Friday, September 25, 2026
Friday, September 25, 2026

ನ. 27- ಜಿಲ್ಲಾಮಟ್ಟದ ಯುವಜನೋತ್ಸವ

ನ. 27- ಜಿಲ್ಲಾಮಟ್ಟದ ಯುವಜನೋತ್ಸವ

Date:

ಉಡುಪಿ: ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ಜಿಲ್ಲಾ ಮಟ್ಟದ ಯುವಜನೋತ್ಸವ ಕಾಯಕ್ರಮನ್ನು ನವೆಂಬರ್ 27 ರಂದು ಉಡುಪಿಯ ಪುರಭವನದಲ್ಲಿ ಆಯೋಜಿಸಲಾಗಿದೆ.

ಕಾರ್ಯಕ್ರಮದಲ್ಲಿ ಜಾನಪದ ನೃತ್ಯ (ಗುಂಪು ಸ್ಪರ್ಧೆ), ಜಾನಪದ ಹಾಡು (ಗುಂಪು ಸ್ಪರ್ಧೆ), ಏಕಾಂಕ ನಾಟಕ (ಹಿಂದಿ, ಇಂಗ್ಲೀಷ್, ಕನ್ನಡ – ಗುಂಪು ಸ್ಫರ್ಧೆ), ಶಾಸ್ತ್ರೀಯ ಗಾಯನಗಳಾದ ಹಿಂದೂಸ್ಥಾನಿ ಸಂಗೀತ ಹಾಗೂ ಕರ್ನಾಟಕ ಸಂಗೀತ (ವೈಯಕ್ತಿಕ ಸ್ಪರ್ಧೆ), ಶಾಸ್ತ್ರೀಯ ವಾದ್ಯಗಳಾದ ತಬಲಾ, ಸಿತಾರ್, ಕೊಳಲು, ವೀಣೆ, ಮೃದಂಗ (ವೈಯಕ್ತಿಕ), ಹಾರ್ಮೋನಿಯಂ ಹಾಗೂ ಗಿಟಾರ್ (ವೈಯಕ್ತಿಕ), ಶಾಸ್ತ್ರೀಯ ನೃತ್ಯಗಳಾದ ಭರತನಾಟ್ಯ, ಒಡಿಸ್ಸಿ, ಮಣಿಪುರಿ, ಕಥಕ್ ಮತ್ತು ಕೂಚುಪುಡಿ (ವೈಯಕ್ತಿಕ) ಮತ್ತು ಆಶುಭಾಷಣ (ಹಿಂದಿ/ಇಂಗ್ಲಿಷ್/ಕನ್ನಡ-ವೈಯಕ್ತಿಕ) ಸ್ಪರ್ಧೆಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

15 ರಿಂದ 29 ವರ್ಷದೊಳಗಿನ ಯುವಕ/ಯುವತಿಯರು ಮತ್ತು ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಸ್ಫರ್ಧೆಯಲ್ಲಿ ಭಾಗವಹಿಸಬಹುದಾಗಿದ್ದು, ಸ್ಪರ್ಧಿಗಳು ತಮ್ಮ ನೋಂದಾವಣಿಯನ್ನು ಸ್ಪರ್ಧೆ ನಡೆಯುವ ಸ್ಥಳದಲ್ಲಿ ಬೆಳಗ್ಗೆ 9 ಗಂಟೆಯೊಳಗೆ ಸಂಘಟಕರಲ್ಲಿ ವರದಿ ಮಾಡಿಕೊಳ್ಳಬೇಕು.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದೂ.ಸಂ: 0820-2521324 ನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೃತಕ ಬುದ್ಧಿಮತ್ತೆ (ಎಐ), ಬಾಹ್ಯಾಕಾಶ, ಇಂಧನ ಮತ್ತು ಸಂಸ್ಕೃತಿ ಕುರಿತು ಮಹತ್ವದ ಚರ್ಚೆ ನಡೆಸಿದ ಭಾರತ, ಯುಎಇ ಮತ್ತು ಫ್ರಾನ್ಸ್‌

ಯು.ಬಿ.ಎನ್.ಡಿ., ಸೆ.24: ನ್ಯೂಯಾರ್ಕ್‌ನಲ್ಲಿ ನಡೆದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 81ನೇ ಅಧಿವೇಶನದ...

ಕುಂದಾಪ್ರ ಕನ್ನಡ: ಭಾಷಾ ವಿಶೇಷತೆ- ವಿಶೇಷ ಉಪನ್ಯಾಸ

ಕುಂದಾಪುರ, ಸೆ.24: ಡಾ. ಬಿ. ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ...

ಉಡುಪಿಯ ಹಲವೆಡೆ ದಿನವಿಡೀ ಉತ್ತಮ ಮಳೆ

ಉಡುಪಿ, ಸೆ.24: ಉಡುಪಿಯ ಹಲವೆಡೆ ಗುರುವಾರ ಉತ್ತಮ ಮಳೆಯಾಗಿದೆ. ಕಾರ್ಕಳ, ಮಣಿಪಾಲ,...
error: Content is protected !!