ್ಜನ್ ಡಾ,ಮಧುಸೂದನ್ ನಾಯಕ್, ಜಿಲ್ಲಾ ರೋಗವಾಹಕ ನಿಯಂತ್ರಣಾಧಿಕಾರಿ ಡಾ.ಪ್ರಶಾಂತ್ ಭಟ್, ಆರೋಗ್ಯ ಇಲಾಖೆಯ ಹಾಗೂ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜಿನ ಅಗತ್ಯ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮಂಗಳೂರು, ಜ.17: ಜಿಲ್ಲೆಗೊಂದು ಸರ್ಕಾರಿ ವೈದ್ಯಕೀಯ ಕಾಲೇಜು ಇರಬೇಕು ಎನ್ನುವುದು ನನ್ನ...

ಕೋಟೆಕಾರ್ ಉಳ್ಳಾಲದ ಸಹಕಾರಿ ಬ್ಯಾಂಕ್ ದರೋಡೆ- ಮಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ತುರ್ತು ಸಭೆ

ಮಂಗಳೂರು, ಜ.17: ಕೋಟೆಕಾರ್ ಉಳ್ಳಾಲದ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಹಿನ್ನೆಲೆಯಲ್ಲಿ...

ಸಾಲಿಗ್ರಾಮ: ಯುವ ವೇದಿಕೆ 8ನೇ ವಾರ್ಷಿಕೋತ್ಸವ

ಕೋಟ, ಜ.17: ಯುವ ವೇದಿಕೆಯ ಸಮಾಜಮುಖಿ ಕಾರ್ಯಗಳು ಅತ್ಯಂತ ಪ್ರಶಂಸನೀಯ ಎಂದು...

ದೈಹಿಕ ವಿಕಲಚೇತನರಿಗೆ ಬ್ಯಾಟರಿ ಚಾಲಿತ ವೀಲ್ ಚೇರ್ ಸೌಲಭ್ಯ: ಅರ್ಜಿ ಆಹ್ವಾನ

ಉಡುಪಿ, ಜ.17: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ...
error: Content is protected !!