Tuesday, January 21, 2025
Tuesday, January 21, 2025

ನರೇಂದ್ರ ಕುಮಾರ್ ಕೋಟ ಅವರಿಗೆ ಸಾರ್ವಜನಿಕ ಸನ್ಮಾನ

ನರೇಂದ್ರ ಕುಮಾರ್ ಕೋಟ ಅವರಿಗೆ ಸಾರ್ವಜನಿಕ ಸನ್ಮಾನ

Date:

ಕೋಟ: ಸಾಹಿತಿ-ಶಿಕ್ಷಕ, ಹೊಸ ಅನ್ವೇಷಣೆ ಚಿಂತಕ 2020-21 ನೇ ಸಾಲಿನ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ನರೇಂದ್ರ ಕುಮಾರ್ ಕೋಟ ಅವರಿಗೆ ಕೋಟದ ಕಾರಂತ ಥೀಮ್ ಪಾರ್ಕ್ನಲ್ಲಿ ಸೆಪ್ಟೆಂಬರ್ 19ರ ಸಂಜೆ 4 ಗಂಟೆಗೆ ಸಾರ್ವಜನಿಕ ಸನ್ಮಾನ ಕಾರ್ಯಕ್ರಮ ಬಹುರೂಪಿ-2021(ಹೊಸತನದ ಕಂಪನ) ಹಮ್ಮಿಕೊಳ್ಳಲಾಗಿದೆ.

ಸ್ಥಳೀಯ 30ಕ್ಕೂ ಮಿಕ್ಕಿ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮವನ್ನು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಉದ್ಘಾಟಿಸಲಿದ್ದಾರೆ. ಗೀತಾನಂದ ಫೌಂಡೇಶನ್‌ನ ಪ್ರವರ್ತಕ ಆನಂದ್ ಸಿ ಕುಂದರ್ ಅಧ್ಯಕ್ಷತೆ ವಹಿಸಲಿದ್ದು, ಪರಿಚಯ ನುಡಿ ಉಪನ್ಯಾಸಕ ಜಿ ಸಂಜೀವ್, ಅಭಿನಂದನಾ ನುಡಿ ಡಯೆಟ್ ಉಡುಪಿ ಹಿರಿಯ ಉಪನ್ಯಾಸಕ ಅಶೋಕ್ ಕಾಮತ್, ಆಶಯ ನುಡಿಯನ್ನು ನುಡಿಯಲಿದ್ದಾರೆ.

ಜಾಹೀರಾತು

ವಿಶ್ರಾಂತ ಅಧ್ಯಾಪಕ ವಿಠ್ಠಲ್ ವಿ ಗಾಂವ್ಕರ್ ಹಾಗೂ ಪ್ರೌಢಶಾಲಾ ಶಿಕ್ಷಕ ಸಂಘದ ಅಧ್ಯಕ್ಷ ಕಿರಣ್ ಹೆಗ್ಡೆರವರ ಗೌರವ ಉಪಸ್ಥಿತಿಯಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಅಶ್ವಿನಿ ದಿನೇಶ್, ಕ.ಸಾ.ಪ ಉಡುಪಿ ಜಿಲ್ಲೆ ನಿಕಟಪೂರ್ವ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ವಿವೇಕ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಜಗದೀಶ್ ನಾವಡ, ಪ್ಲೆಸೆಂಟ್ ಕುಂದಾಪುರದ ಮಾಲಕ ಇಬ್ರಾಹೀಂ ಸಾಹೇಬ್ ಕೋಟ, ವಿ.ಶೈನ್ ಕೋಚಿಂಗ್ ಸೆಂಟರ್ ನ ಸಂಚಾಲಕ ಹರೀಶ್ ಕುಮಾರ್ ಶೆಟ್ಟಿ, ಕಾರಂತ ಥೀಮ್ ಪಾರ್ಕ್ ವಿಶೇಷ ಕರ್ತವ್ಯಾಧಿಕಾರಿ ಪೂರ್ಣಿಮಾ, ಯು ಚಾನೆಲ್‌ನ ನಿರ್ದೇಶಕ ಪ್ರಸಾದ್ ರಾವ್, ವಿವೇಕ ಬಾಲಕಿಯರ ಪ್ರೌಢಶಾಲೆಯ ಮುಖೋಪಾಧ್ಯಾಯ ಜಗದೀಶ್ ಹೊಳ್ಳ, ಕೋಟತಟ್ಟು ಗ್ರಾಮ
ಪಂಚಾಯತ್ ಉಪಾಧ್ಯಕ್ಷ ವಾಸು ಪೂಜಾರಿ, ಪಿ.ಡಿಓ ಶೈಲಾ ಎಸ್ ಪೂಜಾರಿ, ಗುರುವಂದನೆಯನ್ನು ಪ್ರತೀಕ್ಷಾ ಹಾಗೂ ಸಂಘ ಸಂಸ್ಥೆಯ ಪದಾಧಿಕಾರಿಗಳು ನರೇಂದ್ರ ಕುಮಾರ್ ಅಭಿಮಾನಿಗಳು ಉಪಸ್ಥಿತರಿರಲಿದ್ದಾರೆ.

ಸಭಾ ಕಾರ್ಯಕ್ರಮದ ಮೊದಲು ಜನಾರ್ದನ ಕುಂಭಾಶಿ ಹಾಗೂ ಅಮೃತ ಅವರಿಂದ ಸ್ವರಾಂಜಲಿ ಕಾರ್ಯಕ್ರಮ ನಡೆಯಲಿದ್ದು ಸಭಾ ಕಾರ್ಯಕ್ರಮದ ನಂತರ ಕಲಾದೇಗುಲ ಉಪ್ಪೂರು-ಸಂತೆಕಟ್ಟೆ ಇವರಿಂದ ಹಾಸ್ಯ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಅಭಿನಂದನಾ ಸಮಿತಿಯ ಅಧ್ಯಕ್ಷ ಆನಂದ್ ಸಿ ಕುಂದರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!