Home ಸುದ್ಧಿಗಳು ಪ್ರಾದೇಶಿಕ ಇ-ಕೆವೈಸಿ ನೊಂದಣಿಗೆ ಅಂತಿಮ ಅವಕಾಶ

ಇ-ಕೆವೈಸಿ ನೊಂದಣಿಗೆ ಅಂತಿಮ ಅವಕಾಶ

866
0

ಉಡುಪಿ: ಜಿಲ್ಲೆಯಲ್ಲಿ ಈವರೆಗೆ ಇ-ಕೆವೈಸಿ ಆಗದೇ ಇರುವ ಪಡಿತರ ಚೀಟಿಯ ಸದಸ್ಯರು, ನವೆಂಬರ್ 30 ರ ಒಳಗೆ ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ, ಬೆರಳಚ್ಚು ನೊಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

5 ಹಾಗೂ 15 ವರ್ಷ ತುಂಬಿದ ಮಕ್ಕಳ ಬಯೋಮೆಟ್ರಿಕ್ ದಾಖಲೆಗಳನ್ನು ಆಧಾರ್‌ನಲ್ಲಿ ನಮೂದಿಸಿ, ನಂತರ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಬೇಕು. ಪಡಿತರ ಚೀಟಿದಾರರು ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ಕಡ್ಡಾಯವಾಗಿ ನೋಂದಾಯಿಸಿಕೊಳ್ಳಬೇಕು.

ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಲಭ್ಯವಾಗದಿದ್ದಲ್ಲಿ ಅಂತಹವರ ಮಾಹಿತಿಯನ್ನು ಸಕಾರಣಗಳೊಂದಿಗೆ ನ್ಯಾಯಬೆಲೆ ಅಂಗಡಿಗೆ ಒದಗಿಸಬೇಕು.

ನವೆಂಬರ್ 30 ರ ಒಳಗೆ ಇ-ಕೆವೈಸಿ ಮಾಡದೇ ಇರುವ ಪಡಿತರ ಚೀಟಿ ಮತ್ತು ಸದಸ್ಯರ ಬಗ್ಗೆ ಸರ್ಕಾರದ ಸೂಕ್ತ ನಿರ್ದೇಶನದಂತೆ ಕ್ರಮವಹಿಸಲಾಗುವುದು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.