Wednesday, July 29, 2026
Wednesday, July 29, 2026

ಗೊಂಗೊಳ್ಳಿ: ಬಿಲ್ಲವ ಹಿತರಕ್ಷಣಾ ವೇದಿಕೆಯ ಪ್ರಥಮ ಸಭೆ

ಗೊಂಗೊಳ್ಳಿ: ಬಿಲ್ಲವ ಹಿತರಕ್ಷಣಾ ವೇದಿಕೆಯ ಪ್ರಥಮ ಸಭೆ

Date:

ಗೊಂಗೊಳ್ಳಿ: ಒಂದು ಸಮುದಾಯದ ಹಿತರಕ್ಷಣೆಗಾಗಿ ಸಂಬಂಧಪಟ್ಟ ಎಲ್ಲರೂ ಒಮ್ಮನಸ್ಸಿನಿಂದ ಕೆಲಸವನ್ನು ಮಾಡಬೇಕು. ಸಮಗ್ರ ಪರಿಶ್ರಮದಿಂದಲೇ ಸಮುದಾಯದ ಹಿತರಕ್ಷಣೆ ಸಾಧ್ಯ ಎಂದು ಬಿಲ್ಲವ ಸಮುದಾಯದ ಹಿರಿಯರಾದ ಮುತ್ತ ಕುಂದರ್ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಪಂಜುರ್ಲಿ ದೈವಸ್ಥಾನದ ವಠಾರದಲ್ಲಿ ನಡೆದ ಬಿಲ್ಲವರ ಹಿತರಕ್ಷಣಾ ವೇದಿಕೆ ಗಂಗೊಳ್ಳಿ ಇದರ ಪ್ರಥಮ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಶ್ರೀನಿವಾಸ ಜತ್ತನ್ ಮಾತನಾಡಿ, ಸಂಸ್ಥೆಗಳು ಸಮುದಾಯದ ಕೆಳವರ್ಗದ ಜನರನ್ನು ಕೂಡ ವಿಶ್ವಾಸಕ್ಕೆ ತೆಗೆದುಕೊಂಡು ಅವರಲ್ಲಿ ಜಾಗೃತಿಯನ್ನು ಮೂಡಿಸಿ ಸಮುದಾಯದ ಒಟ್ಟಾರೆ ಅಭಿವೃದ್ಧಿಗಾಗಿ ದುಡಿಯಬೇಕು ಎಂದು ಹೇಳಿದರು.

ಈ ಸಭೆಯಲ್ಲಿ 2021-22ನೇ ಸಾಲಿನ ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಜಿ. ಗೋಪಾಲ ಪೂಜಾರಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಜಿ. ಕೆ.ವೆಂಕಟೇಶ ಕೊಡೇರಿ ಮನೆ, ಕಾರ್ಯದರ್ಶಿಯಾಗಿ ಲಕ್ಷ್ಮಣ ಪೂಜಾರಿ ಜಿ ಎ. ಆರ್, ಜೊತೆ ಕಾರ್ಯದರ್ಶಿಯಾಗಿ ಅನಿಲ ಪೂಜಾರಿ ಖಜಾಂಚಿಯಾಗಿ ಮಂಜುರಾಜ್ ಗಂಗೊಳ್ಳಿ ಆಯ್ಕೆಯಾದರು. ಕಾರ್ಯಕಾರಿ ಮಂಡಳಿಯ ಸದಸ್ಯರನ್ನು ಆಯ್ಕೆ ಮಾಡಲಾಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರರಿಗೆ ಸೇವಾ ಪ್ರಶಸ್ತಿ

ಕಟಪಾಡಿ, ಜು.28: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ...

ಹೆಜಮಾಡಿ ಟೋಲ್ ಸಮಸ್ಯೆ: ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಶಾಸಕರ ಸಭೆ

ಹೆಜಮಾಡಿ, ಜು.28: ಹೆಜಮಾಡಿ ಟೋಲ್ ಸಮಸ್ಯೆಗೆ ಸಂಬಂಧಿಸಿದಂತೆ ಶಾಸಕರಾದ ಗುರ್ಮೆ ಸುರೇಶ್...

ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ: ಸಮಿತಿ ಸದಸ್ಯರಿಂದ ಧರ್ಮಸ್ಥಳ ಭೇಟಿ

ಬ್ರಹ್ಮಾವರ, ಜು.28: ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ ಇದರ ಅಭಿವೃದ್ಧಿ ಮತ್ತು...
error: Content is protected !!