ಉಡುಪಿ: ಕೋವಿಡ್ -19 ಗೆ ಸಂಬಂಧಿಸಿದಂತೆ ಒಮಿಕ್ರಾನ್ ವೈರಾಣುವಿನಿಂದ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆ, ಸೋಂಕನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸರಕಾರದಿಂದ ಹೊರಡಿಸಲಾಗಿರುವ ಆದೇಶಗಳನ್ನು ಜಿಲ್ಲೆಯಾದ್ಯಂತ ಕಾರ್ಯಗತಗೊಳಿಸುವ ಸಲುವಾಗಿ ಗ್ರಾಮೀಣ ಹಾಗೂ ನಗರ ಪ್ರದೇಶ ವ್ಯಾಪ್ತಿಗಳಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳನ್ನು ನೇಮಕ ಮಾಡಿ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿದ್ದಾರೆ.
ಉಡುಪಿ ನಗರಸಭೆಯ ಪೊಲೀಸ್ ಠಾಣಾ ವ್ಯಾಪ್ತಿಗೆ ಜಿಲ್ಲಾ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೋಶನ್ ಶೆಟ್ಟಿ ಮೊ.ನಂ: 9845432303, ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಗೆ ನಗರಸಭೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಯಶ್ವಂತ್ ಎನ್ ಪ್ರಭು ಮೊ.ನಂ: 9743412642, ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಗೆ ನಗರಸಭೆಯ ಕಂದಾಯ ಅಧಿಕಾರಿ ಧನಂಜಯ ಮೊ.ನಂ: 8762083841, ಉಡುಪಿ ತಾಲೂಕು ವ್ಯಾಪ್ತಿಯ ಗ್ರಾಮೀಣ ಪ್ರದೇಶಗಳಿಗೆ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಮೋಹನ್ ರಾಜ್ ಮೊ.ನಂ: 8277932515, ಮೀನುಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕ ದಿವಾಕರ್ ಮೊ.ನಂ: 9844339919 ಹಾಗೂ ಮೀನುಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕ ಸಚಿನ್ ಮೊ.ನಂ: 9731860832, ಕಾಪು ಪುರಸಭೆ ವ್ಯಾಪ್ತಿಗೆ ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ್ ನಾವಡ ಮೊ.ನಂ: 9449491456, ಕಾಪು ತಾಲೂಕು ಗ್ರಾಮೀಣ ಪ್ರದೇಶಗಳ ವ್ಯಾಪ್ತಿಗೆ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಸತೀಶ್ ಮೊ.ನಂ: 7022788764 ಹಾಗೂ ಬಂದರು ಮತ್ತು ಮೀನುಗಾರಿಕಾ ಉಪವಿಭಾಗದ ಸಹಾಯಕ ಇಂಜಿನಿಯರ್ ಜಯರಾಜ್ ಮೊ.ನಂ: 9901094519, ಬ್ರಹ್ಮಾವರ ಹೋಬಳಿ ವ್ಯಾಪ್ತಿ ಗ್ರಾಮಗಳಿಗೆ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಇಬ್ರಾಹಿಂಪುರ್ ಮೊ.ನಂ: 9480695375 ಹಾಗೂ ಲೋಕೋಪಯೋಗಿ ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಗಿರೀಶ್ ಕೆ.ಪಿ ಮೊ.ನಂ: 8073524387, ಕೋಟ ಹೋಬಳಿ ವ್ಯಾಪ್ತಿಯ ಗ್ರಾಮಗಳಿಗೆ ಬ್ರಹ್ಮಾವರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಟಿ. ನಾಯಕ್ ಮೊ.