Monday, October 26, 2026
Monday, October 26, 2026

ಕೋವಿಡ್ 3ನೇ ಅಲೆ ಎದುರಿಸಲು ಜಿಲ್ಲಾಡಳಿತ ಸಜ್ಜು: ಸಚಿವ ಸುನೀಲ್ ಕುಮಾರ್

ಕೋವಿಡ್ 3ನೇ ಅಲೆ ಎದುರಿಸಲು ಜಿಲ್ಲಾಡಳಿತ ಸಜ್ಜು: ಸಚಿವ ಸುನೀಲ್ ಕುಮಾರ್

Date:

ಉಡುಪಿ: ಜಿಲ್ಲೆಯಲ್ಲಿ ಕೋವಿಡ್ 3 ನೇ ಅಲೆಯನ್ನು ಎದುರಿಸಲು ಜಿಲ್ಲಾಡಳಿತ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳುತ್ತಿದ್ದು, ಸರಕಾರದ ಕಾರ್ಯಗಳಿಗೆ ಸಾರ್ವಜನಿಕರು ಮತ್ತು ಖಾಸಗಿ ಸಂಸ್ಥೆಗಳು ಕೈ ಜೋಡಿಸಿದಾಗ ಸರಕಾರದ ಕೆಲಸ ಯಶಸ್ವಿಯಾಗುವುದರ ಜೊತೆಗೆ ಸಮಾಜವೂ ಸ್ವಾಸ್ಥ್ಯದಿಂದ ಇರಲು ಸಾಧ್ಯ ಎಂದು ರಾಜ್ಯದ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ಹೇಳಿದರು.

ಅವರು ಸೋಮವಾರ ಉಡುಪಿ ಜಿಲ್ಲಾಸ್ಪತ್ರೆ ಆವರಣದಲ್ಲಿ ಶ್ರೀ ಲಕ್ಷ್ಮಿ ವೆಂಕಟೇಶ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ವತಿಯಿಂದ 16.5 ಲಕ್ಷ ರೂ ವೆಚ್ಚದಲ್ಲಿ ಜಿಲ್ಲಾಡಳಿತಕ್ಕೆ ನೀಡಿದ ಆಂಬುಲೆನ್ಸ್ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಜಿಲ್ಲೆಯಲ್ಲಿ ಕೋವಿಡ್ ಸಂದರ್ಭದಲ್ಲಿ ಆರೋಗ್ಯ ಇಲಾಖೆಗೆ ಎದುರಾದ ಎಲ್ಲಾ ಸವಾಲುಗಳನ್ನು ಸರಕಾರ ಸಮರ್ಥವಾಗಿ ಎದುರಿಸಿದೆ. ಕೋವಿಡ್ ಮೊದಲನೇ ಮತ್ತು ಎರಡನೇ ಅಲೆ ಸಂದರ್ಭದಲ್ಲಿ ಸರಕಾರದ ಕಾರ್ಯದಲ್ಲಿ ಸಾರ್ವಜನಿಕ ಸಂಘ ಸಂಸ್ಥೆಗಳು ಹೆಚ್ಚಿನ ನೆರವು ನೀಡುವುದರ ಮೂಲಕ ಹಾಗೂ ದಾನಿಗಳು ನೀಡಿದ ಕೊಡುಗೆಗಳ ಮೂಲಕ ಆರೋಗ್ಯ ಇಲಾಖೆಯನ್ನು ಇನ್ನಷ್ಟು ಸುಸ್ಥಿರಗೊಳಿಸಲು ಸಾಧ್ಯವಾಗಿದ್ದು ಇದಕ್ಕಾಗಿ ಜಿಲ್ಲೆಯ ಎಲ್ಲಾ ಸಂಘ ಸಂಸ್ಥೆಗಳಿಗೆ, ದಾನಿಗಳಿಗೆ ಕೃತಜ್ಞತೆ ಸಲ್ಲಿಸುವುದಾಗಿ ಸಚಿವರು ಹೇಳಿದರು.

ಕಾರ್ಯಕ್ರಮದಲ್ಲಿ ಶಾಸಕ ಕೆ. ರಘುಪತಿ ಭಟ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ. ರಾಘವೇಂದ್ರ ಕಿಣಿ, ಜಿಲ್ಲಾ ಸರ್ಜನ್ ಡಾ.ಮಧುಸೂದನ್ ನಾಯಕ್, ಡಿ.ಹೆಚ್.ಓ ಡಾ. ನಾಗಭೂಷಣ್ ಉಡುಪ, ಶ್ರೀ ಲಕ್ಷ್ಮಿ ವೆಂಕಟೇಶ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್‌ನ ಅಧ್ಯಕ್ಷ ಎಂ. ಶ್ರೀನಿವಾಸ್ ಭಟ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಾಗತಿಕ ತೈಲ ಬೆಲೆ: ಗರಿಷ್ಠ ಏರಿಕೆ ನಂತರ ಸುಮಾರು 2% ರಷ್ಟು ಕುಸಿತ

ನವದೆಹಲಿ, ಅ.26: ಸುಮಾರು ಆರು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ಏರಿದ ನಂತರ...

ಬ್ರೆಜಿಲ್‌ನಲ್ಲಿ ನಾಲ್ಕನೇ ಬಾರಿಗೆ ಅಧಿಕಾರಕ್ಕೆ ಬಂದ ಲುಲಾ; ಲ್ಯಾಟಿನ್ ಅಮೆರಿಕದಲ್ಲಿ ಟ್ರಂಪ್ ಪ್ರಭಾವಕ್ಕೆ ಹಿನ್ನಡೆ

ಯು.ಬಿ.ಎನ್.ಡಿ., ಅ.26: ಭಾನುವಾರ ನಡೆದ ಬ್ರೆಜಿಲ್‌ನ ನಿರ್ಣಾಯಕ ಮತದಾನದಲ್ಲಿ ಸೆನೆಟರ್ ಫ್ಲಾವಿಯೊ...

ಆತ್ಮವಿಶ್ವಾಸದಿಂದ ಇಂಗ್ಲೀಷ್ ಸಂವಹನ

ಬಸ್ರೂರು, ಅ.26: ಬಸ್ರೂರು ಶ್ರೀ ಶಾರದಾ ಕಾಲೇಜಿನ ಇಂಗ್ಲೀಷ್ ವಿಭಾಗದ ವತಿಯಿಂದ...

ಏಷ್ಯನ್ ಪ್ಯಾರಾ ಕ್ರೀಡಾಕೂಟ: 114 ಪದಕಗಳೊಂದಿಗೆ ಭಾರತದ ಭರ್ಜರಿ ಪ್ರದರ್ಶನ

ಜಪಾನ್‌ನ ನಗೋಯಾದಲ್ಲಿರುವ ಮಿಜುಹೋ ಪಾರ್ಕ್ ಅಥ್ಲೆಟಿಕ್ಸ್ ಕ್ರೀಡಾಂಗಣದಲ್ಲಿ ನಡೆದ 2026 ಏಷ್ಯನ್...
error: Content is protected !!