Friday, January 24, 2025
Friday, January 24, 2025

ಗಂಗೊಳ್ಳಿಯಲ್ಲಿ ಗೂಡುದೀಪ ಸ್ಪರ್ಧೆ

ಗಂಗೊಳ್ಳಿಯಲ್ಲಿ ಗೂಡುದೀಪ ಸ್ಪರ್ಧೆ

Date:

ಕುಂದಾಪುರ: ಪ್ರತಿಯೊಂದು ಸಂಪ್ರದಾಯಗಳ ಆಚರಣೆಯ ಹಿಂದೆ ವೈಜ್ಞಾನಿಕ ಹಿನ್ನೆಲೆ ಇರುತ್ತದೆ. ಅದನ್ನು ಅರ್ಥಮಾಡಿಕೊಳ್ಳುವಲ್ಲಿ ಹೆಚ್ಚಿನ ಪ್ರಯತ್ನವನ್ನು ನಾವು ಮಾಡಬೇಕಿದೆ. ಗೂಡುದೀಪ ಸ್ಪರ್ಧೆಯಂತಹ ಕಾರ್ಯಕ್ರಮಗಳು ನಮ್ಮಲ್ಲಿನ ಕಲೆಯನ್ನು ಉದ್ದೀಪನಗೊಳಿಸಲು ನೆರವಾಗುತ್ತವೆ ಎಂದು ಖ್ಯಾತ ಸ್ಯಾಕ್ಸೋಫೋನ್ ವಾದಕ ಉಮಾನಾಥ್ ದೇವಾಡಿಗ ಹೇಳಿದರು.

ಅವರು ಗಂಗೊಳ್ಳಿಯ ಡಾ. ಬಿ.ಆರ್. ಅಂಬೇಡ್ಕರ್ ಯುವಕ ಮಂಡಲ ದೀಪಾವಳಿಯ ಅಂಗವಾಗಿ ಆಯೋಜಿಸಿದ್ದ ಗೂಡುದೀಪ ಸ್ಪರ್ಧೆಯ ಕಾರ್ಯಕ್ರಮದಲ್ಲಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಉಪನ್ಯಾಸಕ ಬರಹಗಾರ ನರೇಂದ್ರ ಎಸ್ ಗಂಗೊಳ್ಳಿ ಮಾತನಾಡಿ, ಇಂತಹ ಸ್ಪರ್ಧೆಗಳ ಮೂಲಕ ನಮ್ಮ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಮಹತ್ತರ ಕಾರ್ಯವಾಗುತ್ತದೆ. ಹೆಚ್ಚು ಹೆಚ್ಚು ಸಂಸ್ಥೆಗಳು ಈ ನಿಟ್ಟಿನಲ್ಲಿ ಗಮನಹರಿಸಬೇಕು ಎಂದು ಹೇಳಿದರು.

ಡಾ. ಬಿ.ಆರ್.ಅಂಬೇಡ್ಕರ್ ಯುವಕ ಮಂಡಲದ ಗೌರವಾಧ್ಯಕ್ಷರಾದ ಭಾಸ್ಕರ್ ಎಚ್. ಜಿ ಸ್ವಾಗತಿಸಿ, ಉಪಾಧ್ಯಕ್ಷ ಕಿರಣ್ ವಂದಿಸಿದರು. ಗೂಡುದೀಪ ಸ್ಪರ್ಧೆಯಲ್ಲಿ ನಾಗಲಕ್ಷ್ಮಿ, ನವೀನ್ ಹಾಗೂ ನಟರಾಜ ಕ್ರಮವಾಗಿ ಪ್ರಥಮ ದ್ವಿತೀಯ ಮತ್ತು ತೃತೀಯ ಬಹುಮಾನಗಳನ್ನು ಪಡೆದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜ.25: ಉಡುಪಿ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ

ಉಡುಪಿ, ಜ.24: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆ ಉಡುಪಿ...

ಹಿರಿಯಡಕದ ಕರ್ನಾಟಕ ಪಬ್ಲಿಕ್ ಶಾಲೆಯನ್ನು ಮಾದರಿ ಶಾಲೆಯನ್ನಾಗಿ ಪರಿವರ್ತಿಸಲಾಗುವುದು: ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷ ಕೆ. ನಾಗಣ್ಣ ಗೌಡ

ಉಡುಪಿ, ಜ.24: ಹಿರಿಯಡಕದ ಕರ್ನಾಟಕ ಪಬ್ಲಿಕ್ ಶಾಲೆಯನ್ನು ಮಾದರಿ ಶಾಲೆಯನ್ನಾಗಿ ಪರಿವರ್ತಿಸಲಾಗುವುದು...

ಸುಪ್ರೀಮ್ ಕೋರ್ಟಿನ ನ್ಯಾಯಮೂರ್ತಿಗಳಿಗೆ ಆಹ್ವಾನ

ಉಡುಪಿ, ಜ.24: ಸುಪ್ರೀಮ್ ಕೋರ್ಟಿನ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಇವರನ್ನು ನವದೆಹಲಿಯ...

ಸಂಜೆಯ ಆಕಾಶ ಈಗ ವೀಕ್ಷಣೆಗೆ ಯೋಗ್ಯ

ಈ ಕೆಲವು ದಿನಗಳು ಸಂಜೆಯ ಆಕಾಶದಲ್ಲಿ ಬರಿಗಣ್ಣಿಗೆ ನಾಲ್ಕು ಗ್ರಹಗಳು ಕಾಣುತ್ತಿವೆ....
error: Content is protected !!