ನಂ: 9901657075 ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲೂಕು ವಿಸ್ತರಣಾಧಿಕಾರಿ ಗಣೇಶ್ ನಾಯಕ್ ಮೊ.ನಂ: 9686627488, ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯ ಗ್ರಾಮಗಳಿಗೆ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಶಿವನಾಯ್ಕ್ ಮೊ.ನಂ: 9945871473, ಕಾರ್ಕಳ ಪುರಸಭೆ ವ್ಯಾಪ್ತಿಗೆ ಪುರಸಭೆ ಮುಖ್ಯಾಧಿಕಾರಿ ರೂಪ ಶೆಟ್ಟಿ ಮೊ.ನಂ: 9886163309, ಕಾರ್ಕಳ ತಾಲೂಕು ಗ್ರಾಮೀಣ ಪ್ರದೇಶಗಳ ವ್ಯಾಪ್ತಿಗೆ ತಾಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಸಹಾಯಕ ಕಾರ್ಯದರ್ಶಿ ಗೋಪಾಲ ಕಾಕನೂರು ಮೊ.ನಂ: 9886925800, ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಗೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ವಿಜಯ ಕುಮಾರ್ ಮೊ.ನಂ: 9480732746 ಹಾಗೂ ಕಾರ್ಕಳ ನಗರ ಪೊಲೀಸ್ ಠಾಣಾ ವ್ಯಾಪ್ತಿಗೆ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಗುರುದತ್ ಮೊ.ನಂ: 8762938626, ಹೆಬ್ರಿ ತಾಲೂಕು ವ್ಯಾಪ್ತಿಯ ಗ್ರಾಮಗಳಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಉಮೇಶ್ ಟಿ.ಎಲ್ ಮೊ.ನಂ: 9480076286, ಬೈಂದೂರು ಪಟ್ಟಣ ಪಂಚಾಯತ್ ಹಾಗೂ ಶಿರೂರು ಗ್ರಾಮಗಳಿಗೆ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ನವೀನ್ ಮೊ.ನಂ: 9964955970, ಬೈಂದೂರು ಹೋಬಳಿ ವ್ಯಾಪ್ತಿಯ ಗ್ರಾಮಗಳಿಗೆ ಪಿ.ಆರ್.ಇ.ಡಿ ಸಹಾಯಕ ಕಾರ್ಯಪಾಲಕ ಅಭಿಯಂತರ ರಾಜ್‌ಕುಮಾರ್ ಮೊ.ನಂ: 9845254782 ಹಾಗೂ ಬೈಂದೂರು ವಲಯ ಅರಣ್ಯಾಧಿಕಾರಿ ರಾಜು ನಾಯ್ಕ್ ಮೊ.ನಂ: 9449363966, ಕುಂದಾಪುರ ಪುರಸಭೆ ವ್ಯಾಪ್ತಿಗೆ ಪುರಸಭೆ ಮುಖ್ಯಾಧಿಕಾರಿ ಗೋಪಾಲಕೃಷ್ಣ ಶೆಟ್ಟಿ ಮೊ.ನಂ: 9845150379, ಕುಂದಾಪುರ ತಾಲೂಕು ವಂಡ್ಸೆ ಹೋಬಳಿ ವ್ಯಾಪ್ತಿಯ ಗ್ರಾಮಗಳಿಗೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ (ಗ್ರೇಡ್-2) ರಾಘವೇಂದ್ರ ವರ್ಣೇಕರ್ ಮೊ.ನಂ: 9448981766, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ದುರ್ಗಾದಾಸ್ ಮೊ.ನಂ: 9448108399 ಹಾಗೂ ವಲಯ ಅರಣ್ಯಾಧಿಕಾರಿ ಪ್ರಭಾಕರ ಕುಲಾಲ್ ಮೊ.ನಂ: 9902008494, ಕುಂದಾಪುರ ಹೋಬಳಿಯ ಗ್ರಾಮೀಣ ಪ್ರದೇಶಗಳ ವ್ಯಾಪ್ತಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಅರಣ್ ಕುಮಾರ್ ಮೊ.ನಂ: 9480695374 ಹಾಗೂ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಶ್ವೇತಾ ಎಂ ಮೊ.ನಂ: 9606320239 ಇವರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.