Thursday, October 3, 2024
Thursday, October 3, 2024

ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: ಸರ್ ಎಂ. ವಿಶ್ವೇಶ್ವರಯ್ಯ ಜನ್ಮದಿನಾಚರಣೆ

ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: ಸರ್ ಎಂ. ವಿಶ್ವೇಶ್ವರಯ್ಯ ಜನ್ಮದಿನಾಚರಣೆ

Date:

ಬೆಳ್ಮಣ್: ನೆಹರು ಯುವ ಕೇಂದ್ರ ಉಡುಪಿ ಮತ್ತು ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ (ರಿ.) ಅಬ್ಬನಡ್ಕ ನಂದಳಿಕೆ ವತಿಯಿಂದ ಸಂಘದ ಮಿನಿ ಸಭಾಂಗಣದಲ್ಲಿ ಇಂಜಿನಿಯರ್ಸ್ ದಿನಾಚರಣೆ ಮತ್ತು ಸರ್ ಎಂ. ವಿಶ್ವೇಶ್ವರಯ್ಯ ಅವರ ಜನ್ಮದಿನಾಚರಣೆ ಆಚರಿಸಲಾಯಿತು. ಸಂಘದ ಅಧ್ಯಕ್ಷರಾದ ಬೋಳ ಉದಯ ಅಂಚನ್ ರವರು ಭಾರತರತ್ನ ಸರ್ ಎಂ. ವಿಶ್ವೇಶ್ವರಯ್ಯ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪುಷ್ಪಾರ್ಚನೆ ಸಲ್ಲಿಸಿದರು.

ಜಾಹೀರಾತು

ಸಂಘದ ಕಾರ್ಯದರ್ಶಿ ಅಬ್ಬನಡ್ಕದ ಹರಿಪ್ರಸಾದ್ ಆಚಾರ್ಯ ಅವರು ಮಾತನಾಡಿ, ಸರ್ ಎಂ. ವಿಶ್ವೇಶ್ವರಯ್ಯ ಅವರ ಪರಿಶ್ರಮದಿಂದ ರಾಜ್ಯದಲ್ಲಿ ಜಲಾಶಯ ನಿರ್ಮಾಣ ಮಾಡಲು ಸಾಧ್ಯವಾಯಿತು. ವಿಶ್ವೇಶ್ವರಯ್ಯ ಅವರ ಬುದ್ಧಿಶಕ್ತಿಯಿಂದ ರಾಜ್ಯದಲ್ಲಿ ಹಲವು ಯೋಜನೆಗಳು ಜಾರಿಯಾಗಿ ಬಡಜನರು ಸೇರಿದಂತೆ ಸಮಾಜದ ಎಲ್ಲ ವರ್ಗದ ಜನರಿಗೆ ಅನುಕೂಲವಾಗಿದೆ. ಇಂತಹ ಮಹನೀಯರ ಆದರ್ಶ ಗುಣಗಳನ್ನು ಇಂದಿನ ಯುವ ಇಂಜಿನಿಯರ್‌ಗಳು ಅಳವಡಿಸಿಕೊಳ್ಳುವ ಮೂಲಕ ದೇಶದ ಅಭಿವೃದ್ಧಿಗೆ ಕೈ ಜೋಡಿಸಬೇಕು ಎಂದರು.

ಸಂಘದ ಸಂಚಾಲಕ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಪೂರ್ವಾಧ್ಯಕ್ಷರುಗಳಾದ ಬೀರೊಟ್ಟು ದಿನೇಶ್ ಪೂಜಾರಿ, ಕಾಸ್ರಬೈಲು ಸುರೇಶ್ ಪೂಜಾರಿ, ಅಬ್ಬನಡ್ಕ ಸತೀಶ್ ಪೂಜಾರಿ ಹಾಗೂ ಸಂಘದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

ಜಾಹೀರಾತು

 

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅ.6: ಶಿರ್ವ ಮಾಣಿಬೆಟ್ಟು ಐತಿಹಾಸಿಕ ಪುಷ್ಕರಣಿ ಸ್ವಚ್ಛತಾ ಕಾರ್ಯಕ್ರಮ

ಉಡುಪಿ, ಅ.3: ಶಿರ್ವ ಗ್ರಾಮ ವ್ಯಾಪ್ತಿಯಲ್ಲಿ ಬರುವ ಏಕೈಕ ಮತ್ತು ಮಾಣಿಬೆಟ್ಟು...

ಇರಾನ್‌ ಕ್ಷಿಪಣಿ ದಾಳಿ- ಭದ್ರತಾ ಮುಖ್ಯಸ್ಥರೊಂದಿಗೆ ಇಸ್ರೇಲ್ ಪ್ರಧಾನಿ ಮಹತ್ವದ ಸಭೆ

ಯು.ಬಿ.ಎನ್.ಡಿ., ಅ.2: ಇಸ್ರೇಲ್‌ನ ಮೇಲೆ ಇರಾನ್‌ನ ನಡೆಸಿದ ಕ್ಷಿಪಣಿ ದಾಳಿಯ ಹಿನ್ನೆಲೆಯಲ್ಲಿ,...

ಹೂಡೆ ಕಡಲ ತೀರದಲ್ಲಿ ಸ್ವಚ್ಛತಾ ಅಭಿಯಾನ

ಹೂಡೆ, ಅ.2: ರೋಟರಿ ಜಿಲ್ಲೆ 3182 ಇದರ ಮಹತ್ವದ ಯೋಜನೆ ಕೋಸ್ಟ್...
error: Content is protected !!