Monday, November 25, 2024
Monday, November 25, 2024

ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ

ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ

Date:

ಗಂಗೊಳ್ಳಿ ಸಮುದಾಯ ಹಿತರಕ್ಷಣಾ ಸಮಿತಿ (ರಿ.) ಗಂಗೊಳ್ಳಿ ವತಿಯಿಂದ ಭಾರತದ 75ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯನ್ನು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದೆ. 2021-22 ನೇ ಶೈಕ್ಷಣಿಕ ಸಾಲಿನಲ್ಲಿ 8, 9 ಮತ್ತು 10ನೇ ತರಗತಿಯಲ್ಲಿ ಕಲಿಯುತ್ತಿರುವ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳು ಮಾತ್ರ ಭಾಗವಹಿಸಬಹುದಾಗಿದೆ.

ಪ್ರಬಂಧದ ವಿಷಯ- ದೇಶಪ್ರೇಮ ಎಂದರೆ?

ನಿಯಮಗಳು:
1. ಆಸಕ್ತಿ ಉಳ್ಳವರು ಪ್ರಬಂಧವನ್ನು ಎ4 ಅಳತೆಯ ಕಾಗದದಲ್ಲಿ ಮೂರು ಪುಟಗಳಿಗೆ ಮೀರದಂತೆ ಸ್ವಹಸ್ತಾಕ್ಷರದಲ್ಲಿ ಕನ್ನಡದಲ್ಲಿ ಬರೆಯಬೇಕು.

2. ಸ್ಪರ್ಧಿಗಳು ಕೊನೆಯ ಪುಟದಲ್ಲಿ ತಮ್ಮ ಪೂರ್ಣ ಹೆಸರು, ಊರು, ಮೊಬೈಲ್ ಸಂಖ್ಯೆ ಮತ್ತು ತಾವು ಕಲಿಯುತ್ತಿರುವ ಶಾಲೆಯ ವಿಳಾಸ ಹಾಗೂ ಮುಖ್ಯೋಪಾಧ್ಯಾಯರ ಸಂಪರ್ಕ ಸಂಖ್ಯೆಯನ್ನು ಕಡ್ಡಾಯವಾಗಿ ಬರೆಯಬೇಕು.

3. ಪ್ರಥಮ ದ್ವಿತೀಯ ಮತ್ತು ತೃತೀಯ ಬಹುಮಾನವಾಗಿ ಕ್ರಮವಾಗಿ ರೂ. 1500, 1000 ಮತ್ತು 500 ನಗದಿನ ಜೊತೆಗೆ ಡಿಜಿಟಲ್ ಪ್ರಮಾಣ ಪತ್ರವನ್ನು ನೀಡಲಾಗುವುದು.

4. ಪ್ರಬಂಧವನ್ನು 5-8 -2021ರ ಒಳಗೆ ಪೋಸ್ಟ್ ಮೂಲಕ ಅಥವಾ ಖುದ್ದಾಗಿ ನರೇಂದ್ರ ಎಸ್ ಗಂಗೊಳ್ಳಿ, ಗಂಗೊಳ್ಳಿ ಸಮುದಾಯ ಹಿತರಕ್ಷಣಾ ಸಮಿತಿ(ರಿ.), ಮ್ಯಾಂಗನೀಸ್ ರಸ್ತೆ ಗಂಗೊಳ್ಳಿ. ಕುಂದಾಪುರ ತಾಲೂಕು 576216 ಈ ವಿಳಾಸಕ್ಕೆ ಕಳುಹಿಸಬೇಕು ಎಂದು ಸಂಸ್ಥೆಯ ಅಧ್ಯಕ್ಷ ಭಾಸ್ಕರ ಖಾರ್ವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ 9242127307, 9743882911, 9901981938, 9980909394 ಸಂಪರ್ಕಿಸಿ

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!