Monday, October 21, 2024
Monday, October 21, 2024

ಅ. 3: ಕೋಟಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ

ಅ. 3: ಕೋಟಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ

Date:

ಕೋಟ, ಸೆ. 26: ಕೋಟತಟ್ಟು ಗ್ರಾಮ ಪಂಚಾಯತ್, ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ(ರಿ) ಕೋಟ, ಡಾ. ಶಿವರಾಮ ಕಾರಂತ ಟ್ರಸ್ಟ್ (ರಿ) ಉಡುಪಿ ಸಹಯೋಗದಲ್ಲಿ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್ನಲ್ಲಿ ಅಕ್ಟೋಬರ್ 3 ರಿಂದ 10 ತನಕ ನಡೆಯಲಿರುವ ಡಾ. ಶಿವರಾಮ ಕಾರಂತ ಜನ್ಮದಿನೋತ್ಸವ ಕಾರ್ಯಕ್ರಮದ ಉದ್ಟಾಟನೆಯನ್ನು ಅಕ್ಟೋಬರ್ 3 ರಂದು ಬೆಳಿಗ್ಗೆ 10.30ಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನೆರವೇರಿಸಲಿದ್ದಾರೆ. ಈ ಸಂದರ್ಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂದಾಪುರ ಶಾಸಕ ಎ ಕಿರಣ್ ಕುಮಾರ್ ಕೊಡ್ಗಿ ವಹಿಸಲಿದ್ದು. ಘನ ಉಪಸ್ಥಿತಿಯಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ,ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್, ಮುಖ್ಯ ಅತಿಥಿಗಳಾಗಿ ಕಾರ್ಕಳ ಶಾಸಕ ವಿ ಸುನೀಲ್ ಕುಮಾರ್, ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ ಶಾಸಕ ಯಶ್‌ಪಾಲ್ ಎ ಸುವರ್ಣ, ಮಾಜಿ ಸಚಿವ ಹಾಗೂ ಕರ್ನಾಟಕ ವಿಧಾನ ಪರಿಷತ್ ಶಾಸಕ ಕೋಟ ಶ್ರೀನಿವಾಸ ಪೂಜಾರಿ, ಕರ್ನಾಟಕ ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ, ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಕೆ ಸತೀಶ್ ಕುಂದರ್ ವೇದಿಕೆಯಲ್ಲಿ ಉಪಸ್ಥಿತರಿರಲಿದ್ದಾರೆ ಎಂದು ಡಾ. ಶಿವರಾಮ ಕಾರಂತ ಪ್ರತಿಷ್ಠಾನ (ರಿ.) ಕೋಟದ ಕಾರ್ಯಾಧ್ಯಕ್ಷ ಆನಂದ್ ಸಿ ಕುಂದರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಜ್ಯಮಟ್ಟದ ಕುಸ್ತಿ ಪಂದ್ಯಾಟ: ಆಳ್ವಾಸ್ ಕಾಲೇಜಿಗೆ 5 ಪದಕ

ಮೂಡಬಿದಿರೆ, ಅ.21: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಬೆಳಗಾವಿ ಜಿಲ್ಲೆ ಮತ್ತು...

ಪೋಷಕರ-ಮಕ್ಕಳ ಬಾಂಧವ್ಯ ಬಲಪಡಿಸಲು ಸಂಭಾಷಣೆ ಮುಖ್ಯ: ಡಾ. ಬಾಲಕೃಷ್ಣ ಮಡ್ಡೋಡಿ

ಕಾಪು, ಅ.21: ಕಾಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪೋಷಕ- ಶಿಕ್ಷಕ...

ವಿದ್ಯಾರ್ಥಿಗಳ‌ ಫಲಿತಾಂಶ ಹೆಚ್ಚಿಸಲು ‘ಶಿಕ್ಷಣ ಕೋಪೈಲಟ್‌’ ಆ್ಯಪ್‌

ಬೆಂಗಳೂರು, ಅ.21: ಶಾಲಾ ಶಿಕ್ಷಣದಲ್ಲಿ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶವನ್ನು ಹೆಚ್ಚಿಸುವ ಉದ್ದೇಶದಿಂದ...

ತುಮಕೂರಿನಲ್ಲಿ ಏಷ್ಯಾದ ಅತಿದೊಡ್ಡ ಕೈಗಾರಿಕಾ ಪ್ರದೇಶ ನಿರ್ಮಾಣ

ಬೆಂಗಳೂರು, ಅ.21: 20 ಸಾವಿರ ಎಕರೆ ವ್ಯಾಪ್ತಿಯಲ್ಲಿ ಏಷ್ಯಾದ ಅತಿದೊಡ್ಡ ಕೈಗಾರಿಕಾ...
error: Content is protected !!