Friday, October 16, 2026
Friday, October 16, 2026

ಪರ್ಯಾಯ ಮಹೋತ್ಸವ- ಕಾಮಗಾರಿ ಕೈಗೊಳ್ಳಲು ಚುನಾವಣಾ ಆಯೋಗ ಅನುಮತಿ

ಪರ್ಯಾಯ ಮಹೋತ್ಸವ- ಕಾಮಗಾರಿ ಕೈಗೊಳ್ಳಲು ಚುನಾವಣಾ ಆಯೋಗ ಅನುಮತಿ

Date:

ಉಡುಪಿ: ಮುಂದಿನ ವರ್ಷ ಜನವರಿ ತಿಂಗಳಲ್ಲಿ ನಡೆಯಲಿರುವ ಉಡುಪಿ ಪರ್ಯಾಯ ಮಹೋತ್ಸವದ ಅಂಗವಾಗಿ ಉಡುಪಿ ನಗರಸಭೆ ಅನುದಾನದಲ್ಲಿ ನಗರದ ರಸ್ತೆಗಳ ಅಭಿವೃದ್ಧಿ ಹಾಗೂ ಇನ್ನಿತರ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಕಾಮಗಾರಿಗಳನ್ನು ಕೈಗೊಳ್ಳಲು ಚುನಾವಣಾ ಆಯೋಗ ಅನುಮತಿ ನೀಡಿದೆ.

ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯಲಿರುವುದರಿಂದ ಈಗಾಗಲೇ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದೆ. ಟೆಂಡರ್ ಕರೆದು ಯಾವುದೇ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವಂತಿಲ್ಲ. ಆದರೆ 2022ನೇ ಜನವರಿ 18 ರಿಂದ ಉಡುಪಿ ಪರ್ಯಾಯ ನಡೆಯಲಿರುವುದರಿಂದ ಉಡುಪಿ ನಗರದ ರಸ್ತೆ ಅಭಿವೃದ್ಧಿ ಸೇರಿದಂತೆ ವಿವಿಧ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಕಾಮಗಾರಿಗಳನ್ನು ನಗರಸಭೆ ವತಿಯಿಂದ ತಕ್ಷಣದಲ್ಲಿ ಟೆಂಡರ್ ಕರೆದು ಕೈಗೆತ್ತಿಕೊಳ್ಳಬೇಕಾಗಿದೆ.

ಈ ನಿಟ್ಟಿನಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲು ಅನುಮತಿ ನೀಡುವಂತೆ ನಗರಸಭೆ ವತಿಯಿಂದ ಜಿಲ್ಲಾಧಿಕಾರಿಯವರ ಮೂಲಕ ಚುನಾವಣಾ ಆಯೋಗದ ಅನುಮತಿ ಕೋರಲಾಗಿತ್ತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗೃಹಜ್ಯೋತಿ ಯೋಜನೆಯ ದಾಖಲೆ ಮರುಪರಿಶೀಲನಾ ಪ್ರಕ್ರಿಯೆ ಅ. 31 ರ ವಿಸ್ತರಣೆ: ರಮೇಶ್ ಕಾಂಚನ್

ಉಡುಪಿ, ಅ.16: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ...

ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ

ಉಡುಪಿ, ಅ.16: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ ಬೆಂಗಳೂರು ಇವರ...

ಅ. 17: ನೇರ ಸಂದರ್ಶನ

ಉಡುಪಿ, ಅ.16: ನಗರದ ಗ್ರೋಸ್ಪೆರ್ ಗ್ರೂಪ್, ಎರಡನೇ ಮಹಡಿ, ಕೈಗಾರಿಕಾ ಸಹಕಾರ...

ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಬಿ.ಎಸ್.ಎನ್.ಎಲ್ ಅಧಿಕಾರಿಗಳಿಗೆ ಕೋಟ ಶ್ರೀನಿವಾಸ ಪೂಜಾರಿ ಕರೆ

ಉಡುಪಿ, ಅ.16: ಜಿಲ್ಲೆಯ ಬಿ.ಎಸ್.ಎನ್.ಎಲ್ ಸಂಸ್ಥೆಯು ತನ್ನ ಗ್ರಾಹಕರಿಗೆ ನೆಟ್‌ವರ್ಕ್ ಸಂಬಂಧಿತ...
error: Content is protected !!