ಗಂಗೊಳ್ಳಿ: ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ 182 ವಿದ್ಯಾರ್ಥಿಗಳಲ್ಲಿ 31 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 106 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಮತ್ತು 45 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.







ವಿಜ್ಞಾನ ವಿಭಾಗದಲ್ಲಿ ಪ್ರಸನ್ನಾ ಪೈ 600ಕ್ಕೆ 600 ಅಂಕಗಳನ್ನು ಪಡೆದು ಕಾಲೇಜಿಗೆ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ. ವಿಜ್ಞಾನ ವಿಭಾಗದಲ್ಲಿ ರಿಫ್ಜಾ (597) ಮತ್ತು ಸನತ್ (594) ಅಂಕ ಪಡೆದಿದ್ದಾರೆ.
ವಾಣಿಜ್ಯಶಾಸ್ತ್ರ ವಿಭಾಗದ ನಮಿತಾ ವಿ. ಶೇಟ್ 595 ಅಂಕಗಳನ್ನು ಗಳಿಸಿ ಕಾಲೇಜಿನ ವಾಣಿಜ್ಯ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ.