ಹಡಿಲು ಭೂಮಿ ಕೃಷಿ ಆಂದೋಲನದಡಿ ಕೇದಾರೋತ್ಥಾನ ಟ್ರಸ್ಟ್ ಮೂಲಕ ಗೋಪಾಲಪುರ ವಾರ್ಡಿನಲ್ಲಿ ಹಡಿಲು ಭೂಮಿಯನ್ನು ಸಾವಯವ ಕೃಷಿ ಮಾಡಲಾಗುತ್ತಿದ್ದು, ನಯಂಪಳ್ಳಿ ಮಡಿ ಮಲ್ಲಿಕಾರ್ಜುನ ದೇವಸ್ಥಾನದ ಬಳಿಯ ಹಡಿಲು ಭೂಮಿ ಕೃಷಿ ನಾಟಿ ಕಾರ್ಯಕ್ಕೆ ಮಂಗಳವಾರ ಚಾಲನೆ ನೀಡಲಾಯಿತು.
ವರುಣ್ ಪೈಪಿಂಗ್ ಸಿಸ್ಟಮ್ಸ್ ಮಾಲಕ ಎಂ. ವಿಶ್ವನಾಥ್ ಭಟ್ ಹಾಗೂ ಭಾರತ್ ಗ್ಯಾಸ್ ಏಜೆನ್ಸಿ ಮಾಲಕ ಮೋಹನ್ ತೋನ್ಸೆ ಇವರೊಂದಿಗೆ ಶಾಸಕ ಕೆ. ರಘುಪತಿ ಭಟ್ ಅವರು ಭೂಮಿಗೆ ಹಾಲನ್ನು ಅರ್ಪಿಸಿ ನೇಜಿ ನೀಡುವ ಮೂಲಕ ಯಂತ್ರ ನಾಟಿ ಕಾರ್ಯಕ್ಕೆ ಚಾಲನೆ ನೀಡಿದರು.
ನಗರಸಭಾ ಸದಸ್ಯೆ ಮಂಜುಳಾ ವಿ. ನಾಯಕ್, ನಗರಸಭೆಯ ನಾಮ ನಿರ್ದೇಶಿತ ಸದಸ್ಯ ದಿನೇಶ್ ಪೈ, ಎ.ಪಿ.ಎಂ.ಸಿ ನಾಮ ನಿರ್ದೇಶಿತ ಸದಸ್ಯ ಉಮೇಶ್ ಶೆಟ್ಟಿ, ಆಸರೆ ಚಾರಿಟೇಬಲ್ ಟ್ರಸ್ಟ್ ನ ಟ್ರಸ್ಟಿ ವಲ್ಲಭ ಭಟ್, ಕೇದಾರೋತ್ಥಾನ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿಗಳಾದ ಮುರಳಿ ಕಡೆಕಾರ್, ಕೋಶಾಧಿಕಾರಿಗಳಾದ ಕೆ. ರಾಘವೇಂದ್ರ ಕಿಣಿ, ನಯಂಪಳ್ಳಿ ಮಡಿ ಮಲ್ಲಿಕಾರ್ಜುನ ಭಜನಾ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.