ಉಡುಪಿ ವಿಧಾನಸಭಾ ಕ್ಷೇತ್ರದಾದ್ಯಂತ ಹಮ್ಮಿಕೊಂಡಿರುವ ಹಡಿಲು ಭೂಮಿ ಕೃಷಿ ಆಂದೋಲನದಡಿ ಕೆಮ್ಮಣ್ಣು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಡುತೋನ್ಸೆ ಯಾಳಕೆರೆ ಮನೆ ಬಳಿ 15 ಎಕರೆ ಹಡಿಲು ಕೃಷಿ ಭೂಮಿಯ ನಾಟಿ ಕಾರ್ಯಕ್ಕೆ ಶನಿವಾರ ಚಾಲನೆ ನೀಡಲಾಯಿತು.
ಸೋದೆ ಮಠದ ಶ್ರೀ ಶ್ರೀ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದರು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್ ವೈ ಅವರೊಂದಿಗೆ ಶಾಸಕ ಕೆ. ರಘುಪತಿ ಭಟ್ ರವರು ಕೋಣಗಳಿಗೆ ಪೂಜೆ ಮಾಡಿ ನಾಟಿ ಕಾರ್ಯಕ್ಕೆ ಚಾಲನೆ ನೀಡಿದರು. ಸೋದೆ ಶ್ರೀಪಾದರು ಹಾಗೂ ಶಾಸಕ ಕೆ. ರಘುಪತಿ ಭಟ್ ಸ್ಥಳೀಯರೊಂದಿಗೆ ಗದ್ದೆಗಳಿದು ನೇಜಿ ನಟ್ಟರು.
ಈ ಸಂದರ್ಭದಲ್ಲಿ ಕೆಮ್ಮಣ್ಣು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಲತಾ, ಗಣಪತಿ ವ್ಯವಸಾಯ ಸಹಕಾರಿ ಸಂಘ ಅಧ್ಯಕ್ಷರಾದ ಸತೀಶ್ ಶೆಟ್ಟಿ, ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ರೆಹಮತ್ತುಲ್ಲಾ, ಕೇದಾರೋತ್ಥಾನ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿಗಳಾದ ಮುರಳಿ ಕಡೆಕಾರ್, ಕೋಶಾಧಿಕಾರಿಗಳಾದ ರಾಘವೇಂದ್ರ ಕಿಣಿ ಹಾಗೂ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಶಿವಮೊಗ್ಗ ಮತ್ತು ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಬ್ರಹ್ಮಾವರದ ಹಿರಿಯ ಕ್ಷೇತ್ರ ಅಧಿಕಾರಿಗಳಾದ ಶಂಕರ್, ಕೆಮ್ಮಣ್ಣು ಗ್ರಾಮ ಪಂಚಾಯತ್ ಸದಸ್ಯರು, ಸ್ಥಳೀಯರು ಉಪಸ್ಥಿತರಿದ್ದರು.