Sunday, September 6, 2026
Sunday, September 6, 2026

ಗಂಗೊಳ್ಳಿ: ನೀಟ್ ಸಿಇಟಿ ಮತ್ತು ಜೆಇಇ ತರಬೇತಿ ಉದ್ಘಾಟನೆ

ಗಂಗೊಳ್ಳಿ: ನೀಟ್ ಸಿಇಟಿ ಮತ್ತು ಜೆಇಇ ತರಬೇತಿ ಉದ್ಘಾಟನೆ

Date:

ಗಂಗೊಳ್ಳಿ: ಗಂಗೊಳ್ಳಿಯ ಜಿ.ಎಸ್.ವಿ.ಎಸ್ ಅಸೋಸಿಯೇಷನ್ ವತಿಯಿಂದ ಇಲ್ಲಿನ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಈ ಸಾಲಿನ ಶೈಕ್ಷಣಿಕ ವರ್ಷದ ಸಿಇಟಿ, ನೀಟ್ ಮತ್ತು ಜೆಇಇ ಪರೀಕ್ಷಾ ತರಬೇತಿ ಕಾರ್ಯಕ್ರಮ ಗಂಗೊಳ್ಳಿಯ ರೋಟರಿ ಸಭಾಂಗಣದಲ್ಲಿ ಉದ್ಘಾಟನೆಗೊಂಡಿತು.

ಕಾರ್ಕಳದ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನ ರಸಾಯನಶಾಸ್ತ್ರ ಉಪನ್ಯಾಸಕರಾದ ರಾಘವೇಂದ್ರ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವಿದ್ಯಾರ್ಥಿಗಳು ಇಲಾಖಾ ಪರೀಕ್ಷೆಗಳ ಜೊತೆಯಲ್ಲಿಯೇ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ ಮಾಡಬೇಕು. ಇಂತಹ ಪರೀಕ್ಷೆಗಳ ಯಶಸ್ಸಿನಲ್ಲಿ ಪಾಲಕರು ಪೋಷಕರು ವಿದ್ಯಾರ್ಥಿಗಳು, ಉಪನ್ಯಾಸಕರು ಮತ್ತು ತರಬೇತುದಾರರ ಪರಿಶ್ರಮ ಬಹಳಷ್ಟು ಮುಖ್ಯವಾಗುತ್ತದೆ ಎಂದು ಅವರು ತಮ್ಮ ಉದ್ಘಾಟನಾ ಭಾಷಣದಲ್ಲಿ ಹೇಳಿದರು.

ಜಿ.ಎಸ್.ವಿ.ಎಸ್ ಅಸೋಸಿಯೇಷನ್ ಕಾರ್ಯದರ್ಶಿ ಹೆಚ್. ಗಣೇಶ್ ಕಾಮತ್ ಅಧ್ಯಕ್ಷತೆಯನ್ನು ವಹಿಸಿದ್ದರು. ಸರಸ್ವತಿ ವಿದ್ಯಾಲಯ ಸಮೂಹ ಸಂಸ್ಥೆಗಳ ಕಾರ್ಯದರ್ಶಿ ಸದಾಶಿವ ನಾಯಕ್ ಪ್ರಸ್ತಾವಿಕವಾಗಿ ಮಾತನಾಡಿದರು. ಗಣಿತಶಾಸ್ತ್ರ ಉಪನ್ಯಾಸಕ ಪ್ರವೀಣ್ ಕಾಮತ್ ಅತಿಥಿಗಳನ್ನು ಪರಿಚಯಿಸಿದರು.ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.ಸಿ ಸ್ವಾಗತಿಸಿ, ಭೌತಶಾಸ್ತ್ರ ಉಪನ್ಯಾಸಕ ಕೃಷ್ಣ ಗುಜ್ಜಾಡಿ ವಂದಿಸಿದರು. ಆಂಗ್ಲಭಾಷೆ ಉಪನ್ಯಾಸಕ ಥಾಮಸ್ ಪಿ.ಎ ಕಾರ್ಯಕ್ರಮ ನಿರ್ವಹಿಸಿದರು. ವಿದ್ಯಾರ್ಥಿಗಳು ಮತ್ತು ಪೋಷಕರು ಆನ್ಲೈನ್ ಮೂಲಕ ಪಾಲ್ಗೊಂಡರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶ್ರೀ ಕೃಷ್ಣ ಮಠ: ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಅರ್ಘ್ಯ ಪ್ರದಾನ

ಉಡುಪಿ, ಸೆ.5: ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಶುಕ್ರವಾರ ಮಧ್ಯರಾತ್ರಿ ಚಂದ್ರೋದಯ...

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿಗೆ ಅವಳಿ ಪ್ರಶಸ್ತಿ

ಉಡುಪಿ, ಸೆ.4: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಸರಕಾರಿ...

ರಥಬೀದಿ ಕಾಲೇಜು: ಸಂಸ್ಕೃತ ದಿನಾಚರಣೆ

ಮಂಗಳೂರು, ಸೆ.3: ರಥಬೀದಿ ಕಾಲೇಜಿನಲ್ಲಿ ಸಂಸ್ಕೃತ ದಿನಾಚರಣೆ ಕಾರ್ಯಕ್ರಮ ಮಂಗಳೂರು ರಥಬೀದಿಯ...

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕಾಗಿ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಸೆ.4: ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಿಗೆ ಸಂಬಂಧಿಸಿದಂತೆ ಅಡಿಕೆ...
error: Content is protected !!