Sunday, January 19, 2025
Sunday, January 19, 2025

ಕೆ.ಎಂ.ಸಿ ಮಣಿಪಾಲ- ವಿಶ್ವ ಮಧುಮೇಹ ದಿನಾಚರಣೆಯ ಆಂಗವಾಗಿ ಉಚಿತ ಪಾದದ ತಪಾಸಣೆ

ಕೆ.ಎಂ.ಸಿ ಮಣಿಪಾಲ- ವಿಶ್ವ ಮಧುಮೇಹ ದಿನಾಚರಣೆಯ ಆಂಗವಾಗಿ ಉಚಿತ ಪಾದದ ತಪಾಸಣೆ

Date:

ಮಣಿಪಾಲ: ವಿಶ್ವಾದಾದ್ಯಂತ ನವೆಂಬರ್ 14 ರಂದು ವಿಶ್ವ ಮಧುಮೇಹ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಮಧುಮೇಹಿಗಳಲ್ಲಿ ಆರೋಗ್ಯದ ಅರಿವು ಉಂಟು ಮಾಡುವುದು, ರಕ್ತದಲ್ಲಿನ ಸಕ್ಕರೆ ಪ್ರಮಾಣ ನಿಯಂತ್ರಣದಲ್ಲಿಡುವ ಕ್ರಮ, ಮಧುಮೇಹ ನಿಯಂತ್ರಣದಲ್ಲಿ ಇಡದೇ ಇದ್ದಲ್ಲಿ ಅದರಿಂದ ಆಗುವ ದುಷ್ಪರಿಣಾಮಗಳು ಇವುಗಳ ಬಗ್ಗೆ ಜಾಗ್ರತಿಯನ್ನು ಈ ದಿನದಂದು ಮೂಡಿಸಲಾಗುತ್ತದೆ.

ಈ ವರ್ಷ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಮಧುಮೇಹ ಪಾದದ ಆರೈಕೆ ಮತ್ತು ಸಂಶೋಧನಾ ವಿಭಾಗದಲ್ಲಿ ವಿಶ್ವ ಮಧುಮೇಹ ದಿನಾಚರಣೆಯ ಆಂಗವಾಗಿ ನವೆಂಬರ್ 15 ರಿಂದ 19ರ ವರೆಗೆ ಮಧುಮೇಹಿಗಳಿಗಾಗಿ ಉಚಿತ ಪಾದದ ತಪಾಸಣೆಯನ್ನು ಹಮ್ಮಿಕೊಳ್ಳಲಾಗಿದೆ.

ಪಾದದ ತೊಂದರೆ ಇರುವ ಮಣಿಪಾಲ್ ಆರೋಗ್ಯ ಕಾರ್ಡ್ ಹೊಂದಿದವರಿಗೆ 20% ಕಡಿತದಲ್ಲಿ ಚಿಕಿತ್ಸೆಯನ್ನು ನೀಡಲಾಗುವುದು. ಈ ಸಮಯದಲ್ಲಿ ಕೋವಿಡ್‍ನ ಎಲ್ಲಾ ಮುಂಜಾಗರೂಕತೆಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕಾಗಿ ವಿನಂತಿ. ಹೆಚ್ಚಿನ ಮಾಹಿತಿ ಮತ್ತು ಉಚಿತ ತಪಾಸಣೆಯನ್ನು ಕಾದಿರಿಸಲು 0820-2923054 ನಂಬರನ್ನು ಬೆಳಗ್ಗೆ 8.30- ಸಂಜೆ 4.30, ಸೋಮವಾರದಿಂದ ಶನಿವಾರ ಸಂಪರ್ಕಿಸಬಹುದಾಗಿದೆ ಎಂದು ವೈದ್ಯಕೀಯ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!