Friday, September 25, 2026
Friday, September 25, 2026

ನ.25- ಪದ್ಮ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನಾ ಕಾರ್ಯಕ್ರಮ

ನ.25- ಪದ್ಮ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನಾ ಕಾರ್ಯಕ್ರಮ

Date:

ಉಡುಪಿ: ವೃಂದಾವನಸ್ಥ ಪೇಜಾವರ ಶ್ರೀ ಶ್ರೀ ವಿಶ್ವೇಶತೀರ್ಥ ಶ್ರೀಪಾದರಿಗೆ ಭಾರತ ಸರಕಾರದಿಂದ ಕೊಡಮಾಡಿದ ನಿರ್ಯಾಣೋತ್ತರ ಪದ್ಮವಿಭೂಷಣ ಪ್ರಶಸ್ತಿಯನ್ನು ಸ್ವೀಕರಿಸಿದ ಪರಮಪೂಜ್ಯ ಶ್ರೀ ಶ್ರೀ ವಿಶ್ವಪ್ರಸನ್ನ ಶ್ರೀಪಾದರಿಗೆ ಮತ್ತು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಅಕ್ಷರ ಸಂತ ಹರೇಕಳ ಹಾಜಬ್ಬ ಅವರಿಗೆ ಅಭಿನಂದಿಸುವ ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ನಾಗರಿಕ ಸಮಿತಿ ಟ್ರಸ್ಟ್ ಆಯೋಜಿಸಿದೆ.

ಕಾರ್ಯಕ್ರಮವು ನವೆಂಬರ್ 25 ಗುರುವಾರ ಬೆಳಿಗ್ಗೆ 10-30 ಕ್ಕೆ ಕಿದಿಯೂರ್ ಹೋಟೆಲ್ ಪವನ್ ರೂಫ್ ಟಾಪ್ ಸಭಾಂಗಣದಲ್ಲಿ ನಡೆಯಲಿದೆ.

ಕಾರ್ಯಕ್ರಮವು ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಅಜ್ಜರಕಾಡು ಪ್ರಾಂಶುಪಾಲರಾದ ಡಾ.ಭಾಸ್ಕರ್ ಶೆಟ್ಟಿ ಎಸ್ ಇವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ಮುಖ್ಯ ಅತಿಥಿಗಳಾಗಿ ಮುಮ್ತಾಜ್ (ಎ.ಡಿ.ಪಿ) ಉಡುಪಿ ಕಾನೂನು ಅಧಿಕಾರಿ, ಕಿರಿಯ/ ಅಸಿಸ್ಟೆಂಟ್ ಆಪ್ ಪ್ರಾಸಿಕ್ಯೂಶನ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ, ಪ್ರಸಾದ್ ನೇತ್ರಾಲಯದ ನಾಡೋಜ ಡಾ. ಕೆ. ಕೃಷ್ಣಪ್ರಸಾದ್, ನಗರ ಪೊಲೀಸ್ ಠಾಣೆ ಪೋಲಿಸ್ ನಿರೀಕ್ಷಕ ಪ್ರಮೋದ್ ಕುಮಾರ್ ಪಿ, ಕಿದಿಯೂರ್ ಹೋಟೆಲ್ ಮಾಲಕ ಭುವನೇಂದ್ರ ಕಿದಿಯೂರ್, ಮಲಬಾರ್ ಗೋಲ್ಡ್ ಎಂಡ್ ಡೈಮಂಡ್ಸ್ ಶಾಖಾ ಮುಖ್ಯಸ್ಥ ಹಫೀಝ್ ರೆಹಮಾನ್ ಅಡ್ಯಾರು, ಹಾಗೂ ಸಮಾಜಸೇವಕ ಕೆ. ಕೃಷ್ಣಮೂರ್ತಿ ಆಚಾರ್ಯ ಉಪಸ್ಥಿತರಿರುವರು ಎಂದು ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೃತಕ ಬುದ್ಧಿಮತ್ತೆ (ಎಐ), ಬಾಹ್ಯಾಕಾಶ, ಇಂಧನ ಮತ್ತು ಸಂಸ್ಕೃತಿ ಕುರಿತು ಮಹತ್ವದ ಚರ್ಚೆ ನಡೆಸಿದ ಭಾರತ, ಯುಎಇ ಮತ್ತು ಫ್ರಾನ್ಸ್‌

ಯು.ಬಿ.ಎನ್.ಡಿ., ಸೆ.24: ನ್ಯೂಯಾರ್ಕ್‌ನಲ್ಲಿ ನಡೆದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 81ನೇ ಅಧಿವೇಶನದ...

ಕುಂದಾಪ್ರ ಕನ್ನಡ: ಭಾಷಾ ವಿಶೇಷತೆ- ವಿಶೇಷ ಉಪನ್ಯಾಸ

ಕುಂದಾಪುರ, ಸೆ.24: ಡಾ. ಬಿ. ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ...

ಉಡುಪಿಯ ಹಲವೆಡೆ ದಿನವಿಡೀ ಉತ್ತಮ ಮಳೆ

ಉಡುಪಿ, ಸೆ.24: ಉಡುಪಿಯ ಹಲವೆಡೆ ಗುರುವಾರ ಉತ್ತಮ ಮಳೆಯಾಗಿದೆ. ಕಾರ್ಕಳ, ಮಣಿಪಾಲ,...
error: Content is protected !!