Monday, October 5, 2026
Monday, October 5, 2026

ಅಂಪಾರು: ಪರಿಸರ ದಿನಾಚರಣೆ

ಅಂಪಾರು: ಪರಿಸರ ದಿನಾಚರಣೆ

Date:

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕುಂದಾಪುರ ತಾಲೂಕು ಅಂಪಾರು ವಲಯದ ವತಿಯಿಂದ ಪರಿಸರ ದಿನಾಚರಣೆ ನಡೆಯಿತು. ಕೆಂಚಾರು ಕೆರೆಯ ದಂಡೆಯ ಮೇಲೆ ಶಂಕರನಾರಾಯಣ ಉಪವಲಯ ಅರಣ್ಯಾಧಿಕಾರಿ ಕೆ.ಸಿ. ಮ್ಯಾಥ್ಯೂ ರವರು ಗಿಡವನ್ನು ನೆಡುವುದರ ಮೂಲಕ ಚಾಲನೆ ನೀಡಿದರು. ಕುಂದಾಪುರ ತಾಲೂಕಿನ ಯೋಜನಾಧಿಕಾರಿಗಳಾದ ಮುರಳೀದರ ಕೆ. ಶೆಟ್ಟಿ, ಪರಿಸರ ಸಂರಕ್ಷಣೆಯ ಅಗತ್ಯತೆಯ ಕುರಿತು ಮಾಹಿತಿ ನೀಡಿದರು.

ಅಂಪಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಭಾರತೀ ಶೇಟ್, ಉಪಾಧ್ಯಕ್ಷರಾದ ಅಶೋಕ ಕೆ, ಅರಣ್ಯ ಇಲಾಖೆಯ ಸಿಬ್ಬಂದಿ ಶಿವಣ್ಣ, ಅಂಪಾರು ವಲಯದ ಪ್ರಗತಿಬಂಧು ಸ್ವಸಹಾಯ ಸಂಘಗಳ ಅಧ್ಯಕ್ಷರಾದ ಜ್ಯೋತಿ ವಿವೇಕ್, ಅಂಪಾರು ವಲಯದ ಸೇವಾ ಪ್ರತಿನಿಧಿಗಳು, ಪ್ರಗತಿಬಂಧು ಸ್ವಸಹಾಯ ಸಂಘಗಳ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಕುಂದಾಪುರ ತಾಲೂಕಿನ ಆಂತರಿಕ ಲೆಕ್ಕ ಪರಿಶೋಧಕಿ ಸುನೀತಾ ಸ್ವಾಗತಿಸಿ, ಅಂಪಾರು ವಲಯ ಮೇಲ್ವಿಚಾರಕಿ ಮಾಲತಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ಜಾನಕಿ ನಮನ’

ಉಡುಪಿ, ಅ.4: ಉಡುಪಿಯ ಕೋಸ್ಟಲ್‌ ಸ್ಟಾರ್‌ ಮ್ಯೂಸಿಕ್‌ ಕ್ಲಬ್‌ ಆಶ್ರಯದಲ್ಲಿ ಕರ್ಣಾಟಕ...

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಡಾ. ನಿಖಿಲ್ ಗುಪ್ತ ಭೇಟಿ

ಕಾಪು, ಅ.4: ಮಹಾರಾಷ್ಟ್ರದ ಕಾನೂನು ಮತ್ತು ಸುವ್ಯವಸ್ಥೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ...

ಕುಪ್ಮಾ ಉತ್ತಮ ಉಪನ್ಯಾಸಕ ಪ್ರಶಸ್ತಿ ಪ್ರದಾನ

ಮಣಿಪಾಲ, ಅ.4: ಕರ್ನಾಟಕ ಅನುದಾನ ರಹಿತ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿಗಳ...
error: Content is protected !!