Monday, February 24, 2025
Monday, February 24, 2025

ರಾಜ್ಯಪಾಲರು ಸರಕಾರ ವಜಾಗೊಳಿಸಬೇಕು: ಉಡುಪಿ ಜಿಲ್ಲಾ ಕಾಂಗ್ರೆಸ್

ರಾಜ್ಯಪಾಲರು ಸರಕಾರ ವಜಾಗೊಳಿಸಬೇಕು: ಉಡುಪಿ ಜಿಲ್ಲಾ ಕಾಂಗ್ರೆಸ್

Date:

ಉಡುಪಿ: ಯಡಿಯೂರಪ್ಪನವರ ರಾಜೀನಾಮೆ, ರಾಜ್ಯದಲ್ಲಿ ಒಂದು ಹಂತದ ಅರಾಜಕತೆಯ ಆಡಳಿತದ ಯುಗಾಂತ್ಯಕ್ಕೆ ನಾಂದಿ ಹಾಡಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಹೇಳಿದೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಯಡಿಯೂರಪ್ಪ ಒಬ್ಬ ಚಾಣಕ್ಯ ರಾಜಕಾರಣಿ. ಆದರೆ ಭ್ರಷ್ಟಾಚಾರರಹಿತ ಜನಪರ ಆಡಳಿತ ಕೊಡುತ್ತೇನೆ ಎಂದು ಹೇಳುತ್ತಲೇ, ತಾ‌ನು ಅನಿವಾರ್ಯವಾಗಿ ಸ್ವಜನ ಪಕ್ಷಪಾತದ, ಕೌಟುಂಬಿಕ ರಾಜಕಾರಣ ಒಂದೆಡೆಯಾದರೆ, ಆರ್.ಎಸ್.ಎಸ್ ಮೂಲಭೂತವಾದಿ ಸಿದ್ಧಾಂತದ ಗುಪ್ತ ಕಾರ್ಯಸೂಚಿಗೆ ತನ್ನನ್ನು ತಾನು ತೆರೆದುಕೊಳ್ಳದೆ ಇದ್ದದ್ದು, ಪಕ್ಷ ವರಿಷ್ಠರ ಅವಿಶ್ವಾಸಕ್ಕೆ ಕಾರಣವಾಗಿ ರಾಜೀನಾಮೆ ಕೊಡಬೇಕಾಗಿ ಬಂದಿರುವುದು ವಿಪರ್ಯಾಸ. ಇದು ಬಿಜೆಪಿಯಲ್ಲಿ ಎಲ್ಲವೂ ಸರಿ ಇಲ್ಲ ಎನ್ನುವುದಕ್ಕೆ ಸಾಕ್ಷಿಯಾಗಿದೆ.

ಕಳೆದ ಎರಡು ವರ್ಷಗಳಲ್ಲಿ ಕೊರೋನಾ ನಿರ್ವಹಣೆ, ಹಾಗೂ ನೆರೆ ಸಂತ್ರಸ್ತರ ನೆರವಿನಲ್ಲಿ ಸರಕಾರ ಸಂಪೂರ್ಣ ವಿಫಲಗೊಂಡಿತ್ತು. ಈ ಸರಕಾರಕ್ಕೆ ಜನಪರ ಚಿಂತನೆಯ ಕಾರ್ಯಸೂಚಿ ಇರಲಿಲ್ಲ. ವಾಸ್ತವದಲ್ಲಿ ಇಲ್ಲಿ ಸಾಂವಿಧಾನಿಕ ನಿಲುವನ್ನು ಮರೆತ, ಪಕ್ಷಾಂತರಿಗಳನ್ನು ಒಳಗೊಂಡ ಒಂದು ರೀತಿಯ ಸಮ್ಮಿಶ್ರ ಸರಕಾರ ಇತ್ತೆ ಹೊರತು ಬಿಜೆಪಿಯ ಸರಕಾರವಲ್ಲ. ಆ ನೆಲೆಯಲ್ಲಿ ರಾಜ್ಯದ ಹಿತದೃಷ್ಠಿಯಿಂದ ರಾಜ್ಯಪಾಲರು ಮಧ್ಯ ಪ್ರವೇಶಿಸಿ ಈ ಸರಕಾರವನ್ನು ವಜಾಗೊಳಿಸಿ ಹೊಸ ಸರಕಾರ ರಚನೆಗೆ ಅವಕಾಶ ಮಾಡಿಕೊಡಬೇಕು ಎಂದು ಅಶೋಕ್ ಕುಮಾರ್ ಕೊಡವೂರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!