Home ಸುದ್ಧಿಗಳು ಪ್ರಾದೇಶಿಕ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ

ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ

2645
0

ಉಡುಪಿ: ರಾಜ್ಯ ಕೌಶಲ್ಯ ಅಭಿವೃದ್ಧಿ ನಿಗಮ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ವತಿಯಿಂದ ವಿಶ್ವ ಯುವ ಕೌಶಲ್ಯ ದಿನಾಚರಣೆ ಪ್ರಯುಕ್ತ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯನ್ನು ಕನ್ನಡ ಹಾಗೂ ಆಂಗ್ಲ ಭಾಷೆಯಲ್ಲಿ ಆಯೋಜಿಸಲಾಗಿರುತ್ತದೆ.

ಪದವಿಪೂರ್ವ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಕೈಗಾರಿಕೆ ಶೈಕ್ಷಣಿಕ ಒಗ್ಗೂಡುವಿಕೆಯಿಂದ ಕೌಶಲ್ಯದ ಅಂತರವನ್ನು ಕಡಿಮೆ ಮಾಡುವುದು, ಶಕ್ತಿಯುತ ಹಾಗೂ ಸುಸ್ಥಿರ ಬೆಳವಣಿಗೆಗಾಗಿ ಕೌಶಲ್ಯಯುತ ಮಾನವ ಸಂಪನ್ಮೂಲವನ್ನು ಸೃಷ್ಟಿಸುವ ಮಾರ್ಗಗಳು, ಕೌಶಲ್ಯ ಮತ್ತು ಸಾಮರ್ಥ್ಯಗಳ ಮೇಲೆ ಕೇಂದ್ರೀಕೃತವಾದ ಉನ್ನತ ಶಿಕ್ಷಣದ ಬಗ್ಗೆ ಮರುಚಿಂತನೆ ಹಾಗೂ 8 ರಿಂದ 12 ನೇ ತರಗತಿ ಹಾಗೂ ಐ.ಟಿ.ಐ ವಿದ್ಯಾರ್ಥಿಗಳಿಗೆ ಯುವಕರಲ್ಲಿ ಕೌಶಲ್ಯಾಭಿವೃದ್ಧಿಯ ಪ್ರಾಮುಖ್ಯತೆ, ಶಿಕ್ಷಣದಲ್ಲಿ ಕೌಶಲ್ಯಾಭಿವೃದ್ಧಿಯ ಪ್ರಾಮುಖ್ಯತೆ ಕುರಿತು ಪ್ರಬಂಧವನ್ನು ಸಿದ್ಧಪಡಿಸಿ ಜುಲೈ 10 ರ ಒಳಗೆ https://www.kaushalkar.com/app/skill-essay-compitition ಲಿಂಕ್ ಬಳಸಿ ನೋಂದಾವಣಿ ಮಾಡಿ, ಪ್ರಬಂಧವನ್ನು ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಮೊ.ಸಂ: 9448409355, 9739691294, 9449943882 ಅಥವಾ ಇಮೇಲ್ [email protected] ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.