Sunday, January 19, 2025
Sunday, January 19, 2025

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಮೊದಲ ಅರ್ಧ ಹೊಂದಾಣಿಕೆಯ ಅಸ್ಥಿಮಜ್ಜೆಯ ಕಸಿ

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಮೊದಲ ಅರ್ಧ ಹೊಂದಾಣಿಕೆಯ ಅಸ್ಥಿಮಜ್ಜೆಯ ಕಸಿ

Date:

ಮಣಿಪಾಲ: ಅಕ್ಯೂಟ್ ಮೈಲೋಯ್ಡ್ ಲ್ಯುಕೇಮಿಯಾ (ಒಂದು ರೀತಿಯ ರಕ್ತದ ಕ್ಯಾನ್ಸರ್) ರೋಗ ಪತ್ತೆಯಾದ 12 ವರ್ಷದ ಬಾಲಕನಿಗೆ ಬೇರೆಡೆ ಕೀಮೋಥೆರಪಿಯನ್ನು ನೀಡಲಾಗಿತ್ತು ಮತ್ತು ಅಸ್ಥಿಮಜ್ಜೆಯ ಕಸಿ ಮಾಡಲು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ಕಳುಹಿಸಲಾಯಿತು. ಅಸ್ಥಿಮಜ್ಜೆಯ ಕಸಿ ಮಾಡುವುದೊಂದೇ ಬಾಲಕನಿಗೆ ಕ್ಯಾನ್ಸರ್‌ನಿಂದ ಗುಣಮುಖವಾಗಬಲ್ಲ ಚಿಕಿತ್ಸೆಯಾಗಿತ್ತು.

ಅಸ್ಥಿ ಮಜ್ಜೆಯ ಕಸಿಯು ವೈದ್ಯರು ಮತ್ತು ಶುಶ್ರೂಷಾ ಸಿಬ್ಬಂದಿಗಳ ತಜ್ಞ ತಂಡದಿಂದ ಮಾಡಲ್ಪಡುವ ಒಂದು ಸಂಕೀರ್ಣ ವೈದ್ಯಕೀಯ ಚಿಕಿತ್ಸೆಯಾಗಿದೆ. ಇದು ಕ್ಯಾನ್ಸರ್ ಯುಕ್ತ ಅಸ್ಥಿ ಮಜ್ಜೆಯನ್ನು ನಿರ್ಮೂಲನೆ ಮಾಡಿ ಬದಲಾಗಿ ಆರೋಗ್ಯಕರ ಅಸ್ಥಿ ಮಜ್ಜೆಯ ಕೋಶಗಳನ್ನು ವರ್ಗಾಹಿಸುವ ಪ್ರಕ್ರಿಯೆಯಾಗಿದೆ.

ರೋಗಿಗೆ ಅಸ್ಥಿಮಜ್ಜೆಯನ್ನು ದಾನ ಮಾಡಲು ಪೂರ್ಣ ಎಚ್ ಎಲ್ ಎ ಹೊಂದಾಣಿಕೆಯ ದಾನಿಯನ್ನು ಹೆಚ್ಚಾಗಿ ಆಯ್ಕೆ ಮಾಡಲಾಗುತ್ತದೆ. ಮಕ್ಕಳ ರಕ್ತಶಾಸ್ತ್ರ ಮತ್ತು ಕ್ಯಾನ್ಸರ್ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಅರ್ಚನಾ ಎಂ.ವಿ ಮಾತನಾಡಿ, ಅಸ್ಥಿಮಜ್ಜೆಯ ಕಸಿ ಮಾಡುವುದರಿಂದ ಈ ಹಿಂದೆ ಗುಣಪಡಿಸಲಾಗದ ಕಾಯಿಲೆಗಳಿಗೆ ಚಿಕಿತ್ಸೆ ದೊರಕಿದೆ ಮತ್ತು ಅನೇಕ ರೋಗಿಗಳ ಜೀವನವನ್ನು ಬದಲಾಯಿಸಿದೆ. ಅಸ್ಥಿಮಜ್ಜೆಯ ಕಸಿಯು ಕೆಂಪು ರಕ್ತ ಕಣಗಳ ಅಸ್ವಸ್ಥತೆಗಳು (ಥಲಸ್ಸೆಮಿಯಾ), ಅಸ್ತಿ ಮಜ್ಜೆಯ ವೈಫಲ್ಯ, ಇಮ್ಯುನೊ ಡಿಫಿಷಿಯನ್ಸಿ ಮತ್ತು ಕೆಲವು ವಿಧದ  ಕ್ಯಾನ್ಸರ್ ರೋಗಗಳಿಗೆ ಶಾಶ್ವತ ಗುಣಪಡಿಸುವ ಚಿಕಿತ್ಸೆಯಾಗಿದೆ ಎಂದು ಹೇಳಿದರು.

