Thursday, July 30, 2026
Thursday, July 30, 2026

ಸಮುದಾಯ ಮಧುಮೇಹ ತಡೆಗಟ್ಟುವಿಕೆ ಮತ್ತು ದೀರ್ಘಕಾಲದ ಮೂತ್ರಪಿಂಡ ಕಾಯಿಲೆ ಜಾಗೃತಿ

ಸಮುದಾಯ ಮಧುಮೇಹ ತಡೆಗಟ್ಟುವಿಕೆ ಮತ್ತು ದೀರ್ಘಕಾಲದ ಮೂತ್ರಪಿಂಡ ಕಾಯಿಲೆ ಜಾಗೃತಿ

Date:

ರೋಟರಿ ಕ್ಲಬ್ ಮಣಿಪಾಲದ ಮಹಾತ್ವಕಾಂಕ್ಷೆ ಜಾಗತಿಕ ಅನುದಾನ ಯೋಜನೆಯಾದ “ಸಮುದಾಯ ಮಧುಮೇಹ ತಡೆಗಟ್ಟುವಿಕೆ ಮತ್ತು ದೀರ್ಘಕಾಲದ ಮೂತ್ರಪಿಂಡ ಕಾಯಿಲೆ (ಸಿಕೆಡಿ) ಜಾಗೃತಿ ಕಾರ್ಯಕ್ರಮವನ್ನು  ರೋಟರಿ ಜಿಲ್ಲಾ 3182 ನ ಗವರ್ನರ್ ರಾಜಾರಾಮ್ ಭಟ್ ಅವರು ಡಾ. ಟಿಎಂಎ ಪೈ ರೋಟರಿ ಆಸ್ಪತ್ರೆ ಕಾರ್ಕಳದಲ್ಲಿ ಉದ್ಘಾಟಿಸಿದರು.

ಸಮುದಾಯ ಮಧುಮೇಹ ತಡೆಗಟ್ಟುವಿಕೆ, ಚಿಕಿತ್ಸೆ ಮತ್ತು ದೀರ್ಘಕಾಲದ ಮೂತ್ರಪಿಂಡ ಕಾಯಿಲೆಗಳ ಬಗ್ಗೆ ಜಾಗೃತಿ ಮೂಡಿಸಲು ಆರೋಗ್ಯ ಶಿಬಿರಗಳನ್ನು ನಡೆಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಈ ಯೋಜನೆಯ ಭಾಗವಾಗಿ ಮೂರು ಡಯಾಲಿಸಿಸ್ ಯಂತ್ರಗಳನ್ನು ನೀಡಲಾಯಿತು.

ಈ ಯೋಜನೆಯು ಸುಮಾರು 25 ಲಕ್ಷ ರೂಪಾಯಿ ಮೌಲ್ಯದ್ದಾಗಿದೆ. ಸರಳ ಉದ್ಘಾಟನಾ ಕಾರ್ಯಕ್ರಮದಲ್ಲಿ ರೋಟರಿ ಜಿಲ್ಲಾ 3182 ನ ಚುನಾಯಿತ ಗವರ್ನರ್ ಡಾ. ಎಚ್ ಜಯಗೌರಿ, ರೋಟರಿ ಕ್ಲಬ್ ಮಣಿಪಾಲದ ಅಧ್ಯಕ್ಷರಾದ ಪ್ರಶಾಂತ್ ಹೆಗ್ಡೆ, ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ವೈದ್ಯಕೀಯ ಅಧೀಕ್ಷಕರಾದ ಡಾ. ಅವಿನಾಶ್ ಶೆಟ್ಟಿ, ರೋಟರಿ ಪೂರ್ವ ಜಿಲ್ಲಾ ಗವರ್ನರ್ ಡಾ. ಭರತೇಶ್ ಅಧಿರಾಜ್, ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಮೂತ್ರ ಪಿಂಡ ವಿಭಾಗದ ಮುಖ್ಯಸ್ಥರಾದ ಡಾ. ಶಂಕರ್ ಪ್ರಸಾದ್ ಮತ್ತು ಪ್ರಾಧ್ಯಾಪಕರಾದ ಡಾ. ರವೀಂದ್ರ ಪ್ರಭು, ಡಾ. ಟಿಎಂಎ ಪೈ ರೋಟರಿ ಆಸ್ಪತ್ರೆ ಕಾರ್ಕಳದ ಮುಖ್ಯ ವೈದ್ಯಕೀಯ ಅಧಿಕಾರಿ ಡಾ. ಕೀರ್ತಿನಾಥ ಬಲ್ಲಾಳ ಹಾಗೂ ವರ್ಚುವಲ್ ಮೂಲಕ ಅನೇಕ ರೋಟರಿ ಗಣ್ಯರು ಭಾಗವಹಿಸಿದ್ದರು.

