Tuesday, September 8, 2026
Tuesday, September 8, 2026

ತುಳು ಭಾಷೆಯನ್ನು 8 ನೇ ಪರಿಚ್ಛೇದಕ್ಕೆ ಸೇರಿಸುವಂತೆ ದ.ಕ, ಉಡುಪಿ, ಕಾಸರಗೋಡು ಭಾಗದ ಜನರು ಕೂಗು ಸರಕಾರದ ಗಮನದಲ್ಲಿದೆಯೇ?: ಸಂಸತ್ತಿನಲ್ಲಿ ಪ್ರಶ್ನೆ ಕೇಳಿದ ಸಂಸದ ಕ್ಯಾ. ಬ್ರಿಜೇಶ್ ಚೌಟ

ತುಳು ಭಾಷೆಯನ್ನು 8 ನೇ ಪರಿಚ್ಛೇದಕ್ಕೆ ಸೇರಿಸುವಂತೆ ದ.ಕ, ಉಡುಪಿ, ಕಾಸರಗೋಡು ಭಾಗದ ಜನರು ಕೂಗು ಸರಕಾರದ ಗಮನದಲ್ಲಿದೆಯೇ?: ಸಂಸತ್ತಿನಲ್ಲಿ ಪ್ರಶ್ನೆ ಕೇಳಿದ ಸಂಸದ ಕ್ಯಾ. ಬ್ರಿಜೇಶ್ ಚೌಟ

Date:

ನವದೆಹಲಿ, ಆ.9: ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸುವ ಬಗ್ಗೆ ಸಂಸತ್ತಿನಲ್ಲಿ ಸಂಸದ ಕ್ಯಾ.ಬ್ರಿಜೇಶ್ ಚೌಟ ಪ್ರಶ್ನೆ ಎತ್ತಿದರು. ತುಳು ಭಾಷೆಯನ್ನು 8 ನೇ ಪರಿಚ್ಛೇದಕ್ಕೆ ಸೇರಿಸುವ ಬೇಡಿಕೆಯ ಪ್ರಸ್ತುತ ಹಂತ ಹಾಗೂ ತುಳು ಭಾಷೆಯನ್ನು 8 ನೇ ಪರಿಚ್ಛೇದಕ್ಕೆ ಸೇರಿಸುವಂತೆ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಭಾಗದ ಜನರು ಕೂಗು ಸರಕಾರದ ಗಮನದಲ್ಲಿ ಇದೆಯೇ? ಮತ್ತು ಸರ್ಕಾರ ಈ ಬಗೆಗೆ ಯಾವೆಲ್ಲಾ ಕ್ರಮ ಕೈಗೊಂಡಿದೆ ಎಂದು ಸಂಸದ ಚೌಟ ಕೇಳಿದರು.

ಪಹ್ವಾ (1996) ಮತ್ತು ಸೀತಾಕಾಂತ್ ಮೊಹಾಪತ್ರ (2003) ಸಮಿತಿಯ ಪ್ರಯತ್ನಗಳನ್ನು ಗಮನದಲ್ಲಿಟ್ಟುಕೊಂಡು ಎಂಟನೇ ಪರಿಚ್ಛೇದದ ಅಡಿಯಲ್ಲಿ ಹೆಚ್ಚಿನ ಭಾಷೆಗಳ ಸೇರ್ಪಡೆಗಾಗಿ ವಿನಂತಿಗಳನ್ನು ಪರಿಗಣಿಸಲು ಮಾಡಲಾದ ಪ್ರಯತ್ನಗಳ ಕುರಿತು ಸಂಸದರು ಮಾಹಿತಿ ಕೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ನಿತ್ಯಾನಂದ ರೈ ಅವರು ತುಳು ಸೇರಿದಂತೆ ಇನ್ನಿತರ ಹಲವಾರು ಭಾಷೆಗಳು ಎಂಟನೇ ಶೆಡ್ಯೂಲ್‌ಗೆ ಸೇರಿಸಲು ಕಾಲಕಾಲಕ್ಕೆ ಬೇಡಿಕೆಗಳು ಬರುತ್ತಿವೆ, ಯಾವುದೇ ಭಾಷೆಯನ್ನು ಸಂವಿಧಾನದ ಎಂಟನೇ ಶೆಡ್ಯೂಲ್‌ಗೆ ಸೇರಿಸಲು ಯಾವುದೇ ಸ್ಥಿರ ಮಾನದಂಡಗಳಿಲ್ಲ, ಉಪಭಾಷೆಗಳು ಮತ್ತು ಭಾಷೆಗಳ ವಿಕಸನವು ಕ್ರಿಯಾತ್ಮಕ ಪ್ರಕ್ರಿಯೆಯಾಗಿದ್ದು ಇದರ ಅಭಿವೃದ್ಧಿಯು ಸಾಮಾಜಿಕ – ಸಾಂಸ್ಕೃತಿಕ, ಆರ್ಥಿಕ ಮತ್ತು ರಾಜಕೀಯ ಬೆಳವಣಿಗೆಗಳಿಂದ ಪ್ರಭಾವಿತವಾಗಿರುತ್ತದೆ.

ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳ್ಳಲು ಭಾಷೆಗಳಿಗೆ ಯಾವುದೇ ಮಾನದಂಡವನ್ನು ನಿಗದಿಪಡಿಸುವುದು ಕಷ್ಟಕರವಾಗಿದೆ. ಪಹ್ವಾ (1996) ಮತ್ತು ಸೀತಾಕಾಂತ್ ಮೊಹಾಪತ್ರ (2003) ಸಮಿತಿಗಳ ಮೂಲಕ ಇಂತಹ ನಿಶ್ಚಿತ ಮಾನದಂಡಗಳನ್ನು ವಿಕಸನಗೊಳಿಸಲು ಹಿಂದಿನ ಪ್ರಯತ್ನಗಳು ಅನಿರ್ದಿಷ್ಟವಾಗಿವೆ, ಇತರ ಭಾಷೆಗಳನ್ನು 8ನೇ ಶೆಡ್ಯೂಲ್‌ಗೆ ಸೇರಿಸುವ ಭಾವನೆಗಳು ಮತ್ತು ಅವಶ್ಯಕತೆಗಳ ಬಗ್ಗೆ ಸರ್ಕಾರವು ಜಾಗೃತವಾಗಿದೆ ಎಂದು ಸಚಿವರು ಲಿಖಿತ ಉತ್ತರವನ್ನು ನೀಡಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿಯಲ್ಲಿ ಕೇರಳದ ಸಾಂಸ್ಕೃತಿಕ ವೈಭವ: ಓಣಂ ಸಂಭ್ರಮಕ್ಕೆ ಮನಸೋತ ಕರಾವಳಿಗರು

ಉಡುಪಿ, ಸೆ.7: ಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ಮಹೋತ್ಸವದ ಸಂಭ್ರಮದ ನಡುವೆಯೇ...

ಕ್ರಿಯೇಟಿವ್ ಗುರುದೇವೋಭವ: ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಭಾಗಿ

ಕಾರ್ಕಳ, ಸೆ.7: ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಕ್ರಿಯೇಟಿವ್...

ಸರಸ್ವತಿ ವಿದ್ಯಾಲಯದಲ್ಲಿ ಇ ವೇಸ್ಟ್ ಮ್ಯಾನೇಜ್ಮೆಂಟ್ ಕಾರ್ಯಕ್ರಮ

ಗಂಗೊಳ್ಳಿ, ಸೆ.7: ಇ ತ್ಯಾಜ್ಯಗಳನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡುವುದು ಹೇಗೆ...

ತ್ರಿಶಾ ವಿದ್ಯಾ ಪಿಯು ಕಾಲೇಜು ಕಟಪಾಡಿ: ಕಾಪು ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಕಟಪಾಡಿ, ಸೆ.7: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ತ್ರಿಶಾ...
error: Content is protected !!