Sunday, January 19, 2025
Sunday, January 19, 2025

‘ಹೇಳದೆ ಹೋದ ಮಗಳಿಗೆ’ ಗುರುಕುಲ ಸಾಹಿತ್ಯ ಶರಭ ಪ್ರಶಸ್ತಿ

‘ಹೇಳದೆ ಹೋದ ಮಗಳಿಗೆ’ ಗುರುಕುಲ ಸಾಹಿತ್ಯ ಶರಭ ಪ್ರಶಸ್ತಿ

Date:

ಕುಂದಾಪುರ: ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ವಾಣಿಜ್ಯಶಾಸ್ತ್ರ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿರುವ ತಮ್ಮ ವೈವಿಧ್ಯಮಯ ಬರಹಗಳ ಮೂಲಕ ಪರಿಚಿತರಾಗಿರುವ ಯುವ ಬರಹಗಾರ ನರೇಂದ್ರ ಎಸ್. ಗಂಗೊಳ್ಳಿ ಅವರ ಚೊಚ್ಚಲ ಕೃತಿ ‘ಹೇಳದೆ ಹೋದ ಮಗಳಿಗೆ’ ಪುಸ್ತಕಕ್ಕೆ ತುಮಕೂರಿನ ಗುರುಕುಲ ಕಲಾ ಪ್ರತಿಷ್ಠಾನದ ವತಿಯಿಂದ ಕೊಡಮಾಡುವ ಗುರುಕುಲ ಸಾಹಿತ್ಯ ಶರಭ ಪ್ರಶಸ್ತಿ ಲಭಿಸಿದೆ.

ವೈವಿಧ್ಯಮಯವಾದ ಪ್ರೇರಣಾತ್ಮಕ ಅಂಕಣ ಬರಹಗಳನ್ನು ಒಳಗೊಂಡಿರುವ ಈ ಕೃತಿ ಓದುಗ ವಲಯದಲ್ಲಿ ಬಹಳಷ್ಟು ಜನಪ್ರಿಯತೆ ಪಡೆದಿದೆ. ತುಮಕೂರಿನಲ್ಲಿ ನಡೆಯಲಿರುವ ಪ್ರಥಮ ಗುರುಕುಲ ಕಲಾ ಸಾಹಿತ್ಯ ಸಮ್ಮೇಳನದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಗುರುಕುಲ ಕಲಾ ಪ್ರತಿಷ್ಠಾನ ರಾಜ್ಯ ಘಟಕ ತುಮಕೂರು ರಾಜ್ಯಾಧ್ಯಕ್ಷರಾದ ಹುಲಿಯೂರುದುರ್ಗ ಲಕ್ಷ್ಮೀನಾರಾಯಣ ಹಾಗೂ ರಾಜ್ಯ ಕಾರ್ಯಾಧ್ಯಕ್ಷರಾದ ಡಾ. ಶಿವರಾಜ್ ಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಾನವೀಯ ಮೌಲ್ಯಗಳೇ ವಿವೇಕಾನಂದರ ತತ್ವ: ಡಾ. ನಿಕೇತನ

ಉಡುಪಿ, ಜ.18: ಶಾಂತಿ ಮತ್ತು ಪ್ರೀತಿಯ ಮೂಲಕ ಮಾನವ ಜನಾಂಗ ಉತ್ತಮ...

ತಾಂತ್ರಿಕ ಸಹಾಯಕರ ಹುದ್ದೆ: ಅರ್ಜಿ ಅಹ್ವಾನ

ಉಡುಪಿ, ಜ.19: ಕೃಷಿ ಇಲಾಖೆಯ ವತಿಯಿಂದ ಅನುಷ್ಟಾನಗೊಳಿಸುತ್ತಿರುವ ಆಹಾರ ಮತ್ತು ಪೌಷ್ಟಿಕ...

ಜ. 19-21 ರವರೆಗೆ ನಾಟಕೋತ್ಸವ ಪ್ರದರ್ಶನ

ಉಡುಪಿ, ಜ.19: ಕಾರ್ಕಳ ಯಕ್ಷ ರಂಗಾಯಣ ಇವರ ವತಿಯಿಂದ ಜನವರಿ 19...

ಇಂದ್ರಾಳಿ ಮೇಲ್ಸೇತುವೆ ಕಾಮಗಾರಿ ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ

ಉಡುಪಿ, ಜ.19: ರಾಷ್ಟ್ರೀಯ ಹೆದ್ದಾರಿ 169 ಎ ರ ಉಡುಪಿ ನಗರ...
error: Content is protected !!