Sunday, October 18, 2026
Sunday, October 18, 2026

ಪಡುಬಿದ್ರಿ: ಉಚಿತ ನೇತ್ರ ತಪಾಸಣಾ ಶಿಬಿರ

ಪಡುಬಿದ್ರಿ: ಉಚಿತ ನೇತ್ರ ತಪಾಸಣಾ ಶಿಬಿರ

Date:

ಪಡುಬಿದ್ರಿ: ಉಚಿತ ನೇತ್ರ ತಪಾಸಣಾ ಶಿಬಿರಗಳೆಂದರೆ ಕತ್ತಲಿನಿಂದ ಬೆಳಕಿನಡೆಗೆ ಹೋಗುವ ಒಂದು ಕಾರ್ಯಕ್ರಮ. ಇಂತಹ ಜನಪರ ಕಾರ್ಯಕ್ರಮಗಳ ಪ್ರಯೋಜನವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು. ತನ್ಮೂಲಕ ಬದುಕಿನಲ್ಲಿ ಆವರಿಸಿಕೊಂಡಿರುವ ಕತ್ತಲಿನಿಂದ ದೂರವಾಗಬೇಕು ಎಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯೆ ಗೀತಾಂಜಲಿ ಸುವರ್ಣ ಹೇಳಿದರು.

ಅವರು ಪಡುಬಿದ್ರಿಯಲ್ಲಿ ಕರ್ನಾಟಕ ಸಾಮಾಜಿಕ ಸಾಂಸ್ಕತಿಕ ಅಭಿವೃದ್ಧಿ ಪ್ರತಿಷ್ಠಾನವು ಪ್ರಸಾದ್ ನೇತ್ರಾಲಯ ಜೊತೆಗೂಡಿ ಆಯೋಜಿಸಿದ ಉಚಿತ ನೇತ್ರ ತಪಾಸಣಾ ಚಿಕಿತ್ಸಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಸಂಘಟಕರು ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಿದಾಗ ಸಾರ್ವಜನಿಕರ ಸ್ಪಂದನೆ ಸರಿಯಾಗಿದ್ದಾಗ ಕಾರ್ಯಕ್ರಮಕ್ಕೆ ಹೆಚ್ಚು ಮೆರುಗು ಬರುತ್ರದೆ ಎಂದು ಹೇಳಿದ ಅವರು ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಿದ ಕರ್ನಾಟಕ ಸಾಮಾಜಿಕ ಸಾಂಸ್ಕತಿಕ ಅಭಿವೃದ್ಧಿ ಪ್ರತಿಷ್ಠಾನದ ಕಾರ್ಯ ಸ್ತುತ್ಯರ್ಹ ಎಂದರು.

ಅಧ್ಯಕ್ಷತೆ ವಹಿಸಿದ್ದ ಪ್ರತಿಷ್ಠಾನದ ಅಧ್ಯಕ್ಷೆ ರಾಣಿ ಪುಷ್ಪಲತಾ ದೇವಿ ಮಾತನಾಡಿ, ಇಂದು ಮಾತಿಗಿಂತ ಕೃತಿಗೆ ಹೆಚ್ಚು ಒತ್ತು ಕೊಡಬೇಕಾಗಿದೆ. ಈ ಕಾರ್ಯಕ್ರಮದಿಂದ ಹೆಚ್ಚಿನ ಜನರು ಪ್ರಯೋಜನ ಪಡೆದು ತಮ್ಮ ಕಣ್ಣಿನಲ್ಲಿ ಬೆಳಕು ಮೂಡಿದರೆ ನಮ್ಮ ಶ್ರಮ ಸಾರ್ಥಕ ಎಂದರು.

ಪ್ರಸಾದ್ ನೇತ್ರಾಲಯದ ಡಾ. ಗುಣಶ್ರೀ, ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ರಾಜಶ್ರೀ ಕಿಣಿ, ಪಡುಬಿದ್ರಿ ಗ್ರಾ.ಪಂ. ಅಧ್ಯಕ್ಷ ರವಿ ಶೆಟ್ಟಿ, ಸುಸ್ಲಾನ್ ಆರ್.& ಆರ್. ಕಾಲೊನಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ಉಮನಾಥ್ ಕೆ. ಆರ್. ಉಪಸ್ಥಿತರಿದ್ದರು.

ಎನ್.ಎಸ್.ಸಿ.ಡಿ.ಎಫ್ ಅಧ್ಯಕ್ಷ ಗಂಗಾಧರ್ ಗಾಂಧಿ ಸ್ವಾಗತಿಸಿ , ಪ್ರಸ್ತಾವನೆಗೈದರು. ಪ್ರದೀಪ್ ಡಿ.ಎಂ. ಹಾವಂಜೆ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!