ಕಡೆಕಾರು: ಕಾರ್ಮಿಕ ಇಲಾಖೆ, ಆದರ್ಶ ಆಸ್ಪತ್ರೆ ಉಡುಪಿ ಮತ್ತು ಕಡೆಕಾರು ಹಾಗೂ ಅಂಬಲಪಾಡಿ ಗ್ರಾಮ ಪಂಚಾಯತ್ ಇದರ ಜಂಟಿ ಸಹಯೋಗದೊಂದಿಗೆ ಕಡೆಕಾರು ಮತ್ತು ಅಂಬಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನೊಂದಾಯಿತ ಕಟ್ಟಡ ಕಾರ್ಮಿಕರು ಮತ್ತು ಅವರ ಅವಲಂಬಿತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವು ಕಡೆಕಾರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.
ಕಡೆಕಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸರಸ್ವತಿ, ಉಪಾಧ್ಯಕ್ಷ ನವೀನ್ ಶೆಟ್ಟಿ, ಜಿಲ್ಲಾ ಕಾರ್ಮಿಕ ಅಧಿಕಾರಿ ಕುಮಾರ, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಗ್ರಾಮ ಕರಣಿಕರು, ಆದರ್ಶ ಆಸ್ಪತ್ರೆಯ ವೈದ್ಯರು, ಸಿಬ್ಬಂದಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.