ಉಡುಪಿ: ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಬೆಂಗಳೂರು ಹಾಗೂ ಆದರ್ಶ ಆಸ್ಪತ್ರೆ, ಉಡುಪಿ ಇವರ ಸಹಯೋಗದೊಂದಿಗೆ ಪ್ರಿವೆನ್ಟೀವ್ ಹೆಲ್ತ್ ಕೇರ್ ಟ್ರೈನಿಂಗ್ ಎಂಡ್ ಚೆಕ್‌ಅಪ್ ಯೋಜನೆಯಡಿ, ಜಿಲ್ಲೆಯ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವರ ಅವಲಂಬಿತರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಹಮ್ಮಿಕೊಳ್ಳಲಾಗಿರುತ್ತದೆ.
ಮಾ. 12 ರಂದು ಬಾರ್ಕೂರು ಬಿಲ್ಲವ ಸಂಘದಲ್ಲಿ ಬಾರ್ಕೂರು, ಯಡ್ತಾಡಿ ಹಾಗೂ ಸುತ್ತಮುತ್ತಲಿನ ಪ್ರದೇಶದ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ, 13 ರಂದು ಸಾಲಿಗ್ರಾಮ ಗಣೇಶ ಕಲ್ಯಾಣ ಮಂಟಪದಲ್ಲಿ ಪಾಂಡೇಶ್ವರಿ, ಐರೋಡಿ, ಸಾಲಿಗ್ರಾಮ, ಕೋಟತಟ್ಟು, ಕೋಡಿ ಹಾಗೂ ಸುತ್ತಮುತ್ತಲಿನ ಪ್ರದೇಶದ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ, 15 ರಂದು ತೆಂಕನಿಡಿಯೂರು ಪ್ರಥಮ ದರ್ಜೆ ಕಾಲೇಜಿನಲ್ಲಿ ಕೆಮ್ಮಣ್ಣು, ಕಲ್ಯಾಣಪುರ, ತೆಂಕನಿಡಿಯೂರು, ಬಡಾನಿಡಿಯೂರು ಹಾಗೂ ಸುತ್ತಮುತ್ತಲಿನ ಪ್ರದೇಶದ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ, ಮಾ. 16 ರಂದು ಹಾವಂಜೆ ಬಿಲ್ಲವ ಸಂಘದಲ್ಲಿ ಉಪ್ಪೂರು, ಹಾವಂಜೆ, ಕುಕ್ಕೆಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶದ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ, 17 ರಂದು ಹಿರಿಯಡ್ಕ ಅಂಬೇಡ್ಕರ್ ಭವನದಲ್ಲಿ ಕೋಡಿಬೆಟ್ಟು, ಬೊಮ್ಮರಬೆಟ್ಟು ಹಾಗೂ ಸುತ್ತಮುತ್ತಲಿನ ಪ್ರದೇಶದ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ, 18 ರಂದು ಸಾಲಿಕೇರಿ ಅಂಬೇಡ್ಕರ್ ಭವನದಲ್ಲಿ ಹಾರಾಡಿ, ಬೈಕಾಡಿ, ವಾರಂಬಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶದ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಹಾಗೂ ಮಾ.20 ರಂದು ಕಾಪು ಜೇಸಿ ಜಗದೀಶ ಆಚಾರ್ಯ ವೇದಿಕೆಯಲ್ಲಿ ಕಾಪು, ಉಳಿಯಾರಗೋಳಿ, ಬೆಳಪು, ಕಳತ್ತೂರು, ಮಲ್ಲಾರು, ಉಚ್ಚಿಲ, ಇನ್ನಂಜೆ, ಪಣಿಯೂರು ಹಾಗೂ ಸುತ್ತಮುತ್ತಲಿನ ಪ್ರದೇಶದ ಎಲ್ಲಾ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ಆರೋಗ್ಯ ಶಿಬಿರ ನಡೆಯಲಿದೆ.
ಜಿಲ್ಲೆಯ ಎಲ್ಲಾ ತಾಲೂಕುಗಳ 18 ರಿಂದ 60 ವರ್ಷದೊಳಗಿನ ನೋಂದಾಯಿತ ಕಟ್ಟಡ ಕಾರ್ಮಿಕರು ಮತ್ತು ಅವರ ಅವಲಂಬಿತರು, ಕಟ್ಟಡ ಕಾರ್ಮಿಕ ಗುರುತಿನ ಚೀಟಿಯ ಜೆರಾಕ್ಸ್ ಪ್ರತಿ, ಆಧಾರ್ ಗುರುತಿನ ಚೀಟಿಯ ಜೆರಾಕ್ಸ್ ಹಾಗೂ ರೇಷನ್ ಕಾರ್ಡ್ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಿ ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಕಾರ್ಮಿಕ ಅಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.