Sunday, September 22, 2024
Sunday, September 22, 2024

ಪುಟಾಣಿ ಮಕ್ಕಳಿಗೆ ಚಾಕೋಲೇಟ್, ಬಲೂನು ನೀಡಿ ಸ್ವಾಗತಿಸಿದ ಜಿಲ್ಲಾಧಿಕಾರಿ

ಪುಟಾಣಿ ಮಕ್ಕಳಿಗೆ ಚಾಕೋಲೇಟ್, ಬಲೂನು ನೀಡಿ ಸ್ವಾಗತಿಸಿದ ಜಿಲ್ಲಾಧಿಕಾರಿ

Date:

ಉಡುಪಿ: ಸುಮಾರು ಒಂದೂವರೆ ವರ್ಷಗಳ ನಂತರ ಜಿಲ್ಲೆಯಾದ್ಯಂತ ಇಂದು ಆರಂಭವಾದ ಅಂಗನವಾಡಿ ಕೇಂದ್ರಕ್ಕೆ ಆಗಮಿಸಿದ ಪುಟಾಣಿ ಮಕ್ಕಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಚಾಕೋಲೇಟ್, ಬಲೂನ್, ಗುಲಾಬಿ ಹೂ ನೀಡಿ ಪ್ರೀತಿಯಿಂದ ಸ್ವಾಗತಿಸಿದರು.

ಉಡುಪಿ ನಗರಸಭಾ ವ್ಯಾಪ್ತಿಯ ಕಡಿಯಾಳಿ ಅಂಗನವಾಡಿ ಕೇಂದ್ರದಲ್ಲಿ ಬಲೂನು, ತಳಿರು ತೋರಣಗಳಿಂದ ಸಿದ್ಧಪಡಿಸಿದ್ದ ಅಂಗನವಾಡಿ ಕೇಂದ್ರದ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಭಾಗವಹಿಸಿದರು.

ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಆಗಮನಕ್ಕೆ ತೆಗೆದುಕೊಂಡಿರುವ ಮುಂಜಾಗ್ರತಾ ಕ್ರಮಗಳು, ಸಿದ್ಧತೆಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ ಜಿಲ್ಲಾಧಿಕಾರಿಗಳು, ಮಕ್ಕಳು ಮತ್ತು ಪೋಷಕರು ಕೇಂದ್ರಕ್ಕೆ ಉತ್ಸಾಹದಿಂದ ಆಗಮಿಸುತ್ತಿದ್ದು, ಸ್ಥಳೀಯರಿಂದ ಉತ್ತಮ ಸಹಕಾರ ದೊರೆತಿದ್ದು, ಇಂದು ಜಿಲ್ಲೆಯ ಎಲ್ಲಾ 1191 ಅಂಗನವಾಡಿಗಳು ಆರಂಭಗೊAಡಿದ್ದು, ಎಲ್ಲಾ ಕೇಂದ್ರಗಳಲ್ಲಿ ಮಕ್ಕಳ ಸುರಕ್ಷತೆಗೆ ಗರಿಷ್ಠ ಸುರಕ್ಷಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಪೋಷಕರು ಯಾವುದೇ ಆತಂಕವಿಲ್ಲದೇ ಪ್ರತಿದಿನ ತಮ್ಮ ಮಕ್ಕಳನ್ನು ಅಂಗನವಾಡಿ ಕೇಂದ್ರಗಳಿಗೆ ಕಳುಹಿಸುವಂತೆ ಹೇಳಿದರು.

ಕಾರ್ಯಕ್ರಮದಲ್ಲಿ ನಗರಸಭಾ ಸದಸ್ಯೆ ಗೀತಾ ಶೇಟ್, ಬಾಲ ವಿಕಾಸ ಸಮಿತಿಯ ಸದಸ್ಯರು, ಪೋಷಕರು, ಸ್ಕೌಟ್ಸ್ ಮತ್ತು ಗೈಡ್ಸ್ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಮತ್ತಿತರರು ಭಾಗವಹಿಸಿದ್ದರು.

ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೀಣಾ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಅಂಗನವಾಡಿ ಕಾರ್ಯಕರ್ತೆ ಸುಮಲತಾ ವಂದಿಸಿದರು.

ಕಾಜಾರಾಗುತ್ತುನಲ್ಲಿ ಆರತಿ ಬೆಳಗಿ ಸ್ವಾಗತ: ಕಾಜಾರಗುತ್ತು ಅಂಗನವಾಡಿ ಕೇಂದ್ರಕ್ಕೆ ಆಗಮಿಸಿದ ಮಕ್ಕಳಿಗೆ ಆರತಿ ಬೆಳಗುವುದರ ಮೂಲಕ ಮತ್ತು ಪುಷ್ಪವೃಷ್ಠಿ ಸುರಿಸುವುದರ ಮೂಲಕ ನಲ್ಮೆಯ ಸ್ವಾಗತ ಕೋರಲಾಯಿತು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಶೇಷಪ್ಪ, ಕೋಡಿಬೆಟ್ಟು ಗ್ರಾ.ಪಂ.ಅಧ್ಯಕ್ಷೆ ಆಶಾ ಶೆಟ್ಟಿ, ಉಪಾಧ್ಯಕ್ಷ ಸದಾನಂದ ಪ್ರಭು, ಪಿಡಿಓ ರೇವತಿ, ಗ್ರಾ.ಪಂ.ನ ಸದಸ್ಯರು, ಬಾಲ ವಿಕಾಸ ಸಮಿತಿ ಸದಸ್ಯರು, ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಜ್ಯದ ದೇವಾಲಯಗಳಲ್ಲಿ ಮೊದಲಿನಿಂದಲೂ ಪರಿಶುದ್ಧ ಪ್ರಸಾದ

ಬೆಂಗಳೂರು, ಸೆ. 21: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ,...

ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು ಸೂಚನೆ

ಬೆಂಗಳೂರು, ಸೆ. 21: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ...

ಗಿಡ ನೆಡುವ ಕಾರ್ಯಕ್ರಮ

ಉಡುಪಿ, ಸೆ.21: ಸ್ವಚತಾ ಹೀ ಅಂದೋಲನ ಪಾಕ್ಷಿಕ-2024 ಆಚರಣೆಯ ಅಂಗವಾಗಿ ನಮ್ಮ...

ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾ

ಉಡುಪಿ, ಸೆ.21: ಭಾರತೀಯ ರೆಡ್‌ಕ್ರಾಸ್ ರಾಜ್ಯ ಶಾಖೆ ಮತ್ತು ಉಡುಪಿ ಜಿಲ್ಲಾ...
error: Content is protected !!