Sunday, January 19, 2025
Sunday, January 19, 2025

ಉದ್ಯಾವರ- ಆರೋಗ್ಯ ಶಿಬಿರ

ಉದ್ಯಾವರ- ಆರೋಗ್ಯ ಶಿಬಿರ

Date:

ಉಡುಪಿ: ಹಿರಿಯ ನಾಗರಿಕರ ಕನಸಿನ ಮನೆ ವೃದ್ದಾಶ್ರಮ ಉದ್ಯಾವರದಲ್ಲಿ ಇಂದು ಉಚಿತ ಆರೋಗ್ಯ ಶಿಬಿರ ನಡೆಯಿತು. ಜಯಂಟ್ಸ್ ಗ್ರೂಪ್ ಬ್ರಹ್ಮಾವರ, ಭಾರತೀಯ ಜನ್ ಔಷಧ ಕೇಂದ್ರ, ವೈದ್ಯಕೀಯ ಪ್ರತಿನಿಧಿಗಳ ಸಂಘ ಹಾಗೂ ಶಿವಾನಿ ಡಯಾಗ್ನೋಸ್ಟಿಕ್ ಸೆಂಟರ್ ಉಡುಪಿ ಇದರ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಲ್ಲಾ ನಿವಾಸಿಗಳಿಗೆ ಔಷಧ ಮತ್ತು ವೈದ್ಯಕೀಯ ಉಪಕರಣ ನೀಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಜಯಂಟ್ಸ್ ಫೆಡರೇಶನ್ ಮಾಜಿ ಅಧ್ಯಕ್ಷ ಮಧುಸೂಧನ್ ಹೇರೂರು, ನಾವು ಸಮಾಜದಲ್ಲಿ ಸೇವೆ ಮಾಡುವ ಮೂಲಕ ಜೀವನದಲ್ಲಿ ಸಾಧನೆ ಮಾಡಬಹುದು. ಉತ್ತಮ ಕೆಲಸ ದೇವ ಸೇವೆಗೆ ಸರಿ ಎಂದರು. ಶಿವಾನಿ ಡಯಾಗ್ನೋಸ್ಟಿಕ್ ಸೆಂಟರ್ ಮುಖ್ಯಸ್ಥ ಡಾ| ಶಿವಾನಂದ ನಾಯಕ್ ಆರೋಗ್ಯ ಮಾಹಿತಿ ನೀಡಿದರು.

ವೈದ್ಯಕೀಯ ಪ್ರತಿನಿಧಿ ಸಂಘದ ಕಾರ್ಯದರ್ಶಿ ಪ್ರಸನ್ನ ಕಾರಂತ್, ಅಣ್ಣಯ್ಯದಾಸ್, ಜೋಸೆಫ್, ಆಶ್ರಮದ ಸೀಮಾ, ಶಿವಾನಂದ ಮುಂತಾದವರಿದ್ದರು. ಜಯಂಟ್ಸ್ ಅಧ್ಯಕ್ಷ ಸುಂದರ ಪೂಜಾರಿ ಮೂಡುಕುಕ್ಕುಡೆ ವಂದಿಸಿದರು. ರಾಘವೇಂದ್ರ ಪ್ರಭು ಕರ್ವಾಲು ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!