ಈ ಮಗುವಿನಲ್ಲಿ  ಕಂಡುಬಂದ ಸವಾಲು ಎಂದರೆ ಪೂರ್ಣ ಎಚ್ಎಲ್ಎ ಹೊಂದಾಣಿಕೆಯ ದಾನಿಯು ಲಭ್ಯವಿರಲಿಲ್ಲ ಮತ್ತು  ದಾನಿಯನ್ನು ಹುಡುಕಲು ಹೆಚ್ಚು ಸಮಯ ಕೂಡ ಇರಲಿಲ್ಲ. ಇದಕ್ಕೆ ಪರ್ಯಾಯವಾಗಿ ಕಸ್ತೂರ್ಬಾ ಆಸ್ಪತ್ರೆಯ ಮಕ್ಕಳ ರಕ್ತಶಾಸ್ತ್ರ ಮತ್ತು ಆಂಕೊಲಾಜಿ ವಿಭಾಗದ ವೈದ್ಯರ ತಂಡವು ಮಗುವನ್ನು ಉಳಿಸುವ ವಿಶಿಷ್ಟವಾದ ಅರ್ಧ ಎಚ್ಎಲ್ಎ ಹೊಂದಾಣಿಕೆಯ ಅಸ್ಥಿಮಜ್ಜೆಯ ಕಸಿ ಮಾಡಲು ನಿರ್ಧರಿಸಿತು.

ರೋಗಿಯ ಸಹೋದರಿ (9 ವರ್ಷ ), ಕೇವಲ 50% ಎಚ್ಎಲ್ಎ ಹೊಂದಿಕೆಯಾಗಿದ್ದಳು. ಅವಶ್ಯ ವೈದ್ಯಕೀಯ ಪರೀಕ್ಷೆಗಳನ್ನು ನಡೆಸಿದ ನಂತರ ದಾನಿ ಎಂದು ನಿರ್ಧರಿಸಲಾಯಿತು.  ರೋಗಿಯನ್ನು 6 ವಾರಗಳ ಕಾಲ ವಿಶೇಷ ಅಸ್ಥಿ ಮಜ್ಜೆಯ ಕಸಿ ಮಾಡುವಿಕೆಯು ಘಟಕದಲ್ಲಿ ಕಸಿ ಮಾಡಲಾಯಿತು. ನಂತರ ಅರೋಗ್ಯ ಸ್ಥಿರ ಸ್ಥಿತಿಯಲ್ಲಿ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು.

ಅರ್ಧ-ಹೊಂದಾಣಿಕೆಯ ಅಸ್ಥಿ  ಮಜ್ಜೆಯ ಕಸಿ ಯಶಸ್ವಿಯಾಗಿದೆ ಮತ್ತು ಕಸಿ ಮಾಡಿ 7 ತಿಂಗಳುಗಳಾಗಿದ್ದು ಈಗ ರೋಗಿಯು ಕ್ಯಾನ್ಸರ್ ನಿಂದ ಮುಕ್ತರಾಗಿದ್ದಾರೆ ಮತ್ತು ತಮ್ಮ ದಿನನಿತ್ಯದ ಚಟುವಟಿಕೆಗಳನ್ನು ಮುಂದುವರೆಸುತ್ತಿದ್ದಾರೆ. ವಿಭಾಗದ ಮಕ್ಕಳ ಅಸ್ಥಿಮಜ್ಜೆ ಕಸಿ ತಜ್ಞ ಡಾ. ವಿನಯ್ ಎಂ.ವಿ ಮಾತನಾಡಿ, ಕಳೆದ 2 ದಶಕಗಳಲ್ಲಿ ಅಸ್ತಿ ಮಜ್ಜೆಯ ಕಸಿ ವಿಧಾನ ಬಹಳ ದೂರ ಸಾಗಿದೆ. ನವೀನ ತಂತ್ರಜ್ಞಾನಗಳು ಮತ್ತು ಸುಧಾರಿತ ಇಮ್ಯುನೊಸಪ್ರೆಸಿವ್ ಔಷಧಿಗಳು ಲಭ್ಯವಿರುವುದರಿಂದ, ಅರ್ಧ-ಹೊಂದಾಣಿಕೆಯ ಕಸಿ ಮಾಡುವಿಕೆಯು ಸಾಧ್ಯವಾಗಿದೆ ಎಂದು ಹೇಳಿದರು. ಇದು ನಮ್ಮ ಕರಾವಳಿ ಪ್ರದೇಶದಲ್ಲಿ ಯಶಸ್ವಿ ಹ್ಯಾಪ್ಲೋಐಡೆಂಟಿಕಲ್ ಬೋನ್ ಮ್ಯಾರೋ ಟ್ರಾನ್ಸ್ ಪ್ಲಾಂಟ್ ಗೆ ಒಳಗಾದ ಮೊದಲ ರೋಗಿ ಎಂದು ವಿಭಾಗದ ಮುಖ್ಯಸ್ಥರಾದ  ಡಾ.ವಾಸುದೇವ ಭಟ್ ಕೆ ಮಾಹಿತಿ ನೀಡಿದರು.

ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ಅವರು, ಮಕ್ಕಳ ರಕ್ತಶಾಸ್ತ್ರ ಮತ್ತು ಆಂಕೊಲಾಜಿ ವಿಭಾಗದ ವೈದ್ಯರು ರಕ್ತ ಕೇಂದ್ರ ಮತ್ತು ಶುಶ್ರೂಷಕರ ತಂಡದವರು ರಕ್ತದ ಕ್ಯಾನ್ಸರ್ ಹೊಂದಿರುವ ಮಗುವಿನ ಜೀವ ಉಳಿಸಲು ಜಂಟಿಯಾಗಿ ಕೆಲಸ ಮಾಡಿದ್ದಾರೆ ಎಂದು ಶ್ಲಾಘಿಸಿ ಇಡೀ ತಂಡವನ್ನು ಅಭಿನಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!