ಜುಲೈ 6 ಮಂಗಳವಾರದಿಂದ ಜಾರಿಗೆ ಬರುವಂತೆ ಮೂತ್ರಪಿಂಡ ವಿಭಾಗದ ಹೊರರೋಗಿ ವಿಭಾಗ ಮತ್ತು ಡಯಾಲಿಸಿಸ್ ಸೌಲಭ್ಯವನ್ನು ಆರಂಭಿಸಲಾಗುವುದು. ಈ ವಿಭಾಗವು ಪ್ರತಿ ಮಂಗಳವಾರ ಮತ್ತು ಶುಕ್ರವಾರ ಮಧ್ಯಾಹ್ನ 2.00ರಿಂದ ಸಂಜೆ 5.00ರ ವರಗೆ ಕಾರ್ಯನಿರ್ವಹಿಸಲಿದೆ. ಡಯಾಲಿಸಿಸ್ ಸೌಲಭ್ಯವು ಪ್ರತಿ ದಿನ ದೊರೆಯಲಿದೆ ಎಂದು ಆಸ್ಪತ್ರೆಯ ಮುಖ್ಯ ವೈದ್ಯಕೀಯ ಅಧಿಕಾರಿ ಡಾ. ಕೀರ್ತಿನಾಥ ಬಲ್ಲಾಳ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಕರೆ ಮಾಡಿ- 9731601149, 08258 230583. 

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ

ನವದೆಹಲಿ, ಜು.29: ಲೋಕಸಭೆ ಬುಧವಾರ ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ)...

ಶಾಸಕ ಯಶ್ಪಾಲ್ ಸುವರ್ಣ ಅವರಿಗೆ ನೋಟೀಸ್

ಉಡುಪಿ, ಜು.29: ರಾಹುಲ್ ಗಾಂಧಿ ವಿರುದ್ಧ ಶಾಸಕ ಯಶ್ಪಾಲ್ ಸುವರ್ಣ ಅವರು...

ಹಡಪದ ಅಪ್ಪಣ್ಣ ರವರ ಚಿಂತನೆಗಳು ಮನುಕುಲದ ಉದ್ಧಾರಕ್ಕೆ ದಾರಿದೀಪ: ಮಂಜುನಾಥ ಪೂಜಾರಿ

ಉಡುಪಿ, ಜು.29: ಹನ್ನೆರಡನೇ ಶತಮಾನದಲ್ಲಿ ಬಸವಣ್ಣನವರ ಅನುಯಾಯಿಯಾಗಿದ್ದ ಶಿವಶರಣ ಹಡಪದ ಅಪ್ಪಣ್ಣ...

ಚಾತುರ್ಮಾಸ ಸಾಧನೆಗೆ ಶ್ರೇಷ್ಠ ಕಾಲ: ಭಂಡಾರಕೇರಿ ಶ್ರೀ ವಿದ್ಯೇಶ ತೀರ್ಥ ಶ್ರೀಪಾದರು

ಬಾರಕೂರು, ಜು.೨೯: ಶ್ರಾವಣದಿಂದ ಕಾರ್ತಿಕ ಮಾಸದವರೆಗಿನ ನಾಲ್ಕು ತಿಂಗಳ ಕಾಲ ಭಗವಂತ...
error: Content is protected !!