Sunday, February 23, 2025
Sunday, February 23, 2025

ತೂಗು ಸೇತುವೆಯ ಹರಿಕಾರ ಗಿರೀಶ್ ಭಾರದ್ವಾಜ್ ಅವರಿಗೆ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ

ತೂಗು ಸೇತುವೆಯ ಹರಿಕಾರ ಗಿರೀಶ್ ಭಾರದ್ವಾಜ್ ಅವರಿಗೆ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ

Date:

ಕೋಟ: ಕೋಟತಟ್ಟು ಗ್ರಾಮ ಪಂಚಾಯತ್ ಕೋಟ, ಡಾ. ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ (ರಿ.)ದ ಸಹಭಾಗಿತ್ವದಲ್ಲಿ ಕಳೆದ ಹದಿನಾರು ವರ್ಷಗಳಿಂದ ಕಾರಂತರ ವಿವಿಧ ಆಸಕ್ತಿ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಡಾ. ಶಿವರಾಮ ಕಾರಂತ ಹುಟ್ಟೂರ ಪುರಸ್ಕಾರ ನೀಡುತ್ತಾ ಬಂದಿದೆ. ಈಗಾಗಲೇ ವೀರಪ್ಪ ಮೊಯ್ಲಿ, ವೆಂಕಟಾಚಲ, ಕೆ.ರಾಮಕೃಷ್ಣ ಹಂದೆ, ರವಿ ಬೆಳಗೆರೆ, ಗಿರೀಶ ಕಾಸರವಳ್ಳಿ, ಜಯಶ್ರೀ, ಮೋಹನ ಆಳ್ವ, ಸಾಲು ಮರದ ತಿಮ್ಮಕ್ಕ, ಚಿಟ್ಟಾಣಿ ರಾಮಚಂದ್ರ ಹೆಗಡೆ, ಜಯಂತ ಕಾಯ್ಕಿಣಿ, ಸದಾನಂದ ಸುವರ್ಣ, ಡಾ. ಬಿ. ಎಂ ಹೆಗ್ಡೆ, ಪ್ರಕಾಶ್ ರೈ, ಶ್ರೀಪಡ್ರೆ, ಕವಿತಾ ಮಿಶ್ರ, ನಾಡೋಜ ಡಾ.ಎಸ್.ಎಲ್.ಭೈರಪ್ಪ ಅವರಿಗೆ ಪ್ರದಾನ ಮಾಡಲಾಗಿರುತ್ತದೆ.

ಕೋಟ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ 2021ರ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಗಿರೀಶ್ ಭಾರದ್ವಾಜ್ ಅವರನ್ನು ಆಯ್ಕೆ ಸಮಿತಿ ಆಯ್ಕೆ ಮಾಡಿದೆ. ’ಸೇತುಬಂಧು’ ಎಂದೇ ಕರೆಯಲ್ಪಡುವ ಗಿರೀಶ್ ಭಾರದ್ವಾಜ್ ಗ್ರಾಮೀಣ ಪ್ರದೇಶದ ಜನರ ಜೀವನದಲ್ಲಿ ಹೊಸ ಬೆಳಕು ಮೂಡಿಸುವಂತೆ 130 ತೂಗು ಸೇತುವೆ ನಿರ್ಮಾಣ ಮಾಡಿದವರು. ಅಲ್ಲದೇ ಸಮಾಜ ಸೇವೆಯಲ್ಲೂ ಕ್ರೀಯಾಶೀಲರಾದವರು. ಇವರ ಸಾಧನೆಯನ್ನು ಪರಿಗಣಿಸಿ ಭಾರತ ಸರಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದೆ.

ಅಕ್ಟೋಬರ್ ಹತ್ತರಂದು ಡಾ. ಕೋಟ ಶಿವರಾಮ ಕಾರಂತರ ಹುಟ್ಟುಹಬ್ಬದ ದಿನ ಡಾ. ಕಾರಂತ ಹುಟ್ಟೂರ ಪ್ರಶಸ್ತಿಯನ್ನು ಇವರಿಗೆ ಪ್ರದಾನ ಮಾಡಲಾಗುತ್ತದೆ. ಈ ಬಾರಿ ಕಾರಂತ ಜನ್ಮ ದಿನೋತ್ಸವದ ಅಂಗವಾಗಿ ಅಕ್ಟೋಬರ್ ಒಂದರಿಂದ
ಹತ್ತರವರೆಗೆ ಹತ್ತು ದಿನಗಳ ಸಾಂಸ್ಕೃತಿಕ- ಸಾಹಿತ್ಯಿಕ ಸುಗ್ಗಿ ಕಾರ್ಯಕ್ರಮವನ್ನು ಆನ್‌ಲೈನ್ ಮೂಲಕ ಹಮ್ಮಿಕೊಳ್ಳಲಾಗಿದೆ. ಕಾರಂತ ಚಿಂತನ,-ನೃತ್ಯ ಪ್ರದರ್ಶನ, ಸಂಗೀತ ಸುಧೆ-ಯಕ್ಷ-ನಾಟ್ಯ-ವೈಭವ ಮೊದಲಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು ಕಾರಂತ ಥೀಮ್ ಪಾರ್ಕ್ ಯುಟ್ಯೂಬ್ ಹಾಗೂ ಪೇಸ್ ಬುಕ್ ಪೇಜ್ ನಲ್ಲಿ ಪ್ರಸಾರಗೊಳ್ಳಲಿದೆ ಎಂದು ಆಯೋಜಕರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಅಶ್ವಿನಿ ದಿನೇಶ್, ಆಯ್ಕೆ ಸಮಿತಿಯ ಸದಸ್ಯರರಾದ ಯು. ಎಸ್. ಶೆಣೈ, ಕಾರಂತ ಥೀಮ್ ಪಾರ್ಕ್ ವಿಶೇಷ ಕರ್ತವ್ಯಾಧಿಕಾರಿ ಪೂರ್ಣಿಮಾ, ಕೋಟತಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ವಾಸು ಪೂಜಾರಿ, ಪಿ.ಡಿ.ಓ ಶೈಲಾ ಎಸ್ ಪೂಜಾರಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!