ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಜುಲೈ 5ರವರೆಗೆ ನಿರ್ಬಂಧಗಳನ್ನು ವಿಸ್ತರಿಸಿ ದ.ಕ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ನಾಳೆಯಿಂದ (ಜೂನ್ 21) ಜುಲೈ 5ರವರೆಗೆ ಹೊಸ ನಿಯಮಗಳು ಜಾರಿಯಲ್ಲಿರಲಿದೆ.
ಹೊಸ ನಿಯಮಗಳೇನು?
ಪ್ರತಿನಿತ್ಯ ಬೆಳಿಗ್ಗೆ 7ರಿಂದ ಮಧ್ಯಾಹ್ನ 1ರವರೆಗ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ.
ನೈಟ್ ಕರ್ಫ್ಯೂ: ಜಿಲ್ಲೆಯಾದ್ಯಂತ ರಾತ್ರಿ 7ರಿಂದ ಬೆಳಿಗ್ಗೆ 7ರ ವರೆಗೆ.
ವೀಕೆಂಡ್ ಕರ್ಫ್ಯೂ: ಶುಕ್ರವಾರ ಸಂಜೆ 7 ರಿಂದ ಸೋಮವಾರ ಬೆಳಿಗ್ಗೆ 7ರ ವರೆಗೆ.
ಜಿಲ್ಲೆಯಾದ್ಯಂತ ಯಾವುದೇ ಬಸ್ ಸಂಚಾರಕ್ಕೂ ಅನುಮತಿ ಇಲ್ಲ.
ಮಧ್ಯಾಹ್ನ 1ರ ವರೆಗೆ ಆಹಾರ, ದಿನಸಿ, ಹಣ್ಣು-ತರಕಾರಿ, ಮೀನು-ಮಾಂಸ, ಬೀದಿಬದಿ ವ್ಯಾಪಾರ ಮತ್ತು ಮದ್ಯ ಪಾರ್ಸೆಲ್‌ಗಷ್ಟೇ ಅವಕಾಶ.
ನಿರ್ಮಾಣ ಚಟುವಟಿಕೆಗಳಿಗೆ ಅವಕಾಶ ಮತ್ತು ಅವುಗಳಿಗೆ ಬೇಕಾದ ಸ್ಟೀಲ್, ಸಿಮೆಂಟ್ ಅಂಗಡಿಗಳನ್ನು ತೆರೆಯಲು ಅನುಮತಿ.
ಜಿಲ್ಲೆಯಲ್ಲಿ ಪಾರ್ಕ್ ಮತ್ತು ಸಾರ್ವಜನಿಕ ಉದ್ಯಾನವನಗಳು ತೆರೆಯುವುದಿಲ್ಲ.
ಕೆಎಸ್ಆರ್‌ಟಿಸಿ ಬಸ್ಸು ಜಿಲ್ಲೆಯಿಂದ ಹೊರಗೆ ಹಾಗೂ ಒಳಗೆ ಓಡಾಟವಿಲ್ಲ.
ಆಟೋ ರಿಕ್ಷಾ ಮತ್ತು ಟ್ಯಾಕ್ಸಿಯಲ್ಲಿ ಕೇವಲ ಇಬ್ಬರು ಪ್ರಯಾಣಿಕರು ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಿ ಸಂಚರಿಸಬಹುದು.