ಉಡುಪಿ: 52ನೇ ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆಯಂದು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಉಡುಪಿ, ನೆಹರೂ ಯುವ ಕೇಂದ್ರ ಉಡುಪಿ, ಸರಕಾರಿ ಪದವಿಪೂರ್ವ ಕಾಲೇಜು ತೆಂಕನಿಡಿಯೂರು ಇವರ ಸಂಯುಕ್ತ ಆಶ್ರಯದಲ್ಲಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಅಂಗವಾಗಿ ಸ್ವಾತಂತ್ರ್ಯ ಓಟ ಹಾಗೂ ಫಿಟ್ ಇಂಡಿಯಾ ಓಟ ನಡೆಯಿತು.
ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ವಿಶ್ವನಾಥ ಕರಬ ಓಟಕ್ಕೆ ಚಾಲನೆ ನೀಡಿದರು. ಪ್ರಾಂಶುಪಾಲ ಡಾ. ಗಣನಾಥ ಎಕ್ಕಾರು ಭಾರತದ ಸ್ವಾತಂತ್ರ್ಯೋತ್ತರ ಅಭಿವೃದ್ಧಿಯ ಮಹತ್ವವನ್ನು ವಿವರಿಸಿದರು. ನೆಹರು ಯುವ ಕೇಂದ್ರದ ಪರವಾಗಿ ಹರೀಶ್ ಕೋಟ್ಯಾನ್ ಶುಭ ಹಾರೈಸಿದರು.
ಪದವಿ ಹಾಗೂ ಪದವಿಪೂರ್ವ ಕಾಲೇಜಿನ ಅಧ್ಯಾಪಕರು ಹಾಗೂ 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಓಟದಲ್ಲಿ ಪಾಲ್ಗೊಂಡಿದ್ದರು.